ಕೊಡಗಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ

October 15, 2020

ಮಡಿಕೇರಿ ಅ.15 : ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಅ.17 ಮತ್ತು ಅ.26 ರಂದು ಜಿಲ್ಲೆಯ ಪ್ರವಾಸಿತಾಣಗಳಿಗೆ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
ಅ.17 ರಂದು ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಹಾಗೂ ಅ.26 ರಂದು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆಯನ್ನು ಸರಳವಾಗಿ ಆಚರಿಸುವ ಸಂದರ್ಭದಲ್ಲಿ ಜನ ಜಂಗುಳಿ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!