ಲೋಕೋಪಯೋಗಿ ಇಲಾಖೆ ವಿಭಾಗ ಮತ್ತು ಉಪ-ವಿಭಾಗ ಕಚೇರಿ ನೂತನ ಕಟ್ಟಡ ಉದ್ಘಾಟನೆ

17/10/2020

ಮಡಿಕೇರಿ ಅ.17 : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಲೋಕೋಪಯೋಗಿ ಇಲಾಖೆ ವಿಭಾಗ ಮತ್ತು ಉಪ-ವಿಭಾಗ ಮಟ್ಟದ ಕಚೇರಿ ಕಟ್ಟಡವನ್ನು ವಸತಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಉದ್ಘಾಟಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ 4.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಕಟ್ಟಡವನ್ನು ಸಚಿವರು ಶನಿವಾರ ಉದ್ಘಾಟಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕರ್ನಾಟಕದ ಉತ್ತರ ಭಾಗದಲ್ಲಿನ ಮಳೆ ಹಾನಿ ಬಗ್ಗೆ ಮಾಹಿತಿ ನೀಡಿ ಈಗಾಗಲೇ ಕಂದಾಯ ಸಚಿವರು, ಸಂಬಂಧಪಟ್ಟ ಉಸ್ತುವಾರಿ ಸಚಿವರುಗಳು ರಾಜ್ಯದ ಉತ್ತರ ಭಾಗದ ಜಿಲ್ಲೆಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಸದ್ಯದಲ್ಲೇ ಮುಖ್ಯಮಂತ್ರಿ ಅವರು ಉತ್ತರ ಕರ್ನಾಟಕ ಪ್ರವಾಹ ಸಂಬಂಧ ಸಭೆ ಕೆರದು ಪರಿಹಾರ ಮತ್ತಿತರ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಹಾಗೆಯೇ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಸಂತ್ರಸ್ತರ ಜೊತೆಗೆ ಸರ್ಕಾರವಿದೆ. ಈಗಾಗಲೇ ಕರ್ನಾಟಕ ಉತ್ತರ ಭಾಗದ ಜಿಲ್ಲಾಧಿಕಾರಿಗಳಿಗೆ ಪ್ರವಾಹ ನಿರ್ವಹಣೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ ಎಂದು ಸೋಮಣ್ಣ ಅವರು ಹೇಳಿದರು.
ಮಡಿಕೇರಿ ಶಾಸಕರಾದ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ, ಡಿಎಫ್‍ಒ ಪ್ರಭಾಕರನ್, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಡಿ.ಎಚ್.ಒ ಡಾ.ಕೆ.ಮೋಹನ್, ಲೋಕೋಪಯೋಗಿ ಇಲಾಖೆ

ಹಾಸನ ವೃತ್ತದ ಅಧೀಕ್ಷಕ ಎಂಜಿನಿಯರ್ ಜಿ.ಟಿ ವೆಂಕಟೇಶ್, ಕಾರ್ಯಪಾಲಕ ಎಂಜಿನಿಯರ್ ಮದನ್ ಮೋಹನ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಂ, ಮೋಹನ್ ಕುಮಾರ್, ಸುರೇಶ್, ತಹಶೀಲ್ದಾರ್ ಮಹೇಶ್ ಇತರರು ಇದ್ದರು.