ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 4523ಕ್ಕೆ ಏರಿಕೆ

October 20, 2020

ಮಡಿಕೇರಿ ಅ. 20 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 32 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
29 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 03 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 13 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 12 ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 1 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4523 ಆಗಿದ್ದು, 3771 ಮಂದಿ ಗುಣಮುಖರಾಗಿದ್ದಾರೆ. 689
ಸಕ್ರಿಯ ಪ್ರಕರಣಗಳಿದ್ದು, 63 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 391 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.