ಕೊಡಗಿನಲ್ಲಿ 121 ಹೊಸ ಕೋವಿಡ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 4095ಕ್ಕೆ ಏರಿಕೆ

October 15, 2020

ಮಡಿಕೇರಿ ಅ. 15 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 121 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
76 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 45 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 16 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 49 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 34 ಆರ್.ಟಿ.ಪಿ.ಸಿ.ಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 43 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 29 ಆರ್.ಟಿ.ಪಿ.ಸಿ.ಆರ್ ಮತ್ತು 14 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4095 ಆಗಿದ್ದು, 3319 ಮಂದಿ ಗುಣಮುಖರಾಗಿದ್ದಾರೆ. 717
ಸಕ್ರಿಯ ಪ್ರಕರಣಗಳಿದ್ದು, 59 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 598 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.