ಕಂಪ್ಯೂಟರ್ ಬೇಸ್ಡ್ ಎಕ್ಸಾಮಿನೇಷನ್-2020 ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

20/10/2020

ಮಡಿಕೇರಿ ಅ.20 : ಸಿಬ್ಬಂದಿ ನೇಮಕಾತಿ ಆಯೋಗ, ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಖಾಲಿಯಿರುವ ಜೂನಿಯರ್ ಎಂಜಿನಿಯರ್ (ಸಿವಿಲ್ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಕ್ವಾಂಟಿಟಿ ಸರ್ವೆಯಿಂಗ್ ಮತ್ತು ಕಂಟ್ರ್ಯಾಕ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಕಂಪ್ಯೂಟರ್ ಬೇಸ್ಡ್ ಎಕ್ಸಾಮಿನೇಷನ್-2020 ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಆಹ್ವಾನಿಸಿರುವ ಹುದ್ದೆಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ವಿದ್ಯಾರ್ಹತೆ ವಿವರಗಳನ್ನು ನೇಮಕಾತಿ ಆಯೋಗದ ವೆಬ್‍ಸೈಟ್ https://ssc.nic.in ರಲ್ಲಿ ನೀಡಿರುವ ನೇಮಕಾತಿ ಅಧಿಸೂಚನೆಯ ಪ್ಯಾರಾ-8 ರಲ್ಲಿ ಪಡೆಯಬಹುದಾಗಿದೆ. 2020ರ ಜನವರಿ, 01 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ರಿಂದ ಗರಿಷ್ಠ 32 ವರ್ಷಗಳು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ, ಪಿಡಬ್ಲ್ಯುಡಿ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ರೂ.100, ಎಸ್.ಸಿ., ಎಸ್.ಟಿ, ಪಿಡಬ್ಲ್ಯುಡಿ ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಶುಲ್ಕವನ್ನು ಆನ್‍ಲೈನ್, ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ನವೆಂಬರ್, 01 ರೊಳಗೆ ಶುಲ್ಕ ಪಾವತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://ssc.nic.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.