ಲೇಖಕ: admin

ಮಡಿಕೇರಿ ನ.30 NEWS DESK : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ ನಡೆಯಲಿದೆ. ಸಮಾರಂಭದಲ್ಲಿ ನಿವೃತ್ತ ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು ಭೀಮಯ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ ಸುಜಾ ಕುಶಾಲಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಮತ್ತು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಲೆ, ಸಾಹಿತ್ಯದಲ್ಲಿ ಭಾಗವಹಿಸುವುದರ ಮೂಲಕ ಪ್ರತಿಭೆಯನ್ನು ಹೊರ ಹಾಕಬೇಕು. ಮಕ್ಕಳ ಪ್ರತಿಭೆಗೆ ಪೋಷಕರು ಸಹಕಾರ ನೀಡಬೇಕು. ಯಾವುದರಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗುರುತಿಸಿ ಶಿಕ್ಷಕರು ಅದಕ್ಕೆ ಪ್ರೋತ್ಸಾಹ ನೀಡಿ ವಿದ್ಯಾರ್ಥಿಗಳ ಬೆಳವಣಿಗೆಗೆ ಮಾರ್ಗದರ್ಶಕರಾಗಬೇಕು ಎಂದರು. ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ…

Read More

ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನೈತಿಕ ಹಾಗೂ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ ಕೊಡುಗೆ ನೀಡಬೇಕೆಂದು ಮೈಸೂರು ಚಾಮರಾಜ ಜೋಡಿ ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಕರೆ ನೀಡಿದರು. ಮದೆನಾಡಿನ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ ನಡೆದ ನುಡಿಹಬ್ಬ ಹಾಗೂ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ  ಪೋಷಕರು, ಶಿಕ್ಷಕರು, ಹಿರಿಯರನ್ನು ಗೌರವಿಸುವ ಜೊತೆಗೆ ತಮ್ಮ ಭಾಷೆ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕಡೆಗೆ ಗಮನ ಹರಿಸಬೇಕು. ಸಮಾಜಕ್ಕೆ ನಾವು ಕೊಡುಗೆ ನೀಡಿದರೆ ಸಮಾಜ ನಮ್ಮನ್ನು ಸದಾ ಸ್ಮರಿಸುತ್ತದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮದೆಮಹೇಶ್ವರ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ ಮಾತನಾಡಿ, ಮಕ್ಕಳು ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗುಡಿಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಮೇಲ್ವಿಚಾರಕ ಸಚಿನ್, ಮುಖ್ಯಪಾಧ್ಯಾಯಿನಿ ಮುದ್ಯನ ಪುನೀತ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು…

Read More

ಮಡಿಕೇರಿ ನ.30 NEWS DESK  : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಸೇರಿದ  ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ QR code  ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ  ಪ್ರಮೋದ್ ಗಣಪತಿ , ಉಪಾಧ್ಯಕ್ಷರಾದ ಮಂಜುಳ, ಶಾಲಾ ಸಿಬ್ಬಂದಿಗಳು , ಮಕ್ಕಳು ಹಾಗೂ ಇತರೆ ಮುಖಂಡರುಗಳು ಹಾಜರಿದ್ದರು.

Read More

ಮಡಿಕೇರಿ ನ.30 NEWS DESK : ಗೋಣಿಕೊಪ್ಪ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮಂಜುಳ , ಅಗ್ನಿ ಶಾಮಕ ಅಧಿಕಾರಿಗಳು ,ಇತರೆ ಸಿಬ್ಬಂದಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.

Read More

ಸೋಮವಾರಪೇಟೆ ನ.30 NEWS DESK : ಸಿ ಆ್ಯಂಡ್ ಡಿ(ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ)ಮತ್ತು ಸರ್ಕಾರಿ ಒತ್ತುವರಿ ಭೂಮಿಗೆ ರೈತರಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಡಿ.20 ರಂದು ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹಾರಂಗಿ ಅಣೆಕಟ್ಟು ಮುಳುಗಡೆಯಿಂದ 3700 ಎಕರೆ, ಹೇಮಾವತಿ ಅಣೆಕಟ್ಟೆಯಿಂದ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ 11ಸಾವಿರ ಎಕರೆ ಭೂಮಿಯನ್ನು ಕಳೆದುಕೊಂಡಿದ್ದೇವೆ. ಈಗ ಕೃಷಿ ಮಾಡಿಕೊಂಡಿರುವ 25 ಸಾವಿರ ಎಕರೆ ಭೂಮಿಯನ್ನು ಸಿ ಆ್ಯಂಡ್ ಡಿ ನೆಪದಲ್ಲಿ ಅರಣ್ಯ ಇಲಾಖೆಗೆ ನೀಡಲು ತಯಾರಿ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಕೃಷಿ ಮಾಡುತ್ತಿರುವ ರೈತರ ಭೂಮಿ ಅಭಯಾರಣ್ಯವಾದರೆ ನೂರಾರು ವರ್ಷಗಳಿಂದ ಬದುಕುತ್ತಿರುವ ರೈತರು ಬೀದಿ ಪಾಲಾಗಬೇಕಾಗುತ್ತದೆ ಎಂದು ನೋವು ತೋಡಿಕೊಂಡರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟವಲ್ಲ. ಆದರೆ ರೈತರಿಗೆ ಅನ್ಯಾಯ ಮಾಡುವ ಯಾವುದೇ ಸರ್ಕಾರಗಳು ಉಳಿಯಲು ಸಾಧ್ಯವಿಲ್ಲ. ಕೂಡಲೆ…

Read More

ಮಡಿಕೇರಿ ನ.30 NEWS DESK : ರಾಷ್ಟ್ರದ ಗಡಿಗಳ ಮತ್ತು ಆಂತರಿಕ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅರೆಸೇನಾಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಯೋಧರ ಹಾಗೂ ಅವರ ಕುಟುಂಬದ ಮೂಲಭೂತ ಸಮಸ್ಯೆಗಳಿಗೆ ಅಗತ್ಯ ಸ್ಪಂದನ ದೊರಕಬೇಕೆನ್ನುವ ಆಶಯ ಕೊಡಗು ಜಿಲ್ಲಾ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆಯಲ್ಲಿ ವ್ಯಕ್ತವಾಯಿತು. ನಗರದ ಪೊಲೀಸ್ ಸಮುದಾಯ ಭವನ ಮೈತ್ರಿಯಲ್ಲಿ ನಡೆದ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ಮಹಾಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಪಲಿಯಂಡ ಚಂಗಪ್ಪ ಅವರು ಮಾತನಾಡಿ, ಬಿಎಸ್‍ಎಫ್, ಸಿಆರ್‍ಪಿಎಫ್, ಸಿಐಎಸ್‍ಎಫ್ ಮತ್ತು ಎಸ್‍ಎಸ್‍ಬಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರು ಸಾಕಷ್ಟು ಸಮಸ್ಯೆಗಳನ್ನು ಹೊಂದಿದ್ದಾರೆ. ಇವುಗಳ ನಿವಾರಣೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಯಬೇಕಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಶೀಲರಾಗಿರುವುದಾಗಿ ತಿಳಿಸಿದರು. ಹಾಸನದಲ್ಲಿ ರಾಜ್ಯದ ಏಕೈಕ ಸ್ವಂತ ಕಟ್ಟಡ :: ಕೊಡಗು ಜಿಲ್ಲೆಯಲ್ಲಿ ಅರೆಸೇನಾಪಡೆಗಳ ಒಕ್ಕೂಟ ಕಳೆದ ಒಂದು ದಶಕಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿದ್ದರು, ಅಗತ್ಯ ಆರ್ಥಿಕ ಶಕ್ತಿಯನ್ನು ಹೊಂದಿಲ್ಲವೆಂದು ತಿಳಿಸಿ, ಪ್ರಸ್ತುತ ಇಡೀ ರಾಜ್ಯದಲ್ಲೆ ಹಾಸನದಲ್ಲಿ ಅರೆಸೇನಾಪಡೆಗಳ ಸಂಘಟನೆ…

Read More

ಮಡಿಕೇರಿ ನ.30 NEWS DESK : ಮೂರ್ನಾಡು ವೃತ್ತಕ್ಕೆ ಒಳಪಡುವ ಹೂಕಾಡು ಅಂಗನವಾಡಿ ಕೇಂದ್ರದಲ್ಲಿ ಸಮುದಾಯದ ಸಹಕಾರದಿಂದ ಬಾಲಮೇಳ ಕಾರ್ಯಕ್ರಮ ನಡೆಯಿತು.  ಕೇಂದ್ರದ ಪುಟಾಣಿ ಚಾತ್ವಿಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಛದ್ಮವೇಷ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಬಗೆಬಗೆಯ ವೇಷ ಧರಿಸಿ ಪಾಲ್ಗೊಂಡ ಪುಟಾಣಿಗಳು ಗಮನ ಸೆಳೆದರು. ಕಾಳು ಹೆಕ್ಕುವ ಸ್ಪರ್ಧೆ, ಕಪ್ಪೆ ಜಿಗಿತ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಪ್ಪೆ ಜಿಗಿತದಲ್ಲಿ ದಕ್ಷಿಕ ಎಂ.ವೈ. ಪ್ರಥಮ, ದೇಶಿಕ ಕೆ.ಎಸ್. ದ್ವಿತೀಯ, ಲಿಯಾನ ಪಿ.ಎಲ್. ತೃತೀಯ, ಮತ್ತು ಕಾಳು ಹೆಕ್ಕುವ ಸ್ಪರ್ಧೆಯಲ್ಲಿ ಚಾತ್ವಿಕ್ ಪ್ರಥಮ , ತ್ರಿಶೂಲ್ ದ್ವಿತೀಯ, ದಕ್ಷಿಕಾ ತೃತೀಯ ಬಹುಮಾನ ಪಡೆದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾರ್ಗದರ್ಶನದಂತೆ ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಲೀಲಾ ಅವರ ಪರಿಶ್ರಮದಿಂದ ಎಲ್ಲಾ ಮಕ್ಕಳ ಹೆಸರಿನಲ್ಲಿ ಪೋಷಕರಿಂದ ತರಕಾರಿ ಕುಂಡಗಳನ್ನು ಕೇಂದ್ರಕ್ಕೆ ಪಡೆಯಲಾಯಿತು. ಪೋಷಕರಾದ ಸತೀಶ್ ಸಿಹಿ ವಿತರಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಯಶೋಧ, ಬಾಲವಿಕಾಸ ಸಮಿತಿಯ…

Read More

ಮಡಿಕೇರಿ ನ.30 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ಡಿಸೆಂಬರ್, 03 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ…

Read More

ಮಡಿಕೇರಿ ನ.30 NEWS DESK :  ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ.2 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Read More