ಪ್ರತಿಯೊಬ್ಬರಿಗೆ ನಿವೇಶನ : ಸಿಎಂ ಭರವಸೆ

21/10/2020

ಶಿವಮೊಗ್ಗ ಅ.21 : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು.ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು.ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು,ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ .ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು,ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರ ದಲ್ಲಿ ಒದಗಿಸಲಾಗುತ್ತಿದೆ.ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40 ಕೋಟಿ ರೂ ನಿಗದಿಪಡಿಸಲಾಗಿದೆ ಎಂದರು.