ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ

October 15, 2020

ಬೆಂಗಳೂರು ಅ.15 : ವಿಜಯಪುರ, ಕಲುಬುರಗಿ, ಕರಾವಳಿ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಸತತ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಅನೇಕ ಕಡೆ ಮನೆಗಳಿಗೆ ನೀರು ನುಗ್ಗಿ ಜನರು ಭಯಭೀತರಾಗಿದ್ದಾರೆ. ನೀರು ಹೊರಹಾಕಲು ಹೈರಾಣರಾಗಿದ್ದಾರೆ. ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿನ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ನೆಲ ಕಚ್ಚಿದ್ದು, ಕೆಲವು ಜಿಲ್ಲೆಗಳಲ್ಲಿ ಅಡಕೆ ಬೆಳೆಗೂ ಹಾನಿಯಾಗಿದೆ. ನೂರಾರು ಜನ ಮನೆ ಮಠ ಕಳೆದುಕೊಂಡು, ಅಕ್ಷರಶಃ ಬೀದಿಗೆ ಬಂದಿದ್ದಾರೆ. ಮಳೆ ಸಂತ್ರಸ್ತರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೆ ಧಾವಿಸಬೇಕಾಗಿದೆ.
ಕೂಡಲೇ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.