ಮಡಿಕೇರಿಯಲ್ಲಿ ಲೋಕೋಪಯೋಗಿ ಇಲಾಖೆಯ ನೂತನ ಕಚೇರಿ ಕಟ್ಟಡ ಉದ್ಘಾಟನೆ

17/10/2020

ಮಡಿಕೇರಿ ಅ.17 : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಲೋಕೋಪಯೋಗಿ ಇಲಾಖೆ ವಿಭಾಗ ಮತ್ತು ಉಪ-ವಿಭಾಗ ಕಟ್ಟಡವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಉದ್ಘಾಟಿಸಿದರು.
ಜಿಲ್ಲಾಡಳಿತ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ 4.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಕಟ್ಟಡವನ್ನು ಸಚಿವರು ಶನಿವಾರ ಉದ್ಘಾಟಿಸಿದರು.
ಮಡಿಕೇರಿ ಶಾಸಕರಾದ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ,ಡಿಸಿಎಫ್ ಪ್ರಭಾಕರನ್ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ ಡಿ.ಎಚ್.ಒ ಡಾ.ಕೆ.ಮೋಹನ್, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಮದನ್ ಮೋಹನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಂ, ತಹಶೀಲ್ದಾರ್ ಮಹೇಶ್ ಇತರರು ಇದ್ದರು.