ಅತ್ಯಾಚಾರ ಪ್ರಕರಣ : ಪಾಲಿಬೆಟ್ಟದಲ್ಲಿ ಸಮಾನ ಮನಸ್ಕರಿಂದ ಪ್ರತಿಭಟನೆ : ಯುಪಿ ಸರ್ಕಾರ ವಜಾಕ್ಕೆ ಆಗ್ರಹ

14/10/2020

ಸಿದ್ದಾಪುರ : ಉತ್ತರ ಪ್ರದೇಶದ ಹಥಾರಸ್ ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸಮಾನ ಮನಸ್ಕರ ವೇದಿಕೆ ಪಾಲಿಬೆಟ್ಟದಲ್ಲಿ ಪ್ರತಿಭಟನೆ ನಡೆಸಿತು.
ಪಾಲಿಬೆಟ್ಟದ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಯೋಗಿ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದಭ ಹಿರಿಯ ಹೋರಾಟಗಾರ ವಿ.ಪಿ ಶಶಿಧರ್ ಮಾತನಾಡಿ ವಿಶ್ವವೇ ತಲೆತಗ್ಗಿಸುವಂಥ ಘಟನೆ ದೇಶದಲ್ಲಿ ನಡೆದಿದ್ದು, ಆರೋಪಿಗಳ ರಕ್ಷಣೆಗೆ ನಿಂತಿರುವ ಯೋಗಿ ಸರ್ಕಾರ ಕೂಡಲೇ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ದಲಿತ ಅಮಾಯಕ ಹೆಣ್ಣುಮಕ್ಕಳ ಮೇಲೆ ನಿರಂತರವಾಗಿ ಇಂಥ ಘಟನೆಗಳು ನಡೆಯುತ್ತಿದ್ದು, ಸರ್ಕಾರಗಳಿಂದ ರಕ್ಷಣೆ ಇಲ್ಲದಂತಾಗಿದೆ ಎಂದು ಟೀಕಿಸಿದರು.
ಸಮಾನ ಮನಸ್ಕರ ವೇದಿಕೆಯ ಪ್ರಮುಖ ಮಹದೇವ್ ಮಾತನಾಡಿ, ದೇಶದಲ್ಲಿ ಹಲವೆಡೆ ಅತ್ಯಾಚಾರ ಕೊಲೆಯಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದು,
ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಮೋದಿ ಹಾಗೂ ಯೋಗಿ ಸರ್ಕಾರ ಹಿಟ್ಲರ್ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಮಾತನಾಡಿ ಬಿಜೆಪಿ ಸರ್ಕಾರ ಬಂದ ಮೇಲೆ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದರು.
ಸಾಮಾಜಿಕ ಕಾರ್ಯಕರ್ತ ನಾಸಿರ್, ಸಮಾನ ಮನಸ್ಕರ ವೇದಿಕೆಯ ಪ್ರಮುಖರಾದ ಅಬ್ದುಲ್ ನಾಸೀರ್, ಅಬೀದ್, ರಾಮದಾಸ್, ವೆಂಕಟೇಶ್ , ತಂಗರಾಜ್, ಷಣ್ಮುಗ, ನಾರಾಯಣ, ಜಾವೀದ್, ಹಮೀದ್, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.