ಮೂವತ್ತು ಬಾರಿ ರಕ್ತದಾನ ಮಾಡಿದ ಕೊಡಗು ಬ್ಲಡ್ ಡೋನರ್ಸ್ ಸದಸ್ಯ ಕಲೀಲ್‍ಗೆ ಸನ್ಮಾನ

16/10/2020

ಮಡಿಕೇರಿ ಅ. 16 : ಮೂವತ್ತು ಬಾರಿ ರಕ್ತದಾನ ಮಾಡಿ ದಾಖಲೆ ಬರೆದ ಕೊಡಗು ಬ್ಲಡ್ ಡೋನರ್ಸ್ ಸದಸ್ಯ ಕಲೀಲ್ ಅವರನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸನ್ಮಾನಿಸಿ ಗೌರವಿಸಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್, ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಾಲಭವನದಲ್ಲಿ ನಡೆದ ರಕ್ತ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ಜಿ.ಪಂ ಅಧ್ಯಕ್ಷ ಬಿ.ಎ. ಹರೀಶ್ , ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಉಪಸ್ಥಿತರಿದ್ದರು.