ಮಹಾಮಳೆಗೆ 18 ಸಾವು

October 15, 2020

ಹೈದರಾಬಾದ್ ಅ.15 : ಹೈದರಾಬಾದ್ ನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಹಾಮಳೆಯಿಂದಾಗಿ ಇದುವರೆಗೆ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ. ರಸ್ತೆಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ನಗರದ ವಿವಿಧ ಪ್ರದೇಶಗಳಲ್ಲಿ ಗೋಡೆ ಕುಸಿದು, ವಿದ್ಯುತ್ ತಗುಲಿ ಮತ್ತು ನೀರಿನಲ್ಲಿ ಕೊಚ್ಚಿ ಹೋಗಿ 18 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಶಮ್‍ಶಾಬಾದ್‍ನಲ್ಲಿ ಎರಡು ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರೀ ಮಳೆಗೆ ಹೈದರಾಬಾದ್ ನ ಬಂದ್ಲಗುಡ ಪ್ರದೇಶದಲ್ಲಿ ಮಗು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಸತತ ಮಳೆಗೆ ಬಂಡೆಯೊಂದು ನೀರಿನಲ್ಲಿ ಕೊಚ್ಚಿ ಬಂದು ಮನೆಗೆ ಬಿದ್ದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಹೈದರಾಬಾದ್ ನ ಶಂಶಾಬಾದ್ ಪ್ರದೇಶದ ಗಗನ್ ಪಹಾದ್ ಎಂಬಲ್ಲಿ ಸತತ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿದ್ದಾರೆ.

error: Content is protected !!