ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 4655ಕ್ಕೆ ಏರಿಕೆ

October 23, 2020

ಮಡಿಕೇರಿ ಅ. 23 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 42 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
35 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 07 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 22 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 19 ಆರ್.ಟಿ.ಪಿ.ಸಿ.ಆರ್ ಮತ್ತು 03 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 17 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್.ಟಿ.ಪಿ.ಸಿ.ಆರ್ ಮತ್ತು 3 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 1 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4655 ಆಗಿದ್ದು, 4124 ಮಂದಿ ಗುಣಮುಖರಾಗಿದ್ದಾರೆ. 466
ಸಕ್ರಿಯ ಪ್ರಕರಣಗಳಿದ್ದು, 65 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 290 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.