ಲೇಖಕ: admin

ಮಡಿಕೇರಿ, NEWS DESK ಸೆ. 29: ಮಡಿಕೇರಿಯಲ್ಲಿ ಜನೋತ್ಸವ ದಸರಾ ಪ್ರಯುಕ್ತ ಅಕ್ಟೋಬರ್ 13 ಮತ್ತು 14ರಂದು ಆಯೋಜಿಸಲಾಗಿರುವ ಕಾಫಿ ದಸರಾದಲ್ಲಿ ಮಳಿಗೆ ತೆರೆಯಲು ಆಸಕ್ತರು ಹೆಸರು ನೋಂದಾಯಿಸಿಕೊಳ್ಳುವಂತೆ ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅವರ ಪರಿಕಲ್ಪನೆಯಲ್ಲಿ ಅಕ್ಟೋಬರ್ 13 ಮತ್ತು 14ರಂದು ನಗರದ ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಆಯೋಜಿಸಲಾಗಿದೆ. ಕಾಫಿ ಕೆಫೆ, ಕಾಫಿ ಕೃಷಿ ಸಂಬಂಧಿತ ಮಾಹಿತಿ ಮಳಿಗೆ, ಕಾಫಿಯ ವೈವಿಧ್ಯಮಯ ಉತ್ಪನ್ನಗಳು, ಕಾಫಿ ಕೃಷಿ ಮಾಹಿತಿ ಹಾಗೂ ಕಾಫಿಯಲ್ಲಿ ನವನವೀನ ಆವಿಷ್ಕಾರಗಳ ಕುರಿತು ಮಾಹಿತಿ ನೀಡುವ ಮಳಿಗೆಗಳಿಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 13ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 14ರಂದು ರಾತ್ರಿ 10 ಗಂಟೆಯವರೆಗೆ ಮಳಿಗೆಗಳನ್ನು ತೆರೆಯಲು ಅವಕಾಶವಿದೆ ಎಂದು ಅನಿಲ್ ತಿಳಿಸಿದ್ದಾರೆ. ಆಸಕ್ತರು ಅಕ್ಟೋಬರ್ 5ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಸಂಪರ್ಕ: ವಿನೋದ್ ಮೂಡಗದ್ದೆ – 9535615759

Read More

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ ಆಚಾರ-ವಿಚಾರ ಮತ್ತು ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಅಗತ್ಯವಿದೆ ಎಂದು ಅಖಿಲ ಕೊಡಗು ಕೆಂಬಟ್ಟಿ ಸಮಾಜದ ಅಧ್ಯಕ್ಷ ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ ಹೇಳಿದರು. ವಿರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನ್ಯೂಸ್ 3 ಡಿಜಿಟಲ್ ಮೀಡಿಯಾ ವತಿಯಿಂದ ಕೆಂಬಟ್ಟಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆಂಬಟ್ಟಿ ಸಮುದಾಯವು ಕೊಡಗು ಜಿಲ್ಲೆಯಲ್ಲಿ ಮಾತ್ರ ಕಂಡುಬರುವ ಅತ್ಯಂತ ಪ್ರಾಚೀನ ಹಾಗೂ ಮೂಲ ಜನಾಂಗಗಳಲ್ಲಿ ಒಂದಾಗಿದೆ. ಇತರ ಸಮುದಾಯಗಳೊಂದಿಗೆ ಸೌಹಾರ್ದಯುತವಾಗಿ ಜೀವನ ನಡೆಸುತ್ತಿರುವ ಕೆಂಬಟ್ಟಿ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮುದಾಯದವರು ಹೃದಯವಂತರಾಗಿದ್ದು, ತಮ್ಮ ಆಚಾರ-ವಿಚಾರ ಹಾಗೂ ಸಂಪ್ರದಾಯಗಳನ್ನು ನಿರಂತರವಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಿವೃತ್ತ…

Read More

ವಿರಾಜಪೇಟೆ, NEWS DESK ಸೆ.29: ಕೂರ್ಗ್ ಮಾಸ್ಟರ್ಸ್ ಕಪ್ ವತಿಯಿಂದ ಮೂರನೇ ವರ್ಷದ 50+ ಕಾಲ್ಚೆಂಡು ಪಂದ್ಯಾಟವು ನವೆಂಬರ್ 21 ಮತ್ತು 22ರಂದು ವಿರಾಜಪೇಟೆಯ ತಾಲೂಕು ಆಟದ ಮೈದಾನದಲ್ಲಿ ಹೊನಲು ಬೆಳಕಿನಲ್ಲಿ ನಡೆಯಲಿದೆ ಎಂದು ಕೂರ್ಗ್ ಮಾಸ್ಟರ್ಸ್ ಕಪ್ ಅಧ್ಯಕ್ಷ ಎಲ್.ಜಿ. ಭಾಸ್ಕರ್ ತಿಳಿಸಿದ್ದಾರೆ. ವಿರಾಜಪೇಟೆಯ ಪತ್ರಕರ್ತರ ವೇದಿಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗಿದ್ದು, ಈ ಬಾರಿ ಮೂರನೇ ವರ್ಷದ ಪಂದ್ಯಾಟವನ್ನು ಇನ್ನಷ್ಟು ವಿಶೇಷವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದರು. ಕೂರ್ಗ್ ಮಾಸ್ಟರ್ಸ್ ಕಪ್ ಉಪಾಧ್ಯಕ್ಷ ಸಿ.ಕೆ. ಪೃಥ್ವಿನಾಥ್ ಮಾತನಾಡಿ, ವಿರಾಜಪೇಟೆ ಸುತ್ತಮುತ್ತಲಿನ 6 ಕಿ.ಮೀ. ವ್ಯಾಪ್ತಿಯೊಳಗಿನ ಕ್ರೀಡಾಪಟುಗಳಿಗೆ ಪಂದ್ಯಾಟದಲ್ಲಿ ಭಾಗವಹಿಸಲು ಅವಕಾಶವಿದೆ. ಪ್ರತಿ ತಂಡದಲ್ಲಿ ಐದು ಮಂದಿ ಆಟಗಾರರು ಹಾಗೂ ಇಬ್ಬರು ಹೆಚ್ಚುವರಿ ಆಟಗಾರರು ಸೇರಿದಂತೆ ಒಟ್ಟು ಏಳು ಮಂದಿ ಇರಲಿದ್ದಾರೆ. ಈಗಾಗಲೇ ಎಂಟು ತಂಡಗಳು ನೋಂದಾಯಿಸಿಕೊಂಡಿದ್ದು, ಇನ್ನೂ ಹೆಚ್ಚಿನ ತಂಡಗಳು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಪಂದ್ಯಾಟದ ವೇಳೆ ವಿವಿಧ ಕಾರ್ಯಕ್ರಮಗಳನ್ನು…

Read More

ನಾಪೋಕ್ಲು, NEWS DESK ಸೆ.29: ಇಲ್ಲಿಗೆ ಸಮೀಪದ ಮೂರ್ನಾಡಿನ ಕಗ್ಗಾಲು ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ವಲಯದ ವತಿಯಿಂದ ಹೈನುಗಾರಿಕೆ ಕುರಿತು ‘ರೈತ ಕ್ಷೇತ್ರ ಪಾಠಶಾಲೆ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪಶುವೈದ್ಯೆ ಡಾ. ಶಿಲ್ಪಾ ಮಾತನಾಡಿ, ಹೈನುಗಾರಿಕೆಯಲ್ಲಿ ಜಾನುವಾರುಗಳ ತಳಿ ಆಯ್ಕೆ ಪ್ರಮುಖ ಪಾತ್ರ ವಹಿಸುತ್ತದೆ. ಎಚ್.ಎಫ್. ಹಾಗೂ ಜರ್ಸಿ ಸೇರಿದಂತೆ ಸೂಕ್ತ ಮಿಶ್ರತಳಿಗಳನ್ನು ಆಯ್ಕೆ ಮಾಡುವುದು ಉತ್ತಮ ಹಾಲು ಉತ್ಪಾದನೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಜಾನುವಾರುಗಳಿಗೆ ಗುಣಮಟ್ಟದ ಹಸಿರು ಮೇವು ಹಾಗೂ ಅಜೋಲಾದಂತಹ ಜಲಸಸ್ಯಗಳನ್ನು ನೀಡಬೇಕು. ಕಾಲಕಾಲಕ್ಕೆ ಕಡ್ಡಾಯವಾಗಿ ಲಸಿಕೆ ಹಾಕಿಸುವುದು, ಜಾನುವಾರುಗಳಿಗೆ ವಿಮೆ ಮಾಡಿಸುವುದು ಹಾಗೂ ಕರುಗಳ ಸಮರ್ಪಕ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ತಾಲೂಕಿನ ಕೃಷಿ ಅಧಿಕಾರಿ ವಸಂತ್ ಮಾತನಾಡಿ, ಧರ್ಮಸ್ಥಳ ಯೋಜನೆಯ ಮೂಲಕ ಹೈನುಗಾರಿಕೆಗೆ ಆರ್ಥಿಕ ನೆರವು ದೊರೆಯುತ್ತಿದ್ದು, ರೈತ ಮಹಿಳೆಯರು ಇದರ…

Read More

ನಾಪೋಕ್ಲು, NEWS DESK ಸೆ.29: ಇಲ್ಲಿಗೆ ಸಮೀಪದ ಮೂರ್ನಾಡು ಕೊಡವ ಸಮಾಜದ (ರಿ.) ಆಶ್ರಯದಲ್ಲಿ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ತೇಲಪಂದ ಸಿ. ಸುಬ್ಬಯ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮೂರ್ನಾಡು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಾಫಿ ಬೆಳೆಗಾರರಾದ ಪಳಂಗಂಡ ವಿಠಲ ಪೂವಯ್ಯ ಅವರು ಭಾಗವಹಿಸಿದ್ದರು. ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ ನೆರವಂಡ ಯಾನ ಪೊನ್ನಮ್ಮ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮೂರ್ನಾಡು ಕೊಡವ ಸಮಾಜದ ಉಪಾಧ್ಯಕ್ಷರಾದ ಕೋಟೆರ ಎ. ರಾಜ, ಗೌರವ ಕಾರ್ಯದರ್ಶಿ ಚಂಗಂಡ ಸೂರಜ್ ತಮ್ಮಯ್ಯ, ಖಜಾಂಚಿ ಅಮ್ಮಟಂಡ ಎಂ. ದೇವಯ್ಯ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ಸಮಾಜದ ಬಾಂಧವರು ಹಾಗೂ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು…

Read More

ಮಡಿಕೇರಿ, NEWS DESK ಸೆ.29: ಕುಶಾಲನಗರದ ಆನೆಕಾಡು ಬಳಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಆನೆಕಾಡು ಬಳಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. ಆನೆಕಾಡು ಬಳಿ ನೂರಾರು ಮಂದಿ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ. ಇನ್ನು ಮುಂದೆ ಇಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದರೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ. ಆದ್ದರಿಂದ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳ ಮನೆಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಶಾಸಕರು ಸೂಚಿಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಧಿಕಾರಿ ಸಂಜೀವ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಪೊಲೀಸ್…

Read More

ಮಡಿಕೇರಿ, NEWS DESK ಸೆ. 29: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಿತು. ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪೂರ್ಣಪ್ರಮಾಣದ ಸಹಕಾರ ನೀಡಲಾಗುವುದು. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು. ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಕ್ರೀಡೆಯ ಮೂಲಕ ವಿವಿಧ ಧರ್ಮಗಳ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕ್ರೀಡೆಯು ಸ್ಪರ್ಧಾತ್ಮಕವಾಗಿರಬೇಕು. ಕ್ರೀಡೆಯು ಸಾಮರಸ್ಯವನ್ನು ಬೆಳೆಸುತ್ತದೆ. ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ಕರೆದು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಸಹಾಯಕ ನಿರ್ದೇಶಕಿ ವಿ.ಟಿ.…

Read More

ಮಡಿಕೇರಿ NEWS DESK ಸೆ.29 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ 2023 ರಲ್ಲಿ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದಂತೆ 2028 ರಲ್ಲೂ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎರಡನೇ ಬಾರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಧರ್ಮಜ ಉತ್ತಪ್ಪ ಅವರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧರ್ಮಜ ಉತ್ತಪ್ಪ ಅವರು ಅತ್ಯಂತ ಸ್ನೇಹಜೀವಿಯಾಗಿದ್ದು, ಪಕ್ಷ ಸಂಘಟನೆಯ ರೀತಿ ಅಭೂತವಾಗಿದೆ. ಎಲ್ಲಾ ಪದಾಧಿಕಾರಿಗಳನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸದಿಂದ ಕಂಡು ಪಕ್ಷ ಕಟ್ಟಿದ ಫಲವಾಗಿ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷ ಸ್ಥಾನ…

Read More

ಮಡಿಕೇರಿ NEWS DESK ಸೆ.29 : ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಸತತ ಐದು ತಿಂಗಳಿಗೂ ಹೆಚ್ಚಿನ ಕಾಲ ಅರಣ್ಯ ಇಲಾಖೆಯಿಂದ ಚಿಕಿತ್ಸೆ ಪಡೆಯುತ್ತಿದ್ದರೂ, ಸೆ.29ರಂದು ಬೆಳಗ್ಗೆ 9.50ಕ್ಕೆ ಮೃತಪಟ್ಟಿದೆ. ಕಾದಾಟದ ಗಾಯಗಳು ಹಾಗೂ ಮುರಿದ ದಂತದೊಂದಿಗೆ ಶಿಬಿರಕ್ಕೆ ಬಂದಿದ್ದ ಆನೆಯನ್ನು ಅರಣ್ಯ ಇಲಾಖೆಯ ಪಶುವೈದ್ಯರು ಪ್ರತ್ಯೇಕವಾಗಿರಿಸಿ (ಕ್ವಾರಂಟೈನ್), ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಆರೈಕೆ ಮಾಡುತ್ತಿದ್ದರು. ಪ್ರತಿದಿನ ಆ್ಯಂಟಿಬಯೋಟಿಕ್ಸ್, ನೋವು ನಿವಾರಕಗಳು, ಗಾಯಕ್ಕೆ ಔಷಧೋಪಚಾರ ಹಾಗೂ ಅಗತ್ಯ ಪೋಷಕಾಂಶಗಳನ್ನು ನೀಡಲಾಗುತ್ತಿತ್ತು. ಹೆಚ್ಚಿನ ತಜ್ಞ ಚಿಕಿತ್ಸೆಗೆ Wildlife SOS ಸಂಸ್ಥೆಯ ನುರಿತ ವನ್ಯಜೀವಿ ಪಶುವೈದ್ಯರ ತಂಡವನ್ನು ಕರೆಸಿ ಜಂಟಿ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ಈ ವೇಳೆ ನಡೆಸಿದ ಡಿಜಿಟಲ್ ಎಕ್ಸ್‌ರೇ ಪರೀಕ್ಷೆಯಲ್ಲಿ ಆನೆಯ ಎಡ ಮೊಣಕೈ ಮೂಳೆಯಲ್ಲಿ ಬಿರುಕು ಇರುವುದು ದೃಢಪಟ್ಟಿತ್ತು. ತಜ್ಞ ವೈದ್ಯರ ಸಲಹೆಯಂತೆ ಸುಧಾರಿತ ಚಿಕಿತ್ಸೆಯನ್ನು ಮುಂದುವರಿಸಲಾಗಿದ್ದು, ಕಾಲಿನ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಆನೆಯನ್ನು ಕ್ರಾಲ್‌ನಿಂದ ಹೊರಗೆ ಬಿಡಲಾಗಿತ್ತು. ಪೆಟ್ಟಾದ ಕಾಲನ್ನು ಸ್ಥಿರವಾಗಿಡಲು ಸೆ.27ರಂದು…

Read More

ವಿರಾಜಪೇಟೆ ಸೆ.29 NEWS DESK : ಇತಿಹಾಸ ಪ್ರಸಿದ್ಧ ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವದ ಸಂದರ್ಭದಲ್ಲಿ ಪೊಲೀಸ್ ಹಾಗೂ ಚೆಸ್ಕಾಂ ಇಲಾಖೆಗಳು ಏಕಪಕ್ಷೀಯವಾಗಿ ನಡೆದುಕೊಂಡಿವೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಲಾಗಿದೆ ಹಾಗೂ ವ್ಯವಸ್ಥೆಯಲ್ಲಿ ವೈಫಲ್ಯ ಉಂಟಾಗಿದೆ ಎಂದು ಆರೋಪಿಸಿ ವಿರಾಜಪೇಟೆಯ ವಿವಿಧ ಗೌರಿ-ಗಣೇಶ ಉತ್ಸವ ಸಮಿತಿಗಳ ವತಿಯಿಂದ ಸೋಮವಾರ ತುರ್ತು ಪತ್ರಿಕಾಗೋಷ್ಠಿ ನಡೆಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ವಿವಿಧ ಉತ್ಸವ ಸಮಿತಿಗಳ ಮುಖಂಡರು ಮಾತನಾಡಿ, ಇಲಾಖೆಗಳ ಕ್ರಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ವಿನಾಯಕ ಯುವಕ ಮಂಡಳಿ ಅಧ್ಯಕ್ಷ ಹಾಗೂ ವಕೀಲ ಟಿ.ಪಿ. ಕೃಷ್ಣ ಮಾತನಾಡಿ, ಇತಿಹಾಸ ಪ್ರಸಿದ್ಧ ಗೌರಿ-ಗಣೇಶ ವಿಸರ್ಜನಾ ಮಹೋತ್ಸವವನ್ನು ಸಾರ್ವಜನಿಕರು ಹಾಗೂ ದಾನಿಗಳ ನೆರವಿನಿಂದ, ಸಮಿತಿಗಳ ಸದಸ್ಯರು ತಮ್ಮ ಸ್ವಂತ ಶ್ರಮದಿಂದ ಆಯೋಜಿಸುತ್ತಿದ್ದಾರೆ. ಗೌರಿ ಪಲ್ಲಕಿಯೊಂದಿಗೆ ಆರಂಭವಾಗಿ 11 ದಿನಗಳ ಬಳಿಕ ಅನಂತ ಚತುರ್ದಶಿಯಂದು ಪ್ರತಿಷ್ಠಾಪಿತ ಎಲ್ಲ ಗಣೇಶ ಮೂರ್ತಿಗಳನ್ನು ಏಕಕಾಲದಲ್ಲಿ ವಿಸರ್ಜಿಸುವ ಸಂಪ್ರದಾಯವನ್ನು ಉಳಿಸಿಕೊಳ್ಳಲು ಹಲವು ವರ್ಷಗಳಿಂದ ಶ್ರಮಿಸಲಾಗುತ್ತಿದೆ ಎಂದರು. ಈ ಬಾರಿ ಧ್ವನಿವರ್ಧಕ ಬಳಕೆಯ ವೇಳೆ ವಿದ್ಯುತ್ ಪ್ರವಹಿಸಿ…

Read More