ಅ.16 ರಂದು ಯುವ ಜೆಡಿಎಸ್ ಪ್ರತಿಭಟನೆ ಇಲ್ಲ

October 14, 2020

ಮಡಿಕೇರಿ ಅ.14 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ಜಿಲ್ಲಾ ಜಾತ್ಯತೀತ ಜನತಾದಳದ ಯುವ ಘಟಕದ ವತಿಯಿಂದ ಅ.16 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಯುವ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಾಶಿರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮತ್ತು ಕೊವೀಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪ್ರತಿಭಟನೆ ನಡೆಸುತ್ತಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.