ವೈಮಾನಿಕ ಮಳೆ ಸಮೀಕ್ಷೆ ನಡೆಸಿದ ಸಿಎಂ

22/10/2020

ಕಲಬುರ್ಗಿ ಅ.22 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಹಲವು ಮನೆಗಳು ಬಿದ್ದಿವೆ. ಇದರ ಬಗ್ಗೆ ಮಾಹಿತಿ ಪಡೆಯಲು ವೈಮಾನಿಕ ಸಮೀಕ್ಷೆ ನಡೆಸಲು ತೆರಳುತ್ತಿದ್ದೇವೆ. ಈಗಾಗಲೇ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಹೆಚ್ಚಿನ ಹಣವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗುವುದು ತಕ್ಷಣ ಜನರ ಸಮಸ್ಯೆಗೆ ಸ್ಪಂದಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳ ಸಭೆಯ ಬಳಿಕ ಸಿಎಂ ತಿಳಿಸಿದ್ದಾರೆ.
ಸಮೀಕ್ಷೆಯ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಕೇಂದ್ರ ತಂಡ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.
ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೆರೆಪೀಡಿತ ಪ್ರದೇಶದ ವೀಕ್ಷಣೆ ಮಾಡಿದ ನಂತರ ಯಡಿಯೂರಪ್ಪ ಕಲಬುರ್ಗಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿಯೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾನಿಯ ಮಾಹಿತಿ ನೀಡಿದರು. ಜಂಟಿ ಸರ್ವೆ ನಂತರ ಹಾನಿಯ ನಿಖರ ಮಾಹಿತಿ ಸಿಗಲಿದ್ದು, ಎನ್.ಡಿ.ಆರ್.ಎಫ್. ನಿಯಮದ ಅಡಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.