ಕಾಮಗಾರಿಗಳ ವಿವರ ತಂತ್ರಾಂಶದಲ್ಲಿ : ತರಬೇತಿ ಕಾರ್ಯಾಗಾರ

21/10/2020

ಮಡಿಕೇರಿ ಅ.21 : ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ವಿವಿಧ ಇಲಾಖೆಗಳು ವೈಯಕ್ತಿಕ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳ ವಿವರ ಹಾಗೂ ಕಾಮಗಾರಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸುವ ಸಂಬಂಧ ವಿವಿಧ ಇಲಾಖಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಬುಧವಾರ ನಡೆಯಿತು.
ನಗರದ ಜಿ.ಪಂ ವಿಡಿಯೊ ಕಾನ್ಫರೆನ್ಸ್ ಸಭಾಂಗಣದ ನಡೆದ ತರಬೇತಿ ಕಾರ್ಯಾಗಾರದಲ್ಲಿ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವ ಸಂಬಂಧ ಮತ್ತು ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಂತ್ರಾಂಶದ ಮೂಲಕ ಮಾಹಿತಿಯನ್ನು ಒದಗಿಸುವ ಕುರಿತು ಮಾಹಿತಿ ನೀಡಲಾಯಿತು.
ಜೊತೆಗೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಅಧಿನಿಯಮ 2013 ಮತ್ತು ನಿಯಮಗಳು, 2017 ರ ಪ್ರಮುಖ ಅಂಶಗಳು, ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ಫಲಾನುಭವಿಗಳ ವಿವಿರವನ್ನು ಬೆನಿಫಿಶರಿ ಅಪ್ಲಿಕೇಶನ್ ನಲ್ಲಿ UP LOADಮಾಡುವ ವಿಧಾನ ಮತ್ತು ಅನುಷ್ಠಾನ ಮಾಡಿರುವ ಕಾಮಗಾರಿಗಳ ವಿವರವನ್ನು ವರ್ಕ್ ಮಾನಿಟರಿಂಗ್ ಸಿಸ್ಟಮ್ ನಲ್ಲಿ UP LOAD ಮಾಡುವ ಬಗ್ಗೆ ಅಧಿಕಾರಿಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ತರಬೇತಿ ನೀಡಲಾಯಿತು.
ಜಿ.ಪಂ. ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಐಟಿಡಿಪಿ ಇಲಾಖಾಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕÀ ಅರುಂಧತಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಸುರೇಶ್ ಭಟ್, ತಮ್ಮಯ್ಯ, ನಗರಸಭೆ ಪೌರಾಯುಕ್ತರಾದ ರಾಮದಾಸ್ ಇತರರು ಹಾಜರಿದ್ದರು.