ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4232ಕ್ಕೆ ಏರಿಕೆ

October 16, 2020

ಮಡಿಕೇರಿ ಅ.16 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 137 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
117 ಪ್ರಕರಣಗಳು ಆರ್‍ಟಿಪಿಸಿಆರ್ ಮೂಲಕ ಹಾಗೂ 20 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 52 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 44 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 26 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್‍ಟಿಪಿಸಿಆರ್ ಮತ್ತು 12 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 59 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 59 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4232 ಆಗಿದ್ದು, 3459 ಮಂದಿ ಗುಣಮುಖರಾಗಿದ್ದಾರೆ. 714 ಸಕ್ರಿಯ ಪ್ರಕರಣಗಳಿದ್ದು, 59 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 536 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.