ಅ.16 ಮತ್ತು 17 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

14/10/2020

ಮಡಿಕೇರಿ ಅ.14 : ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಅ. 16 ಮತ್ತು 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಅ. 16 ರಂದು ರಾತ್ರಿ 7.30 ಗಂಟೆಗೆ ಭಾಗಮಂಡಲದಲ್ಲಿ ತೀರ್ಥೋದ್ಭವ ಕುರಿತಂತ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಅ. 17 ರಂದು 7.03 ಗಂಟೆಗೆ ಜರುಗುವ ತಲಕಾವೇರಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ಮಡಿಕೇರಿ ಲೋಕೋಪಯೋಗಿ ಇಲಾಖೆಯ ವಿಭಾಗ ಮತ್ತು ಉಪ ವಿಭಾಗ ಕಚೇರಿ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30 ಗಂಟೆಗೆ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.