ಬಿಜೆಪಿ, ಕಮಲ ಕಾರ್ಯಕರ್ತರ ಕಲಹ

22/10/2020

ಬೆಂಗಳೂರು ಅ.22 : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆ.
ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕ ಕಿತ್ತು ಹರಿದು ಹಾಕಿದ್ದಾರೆ. ಅಲ್ಲದೆ ಮಾಜಿ ಸಂಸದರಾದ ನಾರಾಯಣ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರಕ್ಕೂ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿ ಅಡ್ಡಿಯುಂಟು ಮಾಡಿದರು.
ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಖಂಡಿಸಿ ಹಾಗೂ ವೇಲು ನಾಯ್ಕರ್ ಗಡಿಪಾರು ಮಾಡುವಂತೆ ಒತ್ತಾಯಿಸಿ ನಂದಿನಿ ಲೇಔಟ್ ಪೆÇಲೀಸ್ ಠಾಣೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.