ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಪರೀಕ್ಷೆ : 1120 ಮಂದಿ ಹಾಜರು

October 18, 2020

ಮಡಿಕೇರಿ ಅ.18 : ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 50 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಡಿಕೇರಿ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಯಿತು.
ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಾಗಿ ಒಟ್ಟು 1120 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಕಛೇರಿ ಪ್ರಕಟಣೆ ತಿಳಿಸಿದೆ.