ಮಡಿಕೇರಿ NEWS DESK ಡಿ.18 : ಸಂಪೂರ್ಣವಾಗಿ ಹದಗೆಟ್ಟಿರುವ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆAದು ಒತ್ತಾಯಿಸಿ ಗಾಳಿಬೀಡು, ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ ಹಾಗೂ ಹೆಬ್ಬೆಟ್ಟಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮೂರನೇ ಮೈಲು ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಲಿಖಿತ ಭರವಸೆ ನೀಡುವಲ್ಲಿಯವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ಗಾಳಿಬೀಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ ಹಲವು ವರ್ಷಗಳಿಂದ ಡಾಂಬರೀಕರಣವಾಗಿಲ್ಲ. ಹೊಂಡ ಗುಂಡಿಗಳಿoದ ಕೂಡಿರುವ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾತ್ರ ನಡೆಯುತ್ತಿದೆ. ಈಗಲೂ ತೇಪೆ ಹಾಕುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದು, ಇದನ್ನು ಗ್ರಾಮಸ್ಥರು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು. ಹದಗೆಟ್ಟ ರಸ್ತೆ ಕಾಲೂರು, ವಣಚಲು, ಕೂಟುಹೊಳೆ, ಕೆ.ನಿಡುಗಣೆ, ಹೆಬ್ಬೆಟ್ಟಗೇರಿ, ಪ್ರಾಕೃತಿಕ ವಿಕೋಪದ ನೆರೆ ಸಂತ್ರಸ್ಥರ ಮನೆಗಳಿಗೆ ಹಾಗೂ ಮಡಿಕೇರಿ ನಗರವನ್ನು ಸಂಪರ್ಕಿಸುವ ರಸ್ತೆಯಾಗಿದೆ. ಈ ಭಾಗದಲ್ಲೇ ಜನಪ್ರಿಯ ಪ್ರವಾಸಿತಾಣ ಮಾಂದಲ್ ಪಟ್ಟಿ ಮತ್ತು ಹಲವು ಪ್ರತಿಷ್ಠಿತ ರೆಸಾರ್ಟ್ಗಳಿವೆ. ನಿತ್ಯ ಸಾವಿರಾರು ವಾಹನಗಳ…
ಲೇಖಕ: admin
ಮಡಿಕೇರಿ ಡಿ.18 NEWS DESK : ಹಲವಾರು ವರ್ಷಗಳಿಂದ ಹಾಕತ್ತೂರು ಗ್ರಾಮಸ್ಥರ ಬೇಡಿಕೆಯಾಗಿದ್ದ ಶಾಲಾ ಆಟದ ಮೈದಾನದ ಅಗಲೀಕರಣ ಕಾರ್ಯವು ಆರಂಭಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಕತ್ತೂರು ಮೈದಾನದಲ್ಲಿ ನಡೆದ ಹಾಕತ್ತೂರು ಪ್ರೀಮಿಯರ್ ಲೀಗ್ ನ ವೇದಿಕೆಯಲ್ಲಿ ಮೈದಾನದ ಅಭಿವೃದ್ಧಿಗಾಗಿ ಅನುದಾನ ನೀಡುವ ಆಶ್ವಾಸನೆ ನೀಡಿದ್ದ ಶಾಸಕರು ನುಡಿದಂತೆ ನಡೆದು ಹಾಕತ್ತೂರು ಮೈದಾನದ ಕಾಮಗಾರಿಗೆ 20 ಲಕ್ಷ ಅನುದಾನ ನೀಡಿ ಕೆಲಸ ಕಾರ್ಯಗಳು ಇದೀಗ ಆರಂಭಗೊಂಡಿದೆ. ಗ್ರಾಮಸ್ಥರು ನುಡಿದಂತೆ ನಡೆದ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.
ಜಮ್ಮು NEWS DESK ಡಿ.18 : ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಥುವಾ ಜಿಲ್ಲೆಯ ಶಿವನಗರ ಪ್ರದೇಶದ ಮನೆಯೊಂದರಲ್ಲಿ ಇದ್ದವರು ಮಲಗಿದ್ದಾಗ ದಟ್ಟ ಹೊಗೆ ತುಂಬಿಕೊoಡು, ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ನಸುಕಿನ ಜಾವ 2.30ರ ಸುಮಾರಿಗೆ ಈ ಅಗ್ನಿ ಅವಘಡ ನಡೆದಿದೆ.
ಸುಂಟಿಕೊಪ್ಪ ಡಿ.18 NEWS DESK : ಮಾದಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಂ.ಜಿ.ಸೋಮಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾದಾಪುರ ಗ್ರಾ.ಪಂ ಅಧ್ಯಕ್ಷರಾಗಿದ್ದ ಮನುಬಿದ್ದಪ್ಪ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷರ ಮೀಸಲಾತಿ ನಿಗದಿಯಾಗಿದ್ದು, ಮರುವಂಡ ಜಾಲಿ ಸೋಮಣ್ಣ ಹಾಗೂ ಕೆ.ಎ.ಲತೀಫ್ ನಾಮಪತ್ರ ಸಲ್ಲಿಸಿದರು. ಕೊನೆಯ ಹಂತದಲ್ಲಿ ಕೆ.ಎ.ಲತೀಫ್ ನಾಮಪತ್ರ ಹಿಂಪಡೆದಿದ್ದರಿಂದ ಚುನಾವಣಾ ಅಧಿಕಾರಿಯಾಗಿದ್ದ ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಎಂ.ಜಿ.ಸೋಮಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿದರು. ಮಾದಾಪುರ ಗ್ರಾ.ಪಂ.ಉಪಾಧ್ಯಕ್ಷ ಸುರೇಶಭಾವೆ, ಸದಸ್ಯರುಗಳಾದ ಕೆ.ಎ.ಲತೀಪ್, ಮನುಬಿದ್ದಪ್ಪ, ನಿರೂಪ, ಪಿ.ಡಿ.ಅಂತೋಣಿ(ತಂಗಚ್ಚ), ಮಾನಸ, ದಮಯಂತಿ, ಕೆ.ಸಿಶೀಲ, ಗಿರೀಶ, ಜೆರ್ಮಿ, ಭಾಗಿರಥಿ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ, ಕಾರ್ಯದರ್ಶಿ ಅನಿತಾ, ಸಿಬ್ಬಂದಿಗಳಾದ ರವಿ, ಪ್ರೀತಿ ಉಪಸ್ಥಿತರಿದ್ದರು.
ಸಿದ್ದಾಪುರ ಡಿ.18 NEWS DESK : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು. ರಾತ್ರಿ ದೇವಾಲಯದ ಗದ್ದೆಯಿಂದ ಧಾನ್ಯಲಕ್ಷ್ಮಿಯ ಕದಿರು ತೆಗೆದು ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೇವಾಲಯದ ಅಧ್ಯಕ್ಷ ಪಾಲಚಂಡ ಚೀಯಣ್ಣ, ಕಾರ್ಯದರ್ಶಿ ರಾಜನ್, ಉಪಾಧ್ಯಕ್ಷ ದಾಸನ್, ಎಸ್‌ಎನ್‌ಡಿಪಿ ಅಧ್ಯಕ್ಷ ವಿ.ಕೆ.ಲೋಕೇಶ್, ಮಾಜಿ ಕಾರ್ಯದರ್ಶಿ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕುಶಾಲನಗರ ಡಿ.18 NEWS DESK : ಕುಶಾಲನಗರ ಪಟ್ಟಣ ಒಳಚರಂಡಿ ಯೋಜನೆ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಕುಶಾಲನಗರ ಪುರಸಭೆ ಸದಸ್ಯರಾದ ಡಿ.ಕೆ.ತಿಮ್ಮಪ್ಪ ತಿಳಿಸಿದ್ದಾರೆ. ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ನಡೆದ 167 ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪುರಸಭೆ ವತಿಯಿಂದ ಈಗಾಗಲೇ ಪಟ್ಟಣ ವಿವಿಧ ಬಡಾವಣೆಗಳಲ್ಲಿ ನೇರವಾಗಿ ನದಿಗೆ ಸೇರುತ್ತಿದ್ದ ಕಲುಷಿತ ನೀರನ್ನು ನೈಸರ್ಗಿಕವಾಗಿ ಯು ಜಿ ಡಿ ಕೊಳವೆಗಳ ಮೂಲಕ ಹಾಯಿಸಿ ನದಿ ನೇರವಾಗಿ ಕಲುಷಿತಗೊಳ್ಳುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದಿನ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಹಾಗೂ ಈಗಿನ ಕ್ಷೇತ್ರ ಶಾಸಕರಾದ ಡಾ ಮಂತರ್ ಗೌಡ ಒಳಚರಂಡಿ ಯೋಜನೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ಸದ್ಯದಲ್ಲೇ ಯೋಜನೆ ಪೂರ್ಣಗೊಂಡು ನದಿ ಕಲುಷಿತ ಮತ್ತು ಪಟ್ಟಣದ ಸ್ವಚ್ಛತೆಯ ಗುರಿ ಈ ಮೂಲಕ ಸಾಧನೆ ಸಾಧ್ಯವಾಗಲಿದೆ ಎಂದರು. ನಿರಂತರವಾಗಿ ಜೀವನದಿ ಕಾವೇರಿಗೆ…
ಮಡಿಕೇರಿ ಡಿ.18 NEWS DESK : 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://sevasindhu.karnataka.gov.in ಆಗಿದೆ. ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ : ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ. ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ : ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್‍ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್‍ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ…
*ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ಎಲ್ಲಾ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಡಿ.20 ರಂದು ಬೆಳಿಗ್ಗೆ 10 ಗಂಟೆಗೆ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ* ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ ಭೂಮಿಯಾಗಿದ್ದು, ಅದನ್ನು ಅರಣ್ಯ ಇಲಾಖೆಯ…
ಮಡಿಕೇರಿ ಡಿ.17 NEWS DESK : 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್‍ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫ಼ೌಂಡೇಶನ್‌ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫ಼ೌಂಡೇಶನ್‌ನ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿದ್ದಾರೆ.
ಮಡಿಕೇರಿ ಡಿ.17 NEWS DESK : ಮಕ್ಕಳಿಗೆ ಮಾನವೀಯ ಹಾಗೂ ಮೌಲ್ಯಯುತ ಶಿಕ್ಷಣ ನೀಡುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಪ್ರತಿಪಾದಿಸಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಆರ್‍ಟಿಇ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಬಗ್ಗೆ ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ’ ಕುರಿತು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಜೀವನದ ಪರಿಪೂರ್ಣ ಬೆಳವಣಿಗೆಗೆ ಮೌಲ್ಯಯುತ ಶಿಕ್ಷಣ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ಸಲಹೆ ನೀಡಿದರು. ಮಕ್ಕಳ ಹಕ್ಕುಗಳ ಕುರಿತು ಸಾಕಷ್ಟು ಕಾನೂನುಗಳು, ಕಾಯ್ದೆಗಳು ಇದ್ದರೂ ಸಹ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆ, ದೌರ್ಜನ್ಯಗಳು ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವಂತಾಗಬೇಕು. ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನಿಗಾವಹಿಸಬೇಕು.…






