ಸಮುದಾಯ ಪ್ರಸರಣದತ್ತ ಕೋವಿಡ್

19/10/2020

ನವದೆಹಲಿ ಅ.19 : ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಪ್ರಸ್ತುತ ಕೆಲವೊಂದು ರಾಜ್ಯ ಮತ್ತು ಜಿಲ್ಲೆಗಳಿಗೆ ಮಾತ್ರ ಇದು ಸಿಮೀತವಾಗಿರುವುದಾಗಿ ಅವರು ತಿಳಿಸಿದ್ದಾರೆ.
ವಾರದ ವೆಬಿನಾರ್ ಸಂಡೇ ಸಂವಾದದಲ್ಲಿ ಸಾಮಾಜಿಕ ಮಾಧ್ಯಮಗಳ ಪ್ರೇಕ್ಷಕರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದಾಗಿ ಒಪ್ಪಿಕೊಂಡರು.
ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಶೇಷವಾಗಿ ಜನದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಕೋವಿಡ್-19 ಸಮುದಾಯ ಹಂತ ತಲುಪಿರುವ ನಿರೀಕ್ಷೆಯಿದೆ. ಆದಾಗ್ಯೂ, ದೇಶಾದ್ಯಂತ ಇದು ತಲುಪಿಲ್ಲ. ಕೆಲವೇ ಜಿಲ್ಲೆಗಳಿಗೆ ಮಾತ್ರ ಇದು ಸೀಮಿತವಾಗಿದೆ ಎಂದರು.