ಪೊಲೀಸರ ತ್ಯಾಗವನ್ನು ಕೊಂಡಾಡಿದ ಪ್ರಧಾನಿ

22/10/2020

ನವದೆಹಲಿ ಅ.22 : ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧ ಪ್ರಕರಣಗಳನ್ನು ಬಗೆಹರಿಸುವವರೆಗೆ, ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್-೧೯ ವಿರುದ್ಧ ಹೋರಾಡುವವರೆಗೆ, ಯಾವುದೇ ಹಿಂಜರಿಕೆಯಿಲ್ಲದೆ ನಮ್ಮ ಪೊಲೀಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜನ ಸೇವೆಯತ್ತ ಅವರ ಸಮರ್ಪಣೆ ಮತ್ತು ಸರ್ವ ಸನ್ನದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
ಪೊಲೀಸ್ ಸಂಸ್ಮರಣಾ ದಿನವು ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಭಾರತದಾದ್ಯಂತ ಕೃತಜ್ಞತೆ ಸಲ್ಲಿಸುವ ಅವಕಾಶವಾಗಿದೆ. ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗ ಮತ್ತು ಸೇವೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ತಿಳಿಸಿದ್ದಾರೆ.