ಮಹಾರಾಷ್ಟ್ರ ಸಚಿವೆಗೆ ಜೈಲು ಶಿಕ್ಷೆ

17/10/2020

ಮುಂಬೈ ಅ.17 : ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಅವರಿಗೆ ನ್ಯಾಯಾಲಯ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಎಂಟು ವರ್ಷಗಳ ಹಿಂದೆ ಪೊಲೀಸ್ ಕಾನ್‍ಸ್ಟೇಬಲ್ ಒಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‍ಅವರಿಗೆ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಕಾಂಗ್ರೆಸ್‍ಶಾಸಕಿಯಾಗಿರುವ ಠಾಕೂರ್, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‍ಸಮಿತಿಯ ಕಾರ್ಯಾಧ್ಯಕ್ಷೆಯೂ ಆಗಿದ್ದಾರೆ. ಉದ್ಧವ್ ಠಾಕ್ರೆ ಅವರ ಮೈತ್ರಿ ಸರ್ಕಾರದಲ್ಲಿ ಅವರು ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿದ್ದು, ನ್ಯಾಯಾಲಯದ ತೀರ್ಪು ಇದೀಗ ಮೈತ್ರಿ ಸರ್ಕಾರಕ್ಕೆ ತೀವ್ರ ಮುಂಜುಗರವನ್ನುಂಟು ಮಾಡಿದೆ.