ನಟಿ ಮೇಘನಾ ರಾಜ್‌ಗೆ ಗಂಡು ಮಗು ಜನನ: ಚಿರಂಜೀವಿ ಸರ್ಜಾ ಕುಟುಂಬದಲ್ಲಿ ಸಂಭ್ರಮ

22/10/2020

ಬೆಂಗಳೂರು : ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ತಾಯಿಯಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆ ಚಿರಂಜೀವಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಎದುರಿನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ‘ಚಿರು ಮತ್ತೆ ಹುಟ್ಟಿ ಬಂದಿದ್ದಾರೆ’ ಎಂದು ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.

ಮೇಘನಾಗೆ ಸ್ನೇಹಿತರು, ಅಭಿಮಾನಿಗಳು, ಚಿತ್ರರಂಗದ ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.