ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ವಿ.ಸೋಮಣ್ಣ

16/10/2020

ಮಡಿಕೇರಿ ಅ.16 : ಕೊಡಗು ಜಿಲ್ಲಾ ಉಸ್ತುವಾರಿ‌ ಸಚಿವ ವಿ.ಸೋಮಣ್ಣ ಅವರು ತಲಕಾವೇರಿಗೆ ಭೇಟಿ ನೀಡಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಶಾಸಕರಾದ ಕೆ.ಜಿ.ಬೋಪಯ್ಯ, ದೇವಾಲಯ ‌ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ, ಎಸಿ, ತಹಶೀಲ್ದಾರರು ಇತರರು ಇದ್ದರು.