ಮಡಿಕೇರಿ ಡಿ.19 NEWS DESK : ಸಿ ಮತ್ತು ಡಿ ಭೂಮಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.20 ರಂದು ರೈತರು ಮಡಿಕೇರಿಯಲ್ಲಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವಿರಾಜಪೇಟೆಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನ ಸೋಮವಾರಪೇಟೆ, ಶಾಂತಳ್ಳಿ, ಭಾಗಮಂಡಲ ಮತ್ತಿತರೆಡೆ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಭೂಮಿ ಕಸಿದುಕೊಳ್ಳುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ. ರಾಜ್ಯದಲ್ಲಿ ರೈತ ವಿರೋಧಿ ಸರಕಾರ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು. ಇತ್ತೀಚೆಗೆ ಅರಣ್ಯ ಸಚಿವರು ಜಿಲ್ಲೆಯ ಕೆಲವು ಪ್ರದೇಶವನ್ನು ಎಲಿಫೆಂಟ್ ಕಾರಿಡಾರ್ ಎಂದು ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದಾರೆ. ಕಳೆದ 30 ವರ್ಷಗಳಿಂದ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆಯೇ ಹೊರತು ಇದು ಆನೆಗಳಿರುವ ಪ್ರದೇಶವಲ್ಲ. ಕಾಡಾನೆಗಳು ನುಸುಳದಂತೆ ಇಲ್ಲಿಯವರೆಗೆ ರೈಲ್ವೆ ಕಂಬಿ ಬೇಲಿ ಅಥವಾ ಸೋಲಾರ್ ಬೇಲಿ ಅಳಿವಡಿಸುವ ಕೆಲಸವನ್ನು ಸರಕಾರ ಮಾಡಿಲ್ಲ. ಇದು ಕೂಡ ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಆದ್ದರಿಂದ ರೈತರ…
ಲೇಖಕ: admin
ಮಡಿಕೇರಿ ಡಿ.19 NEWS DESK : ಕೊಡಗು ಜಿಲ್ಲೆಯಲ್ಲಿ ಗೋಕಳ್ಳತನ, ಗೋವುಗಳ ಅಕ್ರಮ ಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳು ಮಿತಿ ಮೀರಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಹಾಗೂ ವಿರಾಜಪೇಟೆಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿದ್ದು, ಪೊಲೀಸ್ ಇಲಾಖೆ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಜನರು ಸಹನೆ ಕಳೆದುಕೊಳ್ಳುವ ಮೊದಲು ಗೋವುಗಳ ಕಳ್ಳರನ್ನು ನಿಯಂತ್ರಿಸಬೇಕು. ತಪ್ಪಿದಲ್ಲಿ ತೀವ್ರ ರೀತಿಯ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಸರಕಾರವಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಕಾವೇರಿ ನದಿ ಉಗಮವಾಗುವ ಕೊಡಗಿನಲ್ಲಿ ಬ್ರಿಟಿಷರ ಕಾಲದಿಂದಲೂ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಗೋವುಗಳ ಕಳ್ಳರು ಮನೆಗಳ ಕೊಟ್ಟಿಗೆಗೇ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ಅವರ ಮನೆಯ ಕೊಟ್ಟಿಗೆಗೆ ಇಂದು ನಸುಕಿನಲ್ಲಿ ಸುಮಾರು…
ಪೊನ್ನಂಪೇಟೆ ಡಿ.19 NEWS DESK : ಅನಿವಾಸಿ ಕೊಡಗಿನವರ ಸಂಘಟನೆಯಾದ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (ಕೆ.ಎಸ್.ಡಬ್ಲ್ಯೂ.ಎ.) ಯು.ಎ.ಇ. ರಾಷ್ಟ್ರೀಯ ಸಮಿತಿ ವತಿಯಿಂದ ಕೊಡವ ಮುಸ್ಲಿಂ ಅಸೋಸಿಯೇಷನ್ ನ (ಕೆ.ಎಂ.ಎ.) ಸ್ಥಾಪಕಾಧ್ಯಕ್ಷ ಮತ್ತು ಕಿತ್ತಳೆನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕ ಕುವೇಂಡ ವೈ. ಹಂಝತುಲ್ಲಾ ಅವರನ್ನು ದುಬೈನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಂಝತುಲ್ಲಾ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಇತ್ತೀಚಿಗೆ 2022ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೆ.ಎಸ್.ಡಬ್ಲ್ಯೂ.ಎ. (ಯುಎಇ) ವತಿಯಿಂದ ದುಬೈನಲ್ಲಿ ಈ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಡಬ್ಲ್ಯೂ.ಎ. ಜಿಸಿಸಿ ಅಧ್ಯಕ್ಷ ಕೊಟ್ಟಮುಡಿಯ ಹೆಚ್.ಎ.ಅಬೂಬಕ್ಕರ್ ಹಾಜಿ, ಕಳೆದ ನಾಲ್ಕು ದಶಕಗಳಿಂದ ಪತ್ರಿಕೋದ್ಯಮ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಂಝತುಲ್ಲಾ ಅವರು ಸಲ್ಲಿಸಿರುವ ಸೇವೆ ಶ್ಲಾಘನೀಯವಾದದ್ದು. ಕನ್ನಡ ನೆಲದ ಪರಿಕಲ್ಪನೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಭಾಷೆ ಎರಡರಲ್ಲಿಯೂ ಇವರು ಅನನ್ಯವಾದ ಕೊಡುಗೆಯನ್ನು ನೀಡುವ ಮೂಲಕ ಕನ್ನಡ ಸಾಹಿತ್ಯದ ಸತ್ವವನ್ನು ಹೆಚ್ಚಿಸಲು ಶ್ರಮಿಸಿದ್ದಾರೆ.…
ಸೋಮವಾರಪೇಟೆ ಡಿ.19 NEWS DESK : ಮಠ ಮಾನ್ಯಗಳಿಂದ ಮಾತ್ರ ಈ ದೇಶದ ಸಂಸ್ಕೃತಿ, ಆಚಾರ ವಿಚಾರ ಉಳಿಯಲು ಸಾಧ್ಯವೆಂದು ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು. ಆಲೂರು ಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಆಯೋಜಿಸಲಾಗಿದ್ದ ಹದಿಮೂರನೇ ವರ್ಷದ ಸಹಸ್ರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಮಠದ ದಿನದರ್ಶಿ(ಕ್ಯಾಲೆಂಡರ್) ಬಿಡುಗಡೆಗೊಳಿಸಿ ಮಾತನಾಡಿದರು. ಈ ದೇಶಕ್ಕೆ ತನ್ನದೇ ಆದ ಇತಿಹಾಸ ಹಾಗೂ ಸಂಸ್ಕೃತಿ ಇದೆ ಅದನ್ನು ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಆದರೆ ದುರ್ದೈವ ನಮ್ಮ ಯುವಜನಾಂಗ ಇದರ ಅರಿವಿಲ್ಲದೆ ಹಾದಿ ತಪ್ಪುತ್ತಿದ್ದಾರೆ ಎಂದು ವಿಷಾದಿಸಿದ ಅವರು ಈ ಕಾರ್ಯ ಮಠ ಮ್ಯಾನ್ಯಗಳಿಂದ ಮಾತ್ರ ಸಾಧ್ಯವೆಂದರು. ಊರಿಗೆ ಒಂದು ದೇವಾಲಯ ಹಾಗೂ ಶಾಲೆ ಇರಬೇಕು ಆಗ ಊರು ಶಾಂತಿ ನೆಮ್ಮದಿಯಿಂದ ಇರುತ್ತದೆ ಆದರೆ ಇಂದು ಊರಿಗೆ ಒಂದು ಪೊಲೀಸ್ ಠಾಣೆ ಇರುವಂತಾಗಿದೆ ಎಂದರು. ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅರಮೇರಿ ಕಲಂಚೇರಿ ಮಠದ ಶ್ರೀ…
ಮಡಿಕೇರಿ ಡಿ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳು ಡಿ.20 ರಂದು ನಡೆಸುತ್ತಿರುವ ಪ್ರತಿಭಟನೆಗೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ ನ ನಗರಾಧ್ಯಕ್ಷ ಸಂತೋಷ್ ಅನ್ವೇಕರ್ ಅವರು, ರೈತರು ದೇಶದ ಬೆನ್ನೆಲುಬಾಗಿದ್ದಾರೆ, ಅಲ್ಲದೆ ವ್ಯಾಪಾರಸ್ಥರ ಬಲವಾಗಿದ್ದಾರೆ. ಆದ್ದರಿಂದ ಶುಕ್ರವಾರ ಮಡಿಕೇರಿಯಲ್ಲಿ ನಡೆಯುವ ರೈತರ ಹೋರಾಟಕ್ಕೆ ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಬೆಂಬಲ ಸೂಚಿಸಿ ಉದ್ಯಮಿಗಳು ಹಾಗೂ ವರ್ತಕರು ಕೈಜೋಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಡಿಕೇರಿ ಡಿ.19 NEWS DESK : ಕೊಡಗು ಜಿಲ್ಲೆಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಂಡಿರುವವರು (ಮೀನು ಉತ್ಪಾದನೆ, ಹಿಡುವಳಿ, ಸಾಗಾಣಿಕೆ, ಮಾರಾಟ ಮತ್ತು ಅಲಂಕಾರಿಕ ಮೀನುಗಾರಿಕೆ ಹಾಗೂ ಮತ್ತಿತರ ಮೀನುಗಾರಿಕೆ ಚಟುವಟಿಕೆಗಳು) ಮೀನುಗಾರರು, ಮೀನು ಕೃಷಿಕರು “ರಾಷ್ಟ್ರೀಯ ಮೀನುಗಾರಿಕೆ ಡಿಜಿಟಲ್ ವೇದಿಕೆ” ಆನ್‍ಲೈನ್ ಪೊರ್ಟಲ್ URL: https://nfdp.dof.gov.in/nfdp/#/registration ನಲ್ಲಿ ನೋಂದಾಣಿ ಮಾಡಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಡಿ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆದಮುಳ್ಳೂರು-ಕಡಂಗ ಭಾಗದ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಭಾಗದ ಜನರ ಹಾಗೂ ವಾಹನ ಸವಾರರ ಬೇಡಿಕೆಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಾರಿಯ ಅಧಿಕ ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿದ್ದ ರಸ್ತೆಯ ದುರಸ್ತಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರು ವಿಶೇಷ ಅನುದಾನ ನೀಡಿದ್ದರು. ಮಳೆ ಕಡಿಮೆ ಆಗಿರುವುದರಿಂದ ರಸ್ತೆ ದುರಸ್ತಿ ಕಾಮಗಾರಿಯನ್ನು ಈಗ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಗುಣಮಟ್ಟದ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಪೋಕ್ಲು ಡಿ.19 NEWS DESK : ನೆಬ್ಬೂರು ಗೌಡ ಸಂಘದ ಹುತ್ತರಿ ಊರೋರ್ಮೆ ಸಂತೋಷಕೂಟವು ಕಟ್ರತನ ಬಾಣೆಯಲ್ಲಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಪೊನ್ನಚ್ಚನ, ಕೊಟ್ಟಕೇರಿಯನ ಮತ್ತು ಕಟ್ರತನ ಕುಟುಂಬಗಳು ಒಟ್ಟುಗೂಡಿ ನಡೆಸಿಕೊಂಡು ಬರುತ್ತಿರುವ ಹುತ್ತರಿ ಊರೋರ್ಮೆ ಕೂಟದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕಟ್ರತನ ಲೋಕನಾಥ್ ವಹಿಸಿ ಮಾತನಾಡಿ, ಸಂಘದ ಎಲ್ಲ ಸದಸ್ಯರ ಸಹಕಾರದಿಂದ ಮಾತ್ರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದರು. ಕಾರ್ಯಕ್ರಮವನ್ನು ಕಟ್ರತನ ಪ್ರಸಾದ್ ಉದ್ಘಾಟಿಸಿದರು. ಮಡಿಕೇರಿ ತಾಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ ಪ್ರಸ್ತಾವಿಕ ಮಾತನಾಡಿದರು. ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಪೊನ್ನಚ್ಚನ ರೋಹಿತ್ ವಾಚಿಸಿದರು. ಕಟ್ರತನ ರೋಹಿಣಿ ಸ್ವಾಗತಿಸಿದರು. ಕೊಟ್ಟಕೇರಿಯನ ಧರ್ಮೇಂದ್ರ ನಿರೂಪಿಸಿದರು. ಪೊನ್ನಚ್ಚನ ಡೈಸಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಟೋ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಡಿ.19 NEWS DESK : ಕರಿಕೆ ಎಳ್ಳುಕೊಚ್ಚಿ ಅಖಿಲ ಹಿಂದೂ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂದಿರದಲ್ಲಿ ರಾಘವ ಗುರು ಸ್ವಾಮಿಯ ನೇತೃತ್ವದಲ್ಲಿ 48ನೇ ವರ್ಷದ ದೀಪೋತ್ಸವ ನಡೆಯಿತು.
ಶ್ರೀನಗರ NEWS DESK ಡಿ.19 : ಸೈನಿಕರ ಮೇಲೆ ಗುಂಡಿನ ದಾಳಿ ಮಾಡಿದ ಐವರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೇನಾಪಡೆ ಗುರುವಾರ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಇಬ್ಬರು ಯೋಧರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರು ಇರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದರು. ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ಸಂದರ್ಭ ದಿಟ್ಟ ಉತ್ತರ ನೀಡಿದ ಭಾರತೀಯ ಸೈನಿಕರು ಐವರು ಉಗ್ರರನ್ನು ಹತ್ಯೆ ಮಾಡಿದರು.






