ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 4613ಕ್ಕೆ ಏರಿಕೆ

October 22, 2020

ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 47 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
40 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 7 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 23 ಆರ್.ಟಿ.ಪಿ.ಸಿ.ಆರ್ ಮತ್ತು 04 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 13 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 12 ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 2 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4613 ಆಗಿದ್ದು, 4029 ಮಂದಿ ಗುಣಮುಖರಾಗಿದ್ದಾರೆ. 520
ಸಕ್ರಿಯ ಪ್ರಕರಣಗಳಿದ್ದು, 64 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 329 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!