ತುಳು ಚಿತ್ರ ನಟ ಸುರೇಂದ್ರ ಹತ್ಯೆ
22/10/2020

ಮಂಗಳೂರು ಅ.22 : ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಿ.ಸಿ.ರೋಡ್ ನ ಫ್ಲ್ಯಾಟ್ ಒಂದರಲ್ಲಿ ಸುರೇಂದ್ರ ಬಂಟ್ವಾಳ್ ಎಂಬವರ ಹತ್ಯೆ ಮಾಡಲಾಗಿದೆ. ನಗರ ಠಾಣಾ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ನಡೆದ ತಲವಾರು ದಾಳಿ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಬಳಿಕ ಅವರನ್ನು ಕಾಸರಗೋಡಿನ ಕುಂಬ್ಳೆ ಬಳಿ ಪೆÇಲೀಸರು ಬಂಧಿಸಿ ಕರೆತಂದಿದ್ದರು.
ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸುರೇಂದ್ರ ರೌಡಿಶೀಟರ್ ಆಗಿದ್ದು, ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೆÇೀಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.
