ಮಡಿಕೇರಿ ಡಿ.3 NEWS DESK : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳೋದಯ ಮಹಿಳಾ ಒಕ್ಕೂಟ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ಲಿಂಗಾಧಾರಿತ ದೌರ್ಜನ್ಯ ನಿವಾರಿಸುವ ಅರಿವು ಶಿಬಿರ ಹಾಗೂ ಏಡ್ಸ್ ದಿನಾಚರಣೆ” ನಡೆಯಿತು. ಮಾಲ್ದಾರೆ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಡಿಪಿ ಸಂಘದ ಮಹಿಳೆಯರಿಗೆ ಲಿಂಗಾಧಾರಿತ ದೌರ್ಜನ್ಯ ನಿವಾರಿಸುವ ಅರಿವು ಮೂಡಿಸಲಾಯಿತು. ಕಾರ್ಯಕ್ರಮವನ್ನು ಒಡಿಪಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಜಾಯ್ಸಿ ಮೇನೆಜರ್ಸ್ ಉದ್ಘಾಟಿಸಿ ಮಾತನಾಡಿ, ಒಡಿಪಿ ಸಂಘದ ಮುಖಾಂತರ ಮಹಿಳೆಯರು ಸಲೀಕರಣ ಹೊಂದಬೇಕು ಹಾಗೂ ಮಹಿಳೆಯರು ಲಿಂಗ ಸಮಾನತೆ ಸಾಧಿಸಬೇಕು. ಎಲ್ಲರೂ ಸಮಾನ ಎಂಬ ದೃಷ್ಟಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕಣ ಘಟಕದ ಜಿಲ್ಲಾ ಸಂಯೋಜಕರಾದ ಬಿ.ಎಸ್.ಮಮತ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದೊರೆಯುವ ಯೋಜನೆಗಳಾದ ಮಾತೃವಂದನಾ, ಸಖಿ ಒನ್ ಸ್ಟಾಪ್ ಸೆಂಟರ್,…
ಲೇಖಕ: admin
ಮಡಿಕೇರಿ ಡಿ.3 NEWS DESK : ಸಂವಿಧಾನ ಓದು ಅಭಿಯಾನವು ನಾಡಿನಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಡಿ.7 ಮತ್ತು 8 ರಂದು ಮಡಿಕೇರಿಯಲ್ಲಿ ಸಂವಿಧಾನ ಓದುವ ಅಧ್ಯಯನ ಶಿಬಿರ ನಡೆಯಲಿದೆ ಎಂದು ಅಭಿಯಾನದ ರಾಜ್ಯ ಕೇಂದ್ರ ಸಂಯೋಜಕ ವಿ.ರಾಜಶೇಖರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವನದಲ್ಲಿ ಎರಡು ದಿನಗಳು ನಡೆಯಲಿರುವ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ, ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕøತಿಕ ಹಾಗೂ ಪ್ರಗತಿಪರ ಆಶಯವುಳ್ಳ 200 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಶಿಬಿರವನ್ನು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರು ಉದ್ಘಾಟಿಸಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಎ.ಕೆ.ಲೋಕೇಶ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶರೀರ ಕ್ರಿಯಾ…
ಮಡಿಕೇರಿ ಡಿ.3 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರಸೇನಾನಿಗಳಾದ ಫೀ.ಮಾ.ಕೆ.ಎಂ. ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಅವರ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕು ಮತ್ತು ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಮೂಲಕ ತನಿಖೆಗೆ ಒಳಪಡಿಸಬೇಕೆಂದು ಟಿ.ಶೆಟ್ಟಿಗೇರಿ ಕೊಡವ ಸಂಘದ ಅಧ್ಯಕ್ಷ ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ವಿಶ್ವವೇ ಗೌರವದಿಂದ ನೋಡುವ ಫೀ.ಮಾ.ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅಂತಹವರ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿರುವುದು ಕೊಡಗಿನಲ್ಲಿ ನೆಲೆಸಿರುವ ನಿವೃತ್ತ ಸೈನಿಕರು ಸೇರಿದಂತೆ ಎಲ್ಲಾ ಸಮೂಹದವರಿಗೆ ನೋವನ್ನುಂಟುಮಾಡಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನವೆಂಬರ್ 29 ರಂದು ತಾವು ಶ್ರೀಮಂಗಲ ಠಾಣೆಯಲ್ಲಿ ಪ್ರಕರಣಕ್ಕೆ ಕಾರಣವಾಗಿರುವ ವ್ಯಕ್ತಿಯ ವಿರುದ್ಧ ದೂರನ್ನು ನೀಡಿದ್ದರು ಅದನ್ನು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದರು. ಮುಂದಿನ 15 ದಿನಗಳ ಒಳಗಾಗಿ ಪೊಲೀಸ್ ಇಲಾಖೆ ಪ್ರಕರಣದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ…
ಮಡಿಕೇರಿ NEWS DESK ಡಿ.2 : ಸಾಮಾಜಿಕ ಜಾಲತಾಣದಲ್ಲಿ ವೀರಸೇನಾನಿಗಳಾದ ಫೀ.ಮಾ.ಕೆ.ಎಂ. ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಅವರ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕು ಮತ್ತು ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಮೂಲಕ ತನಿಖೆಗೆ ಒಳಪಡಿಸಬೇಕೆಂದು ಟಿ.ಶೆಟ್ಟಿಗೇರಿ ಕೊಡವ ಸಂಘದ ಅಧ್ಯಕ್ಷ ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ವಿಶ್ವವೇ ಗೌರವದಿಂದ ನೋಡುವ ಫೀ.ಮಾ.ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅಂತಹವರ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿರುವುದು ಕೊಡಗಿನಲ್ಲಿ ನೆಲೆಸಿರುವ ನಿವೃತ್ತ ಸೈನಿಕರು ಸೇರಿದಂತೆ ಎಲ್ಲಾ ಸಮೂಹದವರಿಗೆ ನೋವನ್ನುಂಟುಮಾಡಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನವೆಂಬರ್ 29 ರಂದು ತಾವು ಶ್ರೀಮಂಗಲ ಠಾಣೆಯಲ್ಲಿ ಪ್ರಕರಣಕ್ಕೆ ಕಾರಣವಾಗಿರುವ ವ್ಯಕ್ತಿಯ ವಿರುದ್ಧ ದೂರನ್ನು ನೀಡಿದ್ದರು ಅದನ್ನು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದರು. ಮುಂದಿನ 15 ದಿನಗಳ ಒಳಗಾಗಿ ಪೊಲೀಸ್ ಇಲಾಖೆ ಪ್ರಕರಣದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ…
ಮಡಿಕೇರಿ NEWS DESK ಡಿ.2 : ನಿವೃತ್ತ ಪೊಲೀಸ್ ಅಧಿಕಾರಿಗಳ ಶ್ರೇಯೋಭಿವೃದ್ಧಿಗೆ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ‘ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ’ದ ಬೆಳ್ಳಿ ಮಹೋತ್ಸವ ಡಿ.10 ರಂದು ನಗರದ ಮೈತ್ರಿ ಸಭಾಂಗಣದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಗೌರವಾಧ್ಯಕ್ಷರಾದ ಮುಕ್ಕಾಟಿರ ಎ.ಅಪ್ಪಯ್ಯ, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯವರೇ ಆದ ಲೆಫ್ಟಿನೆಂಟ್ ಜನರಲ್(ನಿವೃತ್ತ) ಡಾ.ಪ್ರೊ.ಬಿ.ಎನ್.ಬಿ.ಮಹಾವೀರ ಪ್ರಸಾದ್ ಎಸ್‌ಎಂ, ವಿಎಸ್‌ಎಂ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆಯೆಂದು ತಿಳಿಸಿದರು. ಸಮಾರಂಭವನ್ನು ಜಿಲ್ಲೆಯ ಎಸ್‌ಪಿಯಾಗಿ ಕಾರ್ಯನಿರ್ವಹಿಸಿ, ಮೈತ್ರಿ ಸಭಾಂಗಣದ ನಿರ್ಮಾಣಕ್ಕೆ ಕಾರಣಕರ್ತರಾದ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್‌ರವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಜಾಯಿಂಟ್ ಕಂಟ್ರೋಲರ್ ಫೈನಾನ್ಸ್ ಬಿ.ಜಿ. ಮಾದಪ್ಪ, ಜಿಲ್ಲಾ ಪೊಲಿಸ್ ಅಧೀಕ್ಷಕರಾದ ಕೆ.ರಾಮರಾಜನ್ ಪಾಲ್ಗೊಳ್ಳಲಿದ್ದಾರೆ. ಸನ್ಮಾನ- ಸಮಾರಂಭದಲ್ಲಿ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಹಿಂದಿನ ಎಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳನ್ನು, ಸಂಘಕ್ಕೆ ಆರ್ಥಿಕ…
ಮೈಸೂರು NEWS DESK ಡಿ.2 : ಭಾರತ ಸರ್ಕಾರದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಕೊಡಗು, ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಇಂದು ಭೇಟಿ ಮಾಡಿದರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ನ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹುಣಸೂರು ಶಾಸಕ ಹರೀಶ್ ಗೌಡ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಮತ್ತಿತರರು ತಂಬಾಕು ಬೆಳೆಗಾರರ ಜೀವನೋಪಾಯದ ಮೇಲೆ ಪರಿಣಾಮ ಬೀರುವ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಚರ್ಚಿಸಲಾಯಿತು. ತಂಬಾಕು ಮಂಡಳಿಯ ಕಚೇರಿಯನ್ನು ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಿಸಬೇಕು, ತಂಬಾಕು ರೈತರಿಗೆ ಜೀವ ವಿಮಾ ಭದ್ರತೆಯನ್ನು ಹೆಚ್ಚಿಸಬೇಕು, ಅತಿವೃಷ್ಟಿಯಿಂದ ಆಗಿರುವ ನಷ್ಟವನ್ನು ತಗ್ಗಿಸಲು ತಂಬಾಕು ಮಂಡಳಿಯಿಂದ ಸಕಾಲದಲ್ಲಿ ಪರಿಹಾರ ನೀಡಬೇಕು ಎಂದು ಯದುವೀರ್ ಮನವಿ ಮಾಡಿದರು.
ಸೋಮವಾರಪೇಟೆ NEWS DESK ಡಿ.2 : ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜನರು ಎಚ್ಚರ ವಹಿಸುವಂತೆ ಸೋಮವಾರಪೇಟೆ ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ ಮನವಿ ಮಾಡಿದ್ದಾರೆ. ಹವಾಮಾನ ಇಲಾಖೆಯ ವರದಿಯಂತೆ ಡಿ.3 ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚಿನ ಕುಗ್ರಾಮಗಳಿದ್ದು, ರೈತಾಪಿ ವರ್ಗ ತಮ್ಮ ರಕ್ಷಣೆಯೊಂದಿಗೆ ಜಾನುವಾರುಗಳ ರಕ್ಷಣೆಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಮಡಿಕೇರಿ ಡಿ.2 NEWS DESK : ಶೋಷಿತ ಸಮುದಾಯಗಳ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಿ, ಅವರ ಧ್ವನಿ ಅಡಗಿಸಬೇಕೆನ್ನುವ ವಿರೋಧ ಪಕ್ಷಗಳ ಷಡ್ಯಂತ್ರವನ್ನು ಜನರ ಮುಂದೆ ತರುವ ಮೂಲಕ, ಅವರಲ್ಲಿ ಜಾಗೃತಿ ಮೂಡಿಸಿ ಮುಖ್ಯಮಂತ್ರಿಗಳ ಕೈ ಬಲಪಡಿಸುವ ಚಿಂತನೆಗಳಡಿ ಡಿ.5 ರಂದು ಹಾಸನದಲ್ಲಿ ‘ಸ್ವಾಭಿಮಾನಿ’ ಸಮಾವೇಶವನ್ನು ಆಯೋಜಿಸಿರುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಕೆ.ಎಸ್.ಶಿವರಾಂ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಗತಿಪರ ಸಂಘಟನೆಗಳ ಪರವಾಗಿ ಮಾತನಾಡಿದ ಅವರು, ಕಳೆದ ನಾಲ್ಕೂ ದಶಕಗಳಿಗಿಂತಲೂ ಹೆಚ್ಚಿನ ಕಾಲ ನಿಷ್ಕಳಂಕ ರಾಜಕಾರಣ ಮಾಡುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿ, ಹಿಂದುಳಿದ, ದಲಿತ, ಶೋಷಿತ ಸಮುದಾಯದ ಶಕ್ತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ದ್ವಿತೀಯ ಅವಧಿಗೆ ಮುಖ್ಯ ಮಂತ್ರಿಯಾಗಿ ಆಯ್ಕೆಯಾದ ಬಳಿಕ ವಿವಿಧ ಯೋಜನೆಗಳ ಮೂಲಕ ಸಮಾಜದ ಎಲ್ಲಾ ಸ್ತರಗಳ ಜನರ ಅಭ್ಯಯದಯಕ್ಕೆ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ. ಇದೇ ರೀತಿಯಲ್ಲಿ ಇವರು ತಮ್ಮ ಅತ್ಯುತ್ತಮವಾದ ಆಡಳಿತವನ್ನು ಮುಂದುವರಿಸಿದಲ್ಲಿ ತಮ್ಮ…
ಮಡಿಕೇರಿ ಡಿ.2 NEWS DESK : ಹೆಚ್‍ಐವಿ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಹಾಗೂ ಜಾಗೃತಿ ಮೂಡಿಸುವುದಕ್ಕಾಗಿ ಹಾಗೂ ಇದನ್ನು ಎದುರಿಸಲು ಮುಂದಿರುವ ಸವಾಲುಗಳ ಬಗ್ಗೆ ಚಿಂತಿಸುವ ದಿನ ಇದಾಗಿದೆ ಎಂದು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ‘ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ, ನನ್ನ ಆರೋಗ್ಯ ನನ್ನ ಹಕ್ಕು’ ಎಂಬ ಘೋಷವಾಕ್ಯದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ವಿಶ್ವ ಏಡ್ಸ್…
ಮಡಿಕೇರಿ ಡಿ.2 NEWS DESK : ಕೊಡಗು ಜಿಲ್ಲೆಯಲ್ಲಿ ಈ ಹಿಂದೆ 500 ಮಂದಿ ಗೃಹರಕ್ಷಕರನ್ನು ನಿಯೋಜಿಸಿಕೊಳ್ಳಲು ಅವಕಾಶ ಇತ್ತು, ಆದರೆ ಯಾರೂ ಸಹ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸಲು ಮುಂದೆ ಬರದಿರುವ ಹಿನ್ನೆಲೆ 200 ಜನರನ್ನು ಕಡಿಮೆ ಮಾಡಿ, 300 ಮಂದಿ ನೇಮಕದಲ್ಲಿ 187 ಮಂದಿ ಮಾತ್ರ ಗೃಹರಕ್ಷಕದಳ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಜಿಲ್ಲಾ ಗೃಹ ರಕ್ಷಕದಳ ವತಿಯಿಂದ ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ನಡೆದ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇರೆ ಬೇರೆ ಜಿಲ್ಲೆಗಳಲ್ಲಿ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸಲು ಸ್ವಯಂ ಪ್ರೇರಣೆಯಿಂದ ಮುಂದೆ ಬರುತ್ತಾರೆ. ಆ ನಿಟ್ಟಿನಲ್ಲಿ ವೃತ್ತಿಯನ್ನು ಗೌರವಿಸಿ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ಗೃಹರಕ್ಷಕ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸುವ ದಿನಕ್ಕೆ 500 ರೂ. ನೀಡಲಾಗುತ್ತದೆ. ಗೃಹರಕ್ಷಕರು ಪೊಲೀಸರಂತೆ ಕರ್ತವ್ಯ ನಿರ್ವಹಿಸುವುದನ್ನು ಕಾಣುತ್ತೇವೆ ಎಂದು ಅವರು…






