ಯುವ ಪತ್ರಕರ್ತ ಕೋವಿಡ್‍ನಿಂದ ಸಾವು

October 19, 2020

ಮೈಸೂರು ಅ.19 : ಯುವ ಪತ್ರಕರ್ತ ಪವನ ಹೆತ್ತೂರು(36) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಪ್ರಜಾವಾಣಿಯ ಮೈಸೂರು ಬ್ಯೂರೋ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪವನ ಅವರಿಗೆ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವನ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಹೆತ್ತೂರಿನವರಾಗಿದ್ದ ಪವನ ಸಜ್ಜನ ರಾಜಕಾರಣಿ ಕೃಷ್ಣಪ್ರಸಾದ್ ಕುಟುಂಬಕ್ಕೆ ಸೇರಿದ್ದರು. ಅವರ ತಂದೆ ಶಾಲಾ ಶಿಕ್ಷಕರಾಗಿದ್ದರು. ಮೃತ ಪವನ ಅವರಿಗೆ ಪತ್ನಿ, ಇಬ್ಬರು ಪುಟ್ಟ ಮಕ್ಕಳಿದ್ದಾರೆ.