ಮಡಿಕೇರಿ ಮೇ 18 NEWS DESK : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ ಅಂಗವಾಗಿ `ವಸ್ತು ಸಂಗ್ರಹಾಲಯಗಳು ವಿಭಜಿತ ಜಗತ್ತನ್ನು ಒಂದುಗೂಡಿಸುತ್ತಿವೆ ಎಂಬ ಘೋಷವಾಕ್ಯದಡಿಯಲ್ಲಿ ನಾಡಿನ ಗತ ಇತಿಹಾಸವನ್ನು ಪುಷ್ಠೀಕರಿಸುವ `ಪ್ರಾಚೀನ ನಾಣ್ಯಗಳ ಪ್ರದರ್ಶನ ನಗರದ ಕೋಟೆಯ ಆವರಣದ ವಸ್ತುಸಂಗ್ರಹಾಲಯದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೊಡಗಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರಾದ ಡಾ.ಎಂ.ಜಿ.ಪಾಟ್ಕರ್ ಅವರ ಸಂಗ್ರಹದ ಎರಡು ಸಾವಿರಕ್ಕೂ ಹೆಚ್ಚು ನಾಣ್ಯಗಳ ಪ್ರದರ್ಶನ ಕುತೂಹಲಕಾರಿಯಾಗಿ ಮೂಡಿ ಬಂದು, ನೂರಾರು ಸಂಖ್ಯೆಯ ಜನರನ್ನು ಆಕರ್ಷಿಸಿತು. ಖ್ಯಾತ ನಾಣ್ಯ-ನೊಟು ಸಂಗ್ರಹಕಾರರಾದ ಹುಣಸೂರು ಪಿ.ಕೆ.ಕೇಶವಮೂರ್ತಿ ಅವರು ಪ್ರಾಚೀನ ನಾಣ್ಯಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಪ್ರಾಚೀನ ನಾಣ್ಯಗಳ ಪ್ರದರ್ಶನದಿಂದ ವಿದ್ಯಾರ್ಥಿಗಳು ಪುಸ್ತಕದಲ್ಲಿ ಓದುವ ಇತಿಹಾಸವನ್ನು ಕಣ್ಣಾರೆ ನೋಡಿ ಕಲಿಯಲು ಉತ್ತಮ ವೇದಿಕೆಯಾಗಿದೆ ಎಂದರು. ಇದು ಮುಂದಿನ ಪೀಳಿಗೆಗೆ ಇತಿಹಾಸದ ವಿವಿಧ ರಾಜವಂಶಗಳ, ಲಾಂಛನಗಳ ಹಾಗೂ ಆಯಾ ಕಾಲದ ಇತಿಹಾಸವನ್ನು ಸ್ಪಷ್ಟವಾಗಿ ತಿಳಿಯಲು ಸಹಕಾರಿಯಾಗುತ್ತದೆ. ಅಲ್ಲದೇ ವಿದ್ಯಾರ್ಥಿಗಳು ಹಾಗೂ ಇತಿಹಾಸಕಾರರ ಕಲಿಕೆಗೆ…
ಲೇಖಕ: admin
ಮಡಿಕೇರಿ ಮೇ 18 NEWS DESK : ದುಬಾರೆ ಮತ್ತು ಬರಪೊಳೆಯಲ್ಲಿ ರಿವರ್ ರ‍್ಯಾಪ್ಟಿಂಗ್ ನಡೆಸುವವರು ಕಡ್ಡಾಯವಾಗಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ(ಜೇತ್ನ) ರ‍್ಯಾಪ್ಟ್ ಫಿಟ್ಟ್‌ನೆಸ್ ಪ್ರಮಾಣ ಪತ್ರ ಪಡೆಯುವುದರ ಜೊತೆಗೆ ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ನವೀಕರಣ ಪತ್ರ ಪಡೆದು ರಿವರ್ ರ‍್ಯಾಪ್ಟಿಂಗ್ (ಜಲಸಾಹಸ ಕ್ರೀಡೆ) ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಿವರ್ ರ‍್ಯಾಪ್ಟಿಂಗ್ ನಡೆಸುವವರು ಯಾವುದೇ ಕಾರಣಕ್ಕೂ ಅನುಮತಿ ಇಲ್ಲದೆ ಹಾಗೂ ನವೀಕರಣ ಪತ್ರ ಪಡೆಯದೆ ರಿವರ್ ರ‍್ಯಾಪ್ಟಿಂಗ್ ನಡೆಸಬಾರದು ಎಂದು ಎಚ್ಚರಿಸಿದರು. ಹಾಗೆಯೇ ರಿವರ್ ರ‍್ಯಾಪ್ಟಿಂಗ್ ನಡೆಸಲು ಬಳಸುವ ಪ್ರತಿ ರ‍್ಯಾಪ್ಟ್‌ಗೆ ನಿರ್ವಹಣಾ ಶುಲ್ಕವನ್ನು ಪ್ರತೀ ತಿಂಗಳು ಪಾವತಿಸುವಂತೆ ಸಹನಾ ಎಸ್.ಹಾದಿಮನಿ ಅವರು ಸೂಚಿಸಿದರು. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ರ‍್ಯಾಪ್ಟ್ ಗೈಡ್‌ಗಳ ಅಗತ್ಯ ತರಬೇತಿಯನ್ನು ಜನರಲ್…
ಮಡಿಕೇರಿ ಮೇ 18 NEWS DESK : ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಪ್ರತಿಪಾದಿಸಿದ್ದಾರೆ. ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸಲಾಗಿದ್ದು, ಈ ಎಸ್.ಓ.ಪಿ. ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್.ಓ.ಪಿ.…
ಮಡಿಕೇರಿ ಮೇ 18 NEWS DESK : “ಆಶಾ ಕಾರ್ಯಕರ್ತೆ”ಯರಿಗೆ ಪಾವತಿಸಲು ಬಾಕಿ ಇರುವ ಗೌರವ ಧನ ಮತ್ತು ಪ್ರೋತ್ಸಾಹ ಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆನ್ನುವುದು ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು. ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ತೆಕ್ಕಡೆ ಫೂರ್ಣಿಮಾ, ರಾಜ್ಯ ನಿರ್ದೇಶಕರು ಹಾಗೂ ಜಿಲ್ಲಾ ಸಂಚಾಲಕರಾದ ಉಮಾದೇವಿ ಅವರುಗಳ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ವ್ಯಾಪ್ತಿಯಿಂದ ಆಗಮಿಸಿದ್ದ ನೂರಾರು ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತ ಭವನದ ಮುಂಭಾಗ ಘೋಷಣೆಗಳ ಸಹಿತಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಸಂಘದ ಅಧ್ಯಕ್ಷರಾದ ತೆಕ್ಕಡೆ ಪೂರ್ಣಿಮಾ ಅವರು ಮಾತನಾಡಿ, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 430 ಆಶಾಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿಗೆ ಸಂಬಂಧಿಸಿದ ಗೌರವ ಧನ ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ ಮತ್ತು ವಿವಿಧ…
ಮಡಿಕೇರಿ NEWS DESK ಮೇ 18 : ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಬೇಕು ಮತ್ತು ಆದಿಮಸಂಜಾತ ಕೊಡವರನ್ನು ಮರುಸ್ಥಾಪಿಸಿ ದೃಢೀಕರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭ ಕೊಡವರ ಪರವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮನವಿಯಲ್ಲಿ ವಿವರಿಸಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭ ಕೊಡಗು ಭೂಪ್ರದೇಶದಲ್ಲಿರುವ ಅಕ್ರಮ ವಲಸಿಗ ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು. ಆದಿಮಸಂಜಾತ ಕೊಡವರು ಹಾಗೂ ಇಲ್ಲಿ ನೆಲೆಸಿರುವ ಇತರ ನಾಗರೀಕರ ನಡುವಿನ ವ್ಯತ್ಯಾಸವನ್ನು ಗುರುತಿಸಬೇಕು ಎಂದು ಕೋರಿದ್ದಾರೆ. ಭಾರತದ ಮುಖ್ಯ ಚುನಾವಣಾ ಆಯೋಗವು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಗಳ ಮೂಲಕ 2026 ರ ಜೂನ್ 20 ರಿಂದ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಕೊಡಗು ಭೂಪ್ರದೇಶವು ಭೌಗೋಳಿಕ-ಕಾರ್ಯತಂತ್ರದ ಸೂಕ್ಷö್ಮ ಪ್ರದೇಶವಾಗಿದೆ. ಈ…
ಮಡಿಕೇರಿ NEWS DESK ಮೇ 18 : ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜನ್ಮ ದಿನದ ಅಂಗವಾಗಿ ಮಡಿಕೇರಿಯ ಜಿಲ್ಲಾ ರಕ್ತ ನಿಧಿ ಕೇಂದ್ರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ ಅವರು ರೋಗಿಯ ಜೀವ ಉಳಿಸಲು ರಕ್ತದಾನ ಅಮೂಲ್ಯ ದಾನವಾಗಿದೆ. ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ರಕ್ತದಾನ ಮಾಡಲು ಮುಂದಾಗಬೇಕು ಮತ್ತು ಇತರರಿಗೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು ಮತ್ತು ಕಾರ್ಯಕ್ರಮ ನಿರೂಪಿಸಿದರು. ಸಮಾಜ ಸೇವಕ ಕ್ರಿಯೇಟಿವ್ ಖಲೀಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಭು ರೈ, ಪ್ರಧಾನ ಕಾರ್ಯದರ್ಶಿ ರಾವುಫ್ ಎಂ.ಎನ್, ಸಂಘಟನಾ ಕಾರ್ಯದರ್ಶಿ ರವಿ ಗೌಡ, ನಗರಸಭಾ ಸದಸ್ಯ…
ಮಡಿಕೇರಿ NEWS DESK ಮೇ 18 : ಮಕ್ನಾ ಆನೆ ಬಿದ್ದ ಪರಿಣಾಮ ಚೆನ್ನೈಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗಿನ ಹೆಸರುವಾಸಿ ಪ್ರವಾಸಿತಾಣ ದುಬಾರೆಯಲ್ಲಿ ನಡೆದಿದೆ. ಚೆನ್ನೈ ಮೂಲದ ಪಲ್ಲಾವರಂ ನ ನಿವಾಸಿ ಜುನೆಸ್ಸಿ (33) ಮೃತ ದುರ್ದೈವಿ. ಇವರ ಪತಿ ಜೋಯಲ್ ಗೂ ಗಾಯಗಳಾಗಿದೆ. ಸಾಕಾನೆ ಮಕ್ನಾ ಆನೆ ಮಾರ್ತಾಂಡನನ್ನು ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯ ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ದೃಶ್ಯವನ್ನು ಪ್ರವಾಸಿಗರು ವೀಕ್ಷಿಸುತ್ತಿದ್ದರು. ಈ ಸಂದರ್ಭ ಮದವೇರಿದ ಮತ್ತೊಂದು ಸಾಕಾನೆ “ಕಂಜನ್” ಏಕಾಏಕಿ ಮಕ್ನಾ ಆನೆ ಮೇಲೆ ದಾಳಿ ಮಾಡಿದೆ. ಮಕ್ನಾ ಆನೆ ಬಿದ್ದಿದ್ದು, ಇದರ ಪಕ್ಕದಲ್ಲಿದ್ದ ಜುನೆಸ್ಸಿ ಅವರು ಕೆಳ ಭಾಗದಲ್ಲಿ ಸಿಲುಕಿಕೊಂಡು ತೀವ್ರವಾಗಿ ಗಾಯಗೊಂಡರು. ಗಾಯಾಳು ಜುನೆಸ್ಸಿ ಅವರನ್ನು ಕುಶಾಲನಗರದ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಗಾಯಗೊಂಡ ಪತಿ ಜೋಯಲ್ ಗೆ ಚಿಕಿತ್ಸೆ ನೀಡಲಾಗಿದೆ. ಪತಿಯ ಕೈಯಲ್ಲಿದ್ದ ಪುತ್ರಿ ಅಪಾಯದಿಂದ ಪಾರಾಗಿದ್ದಾಳೆ. ನದಿಯಲ್ಲಿ ಸಾಕಾನೆ “ಕಂಜನ್” ಮಕ್ನಾ ಆನೆ ಮೇಲೆ ದಾಳಿ ಮುಂದುವರಿಸುತ್ತಲೇ ಇದ್ದಾಗ…
ಮಡಿಕೇರಿ ಮೇ 16 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಸ್ಥಳೀಯಾಡಳಿತಗಳು ಜಂಟಿಯಾಗಿ ಮಳೆಗಾಲ ಮುನ್ನೆಚ್ಚರಿಕೆ ಕುರಿತು ಪ್ರಾತ್ಯಕ್ಷಿಕೆ ನಡೆಸಿದವು. ಹಾರಂಗಿ ಹಿನ್ನೀರಿನಲ್ಲಿ ಬೋಟ್ ಹಾಗೂ ಲೈಫ್ ಜಾಕೆಟ್ ಬಳಸಿ ಪ್ರವಾಹ ಸಂದರ್ಭ ಜನ,ಜಾನುವಾರು, ಅಮೂಲ್ಯ ಆಸ್ತಿ ರಕ್ಷಣೆ ಕುರಿತಂತೆ ಪೊಲೀಸ್, ಅಗ್ನಿ ಶಾಮಕ ದಳ ಸಿಬ್ಬಂದಿಗಳು ಪೂರ್ವ ತರಬೇತಿ ಪಡೆದರು. 3 ಡಿವೈಎಸ್ ಪಿ, 3 ಸಿಪಿಐ, 15 ಪಿಎಸ್ ಐ, 15 ಅಗ್ನಿ ಶಾಮಕ ದಳ, 7 ಗೃಹ ರಕ್ಷಕ ದಳ ಹಾಗೂ 41 ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ಮೇ 16 NEWS DESK : ವಿರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಮಂಗಲ, ಮಗ್ಗುಲ ಮತ್ತು ವೈಪಡ ಗ್ರಾಮಗಳ ಗ್ರಾಮ ದೇವತೆಗಳಾಗಿ ನೆಲೆನಿಂತ ಶ್ರೀ ಭದ್ರಕಾಳಿಯ ಬೋಡ್ ನಮ್ಮೆ ಆರಂಭಗೊಂಡಿದೆ. ಐಮಂಗಲ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ಆವರಣದಲ್ಲಿ ಮೂರು ಗ್ರಾಮಗಳ ದೇವತಕ್ಕರು, ಗ್ರಾಮಗಳ ಅಧ್ಯಕ್ಷರುಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಕೊಟ್ಟಿಯಂಡ ಜೀವನ್ ಅವರು ಕಟ್ಟು ವಿಧಿ ಅನುಸರಿಸುವ ವಿಧಾನಗಳು ದೇವ ನೆಲೆಯಲ್ಲಿ ಓದಿ ತಿಳಿಸುವ ಮೂಲಕ ಬೋಡ್ ನಮ್ಮೆಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಕೊಟ್ಟಿಯಂಡ ಜೀವನ್ ಅವರು ಐಮಂಗಲ ಗ್ರಾಮದಲ್ಲಿ ಹಿರಿಯ ಅಕ್ಕ ಎರಡನೇಯವರು ವೈಪಡ ಗ್ರಾಮದಲ್ಲಿ ಕೊನೆ ತಂಗಿಯಾಗಿ ಮಗ್ಗುಲ ಗ್ರಾಮದಲ್ಲಿ ಶ್ರೀ ಭದ್ರಕಾಳಿಯಾಗಿ ನೆಲೆ ನಿಂತಿದ್ದಾರೆ, ಎರಡು ವರ್ಷಗಳಿಗೊಮ್ಮೆ ಮೂರು ಗ್ರಾಮಗಳು ಸೇರಿ ಹಬ್ಬ ಆಚರಣೆ ಮಾಡಲಾಗುತ್ತದೆ ಎಂದರು. ಮೇ 16, 17, 18 ರಂದು ಮೂರು ದಿನಗಳ ಕಾಲ ಸಂಜೆ ವೇಳೆಯಲ್ಲಿ 1101 ಸುತ್ತು ಪೀಲಿ ಆಟ್ ಮತ್ತು ತಾಲಿಪಾಟ್ ಕಾರ್ಯಕ್ರಮ…
ಮಡಿಕೇರಿ ಮೇ 16 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಪ್ರವಾಸೋದ್ಯಮ ಮತ್ತು ಪ್ರವಾಸ ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಬಿ. ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಆತ್ಮವಿಶ್ವಾಸ, ಪರಿಶ್ರಮ ಹಾಗೂ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ತಿಳಿಸಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ ವಿಭಾಗ ಮುಖ್ಯಸ್ಥರಾದ ಡಾ. ಕಾವ್ಯಶ್ರೀ ವೃತ್ತಿಪರ ಕೌಶಲ್ಯಾಭಿವೃದ್ಧಿ ಕುರಿತು ಉಪನ್ಯಾಸ ನೀಡಿ, ಸಂವಹನ ಕೌಶಲ್ಯ, ನಾಯಕತ್ವ, ತಂಡದೊಂದಿಗೆ ಕಾರ್ಯನಿರ್ವಹಣೆ, ವೃತ್ತಿಪರ ನೈತಿಕತೆ ಹಾಗೂ ಸಕಾರಾತ್ಮಕ ಮನೋಭಾವದ ಮಹತ್ವವನ್ನು ವಿವರಿಸಿದರು. ಸಹಾಯಕ ಪ್ರಾಧ್ಯಾಪಕರಾದ ಸಾಗರ್ ಶ್ರೀನಿವಾಸ್ ಮಾತನಾಡಿ, ಉತ್ತಮ ರೆಸ್ಯೂಮ್ ತಯಾರಿಸುವ ವಿಧಾನ ಹಾಗೂ ವೃತ್ತಿ ಸಿದ್ಧತೆಯ ಕುರಿತು ಮಾಹಿತಿ…






