ಅ. 18 ರಂದು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

14/10/2020

ಮಡಿಕೇರಿ ಅ.14 : ಪ್ರಸಕ್ತ (2020) ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಅಕ್ಟೋಬರ್ 18 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು, ಸಂತ ಜೋಸೆಫರ ಪ್ರೌಢ ಶಾಲೆ, ಸಂತ ಜೋಸೆಫರ ಪಿ.ಯು ಕಾಲೇಜು, ಮತ್ತು ಸರ್ಕಾರಿ ಪಿ.ಯು ಕಾಲೇಜು ಸೇರಿದಂತೆ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪೊಲೀಸ್ ಅಂತರ್‍ಜಾಲದಲ್ಲಿ (Police Website www.ksp.gov.in) ಪಡೆದು ಅದರಲ್ಲಿ ನಿಗದಿಪಡಿಸಿರುವ ಭಾವಚಿತ್ರವಿರುವ ದಾಖಲಾತಿಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.