ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ ಅ.22 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್), ಬೆಂಗಳೂರು ಇವರು 2020-21ನೇ ಸಾಲಿನಲ್ಲಿ ಸಿಎನ್‍ಸಿ ಪ್ರೋಗ್ರಾಮರ್ ಕಂ ಆಪರೇಟರ್, ಎಲೆಕ್ಟ್ರಿಷಿಯನ್, ವೆಲ್ಡರ್ ಹಾಗೂ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ವೃತ್ತಿಗಳಲ್ಲಿ ಪೂರ್ಣಾವಧಿ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ನವೆಂಬರ್, 12 ರೊಳಗೆ ಟೆಕ್ನಿಕಲ್ ಟ್ರೈನಿಂಗ್ ಇನ್ಸ್‍ಟ್ಯೂಟ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ವಿಮಾನಪುರ ಪೋಸ್ಟ್, ಬೆಂಗಳೂರು (Technical Training Institute, Hindustan Aeronautics Limited, Vimanapura Post, Bangalore-560017”) ಇಲ್ಲಿಗೆ ಸಲ್ಲಿಸಲು ತಿಳಿಸಿದೆ.
ಎಸ್‍ಎಸ್‍ಎಲ್‍ಸಿ ತರಗತಿಯಲ್ಲಿ ತೇರ್ಗಡೆ. ಅರ್ಹತಾ ಪರೀಕ್ಷೆಯಲ್ಲಿ ಸಾಮಾನ್ಯ/ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕನಿಷ್ಠ ಶೇ.60 ಮತ್ತು ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ದಿನಾಂಕ: 01-11-2020 ಕ್ಕೆ ಅನ್ವಯವಾಗುವಂತೆ ಕನಿಷ್ಠ 15 ಹಾಗೂ ಗರಿಷ್ಠ 18 ವರ್ಷಗಳು. ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದವರಾಗಿರಬೇಕು ಹಾಗೂ ಬಿಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿ ಹೊಂದಿರಬೇಕು.
ಈ ತರಬೇತಿಯು ಉಚಿತವಾಗಿದ್ದು, ತರಬೇತಿಯ ಅವಧಿಯಲ್ಲಿ ಶಿಷ್ಯ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು www.hal-india.com ರಿಂದ ಪಡೆಯಬಹುದಾಗಿದೆ. ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಇಲ್ಲಿಂದ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
