ಕಾಫಿ ಬೆಳೆಗಾರ ಆತ್ಮಹತ್ಯೆಗೆ ಶರಣು : ದೇವಸ್ತೂರಿನಲ್ಲಿ ಘಟನೆ

October 16, 2020

ಮಡಿಕೇರಿ ಅ.16 : ಕಾಫಿ ಬೆಳೆಗಾರರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ತೂರಿನಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಕೆ.ದಿನು ಭೀಮಯ್ಯ(48) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ಮನೆಯಿಂದ ಒಂಟಿ ನಳಿಗೆ ಕೋವಿಯೊಂದಿಗೆ ತೋಟದ ಕಡೆಗೆ ತೆರಳಿದ್ದ ದಿನು ಭೀಮಯ್ಯ, ಕೋವಿಯಿಂದ ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತೈ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮಹಜರು ನಡೆಸಿ ಕೋವಿಯನ್ನು ವಶಕ್ಕೆ ಪಡೆದಿದ್ದಾರೆ. ದಿನು ಭೀಮಯ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

error: Content is protected !!