ವರ್ತಕರ ಸಂಘದ ಅಧ್ಯಕ್ಷ ಡಿ.ಎಸ್.ಮಹೇಶ್ ಜೆಡಿಎಸ್‍ಗೆ ಸೇರ್ಪಡೆ

21/10/2020

ಮಡಿಕೇರಿ ಅ.21 : ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವ್ಯಾಪಾರಿಗಳು ಮತ್ತು ವರ್ತಕರ ಸಂಘದ ಅಧ್ಯಕ್ಷ ಡಿ.ಎಸ್.ಮಹೇಶ್ ಹಾಗೂ ಸಂಘದ ನಿರ್ದೇಶಕ ರಂಗಸ್ವಾಮಿ ಅವರುಗಳು ಬಿಜೆಪಿ ತೊರೆದು ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು.
ಕುಶಾಲನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಮಹೇಶ್ ಮತ್ತು ರಂಗಸ್ವಾಮಿ ಅವರನ್ನು ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಬರಮಾಡಿಕೊಂಡರು.
ನಂತರ ಮಾತನಾಡಿದ ಗಣೇಶ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯಲ್ಲಿ ಕೈಗೊಂಡ ಜನಪರ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಜೆಡಿಎಸ್ ಮತ್ತಷ್ಟು ಬಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನಿಲ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ಖಜಾಂಚಿ ಡೆನ್ನಿ ಬರೋಸ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ಕುಶಾಲನಗರ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಕರೀಂ, ಪ.ಪಂ ಮಾಜಿ ಅಧ್ಯಕ್ಷ ಚಂದ್ರು, ಪ್ರಮುಖರಾದ ಶಬೀರ್, ಮುಳ್ಳುಸೋಗೆ ರಾಜೇಶ್ ಮತ್ತಿತರರು ಹಾಜರಿದ್ದರು.