ಮಡಿಕೇರಿ NEWS DESK ಅ.31 : ಕೊಡಗು- ಕೇರಳದ ಗಡಿ ಗ್ರಾಮ ಕರಿಕೆಯಲ್ಲಿ ಚಿರತೆ ಆತಂಕ ಎದುರಾಗಿದೆ. ಕರಿಕೆ ಗ್ರಾಮದ ಪೆಚ್ಚೆಪಿಲಾವ್ ಎಂಬಲ್ಲಿ ಹರೀಶ್ ಎಂಬುವವರ ಮನೆಯ ಸಾಕು ನಾಯಿಯನ್ನು ಚಿರತೆಯೊಂದು ಎಳೆದೊಯ್ದ ಘಟನೆ ಅ.30ರ ರಾತ್ರಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರಿಂದ ಮಾಹಿತಿ ಪಡೆದರು. ಕರಿಕೆಯ ವಿವಿಧ ಗ್ರಾಮಗಳಲ್ಲಿ ವನ್ಯಜೀವಿಗಳ ಉಪಟಳ ಹೆಚ್ಚಾಗಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. (ವರದಿ : ಶಿವಗಿರಿ ರಾಜೇಶ್, ಕರಿಕೆ)
ಲೇಖಕ: admin
ಸೋಮವಾರಪೇಟೆ NEWS DESK ಅ.31 : ಸೋಮವಾರಪೇಟೆ ಪಟ್ಟಣದ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಪುಣ್ಯ ಸ್ಮರಣ ಕಾರ್ಯಕ್ರಮ ಗುರುವಾರ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭ ಸದಸ್ಯರಾದ ಪಳನಿಸ್ವಾಮಿ, ಅಜೇಯ್ ಕುಮಾರ್, ರಾಘವ, ಪುನಿತ್, ಎನ್.ಆರ್.ರವಿ ಇದ್ದರು.
ಸೋಮವಾರಪೇಟೆ NEWS DESK ಅ.31 : ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನ.1 ರಂದು 17ನೇ ವರ್ಷದ ಅದ್ಧೂರಿ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವೇದಿಕೆ ಸಿದ್ದಗೊಂಡಿದೆ. ಶುಕ್ರವಾರ ಬೆಳಿಗ್ಗೆ 7-30ಕ್ಕೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನೆರವೇರಲಿದೆ. ನಂತರ ಆಸ್ಪತ್ರೆಯ ಒಳರೊಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುತ್ತದೆ. 9ಕ್ಕೆ ಕಕ್ಕೆಹೊಳೆ ಬಳಿಯ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮೆರವಣಿಗೆಯಲ್ಲಿ ತೆರಳಿ ಪಟ್ಟಣದ ಎಲ್ಲ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. 10-30ಕ್ಕೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿನ ಬೃಹತ್ ವೇದಿಕೆಯಲ್ಲಿ ರಾಜ್ಯೋತ್ಸವದ ಕುಣಿಯೋಣು ಬಾರಾ ನೃತ್ಯ ಸ್ಪರ್ಧೆ ಪ್ರಾರಂಭವಾಗಲಿದೆ. ಇದರಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ನೃತ್ಯ ಸ್ಪರ್ಧೆ ನಡೆಯುತ್ತದೆ. ಶುಕ್ರವಾರ ಬೆಳಿಗ್ಗೆ ಕೂಡ ನೃತ್ಯ ತಂಡಗಳು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ. ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ನಂತರ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯನ್ನು ನಡೆಯುತ್ತದೆ. ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕ ಡಾ.…
ಮಡಿಕೇರಿ NEWS DESK ಅ.31 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮಡಿಕೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾದ ಅವರು ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಮನವಿ ಪತ್ರ ಸಲ್ಲಿಸಿದರು.
ಕುಶಾಲನಗರ NEWS DESK ಅ.31 : ಇದೇ ಡಿ.13ರಂದು ಕುಶಾಲನಗರದಲ್ಲಿ ನಡೆಯುವ ಅದ್ದೂರಿ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಅವರ ಸಮ್ಮುಖದಲ್ಲಿ ದಶಮಂಟಪ ಸಮಿತಿಗಳ ಪ್ರಮುಖರ ಸಭೆ ನಡೆಯಿತು. ಈ ಬಾರಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಎಂಟು ಮಂಟಪಗಳು ಪಾಲ್ಗೊಳ್ಳಲಿದ್ದು ಈ ಸಂಬಂಧ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ನಡೆಸಲು ಸದ್ಯದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಶಾಸಕ ಮಂತರ್ ಗೌಡ ಹೇಳಿದರು. ಕಾನೂನು ಚೌಕಟ್ಟಿನಲ್ಲಿ ಹಬ್ಬ ಆಚರಣೆ ನಡೆಯುವ ಮೂಲಕ ಹನುಮ ಜಯಂತಿಯನ್ನು ನಾಡಹಬ್ಬವಾಗಿ ಆಚರಣೆ ಮಾಡುವ ಬಗ್ಗೆ ತಿಳಿಸಿದ ಶಾಸಕರು ಮಡಿಕೇರಿ ದಸರಾ ರೀತಿಯಲ್ಲಿ ಹನುಮ ಜಯಂತಿ ಆಚರಣೆ ನಡೆಸಲು ಸಲಹೆ ನೀಡಿದರು. ಈ ಸಂದರ್ಭ ಕುಶಾಲನಗರ ಪಟ್ಟಣದ ವ್ಯಾಪ್ತಿಯಲ್ಲಿ ದೀಪ ಅಲಂಕಾರ ಹಾಗೂ ಪಾಲ್ಗೊಳ್ಳುವ ಸಾವಿರಾರು ಸಂಖ್ಯೆಯ ಭಕ್ತಾದಿಗಳಿಗೆ ಅಗತ್ಯವಿರುವ ಊಟ ಉಪಚಾರ ವ್ಯವಸ್ಥೆ ಕಲ್ಪಿಸುವಂತೆ ಶಾಸಕರು ಸಮಿತಿ ಪ್ರಮುಖರಿಗೆ ತಿಳಿಸಿದರು. ಮಂಟಪಗಳ ಮೆರವಣಿಗೆ ಮತ್ತು ಪ್ರದರ್ಶನ ಅವಧಿಯನ್ನು ವಿಸ್ತರಣೆ ಮಾಡುವಂತೆ…
ಮಡಿಕೇರಿ NEWS DESK ಅ.30 : ರಾತ್ರಿ ವೇಳೆ ಕೆಎಸ್‌ಆರ್‌ಟಿಸಿ ಬಸ್ ಗಳು ಮಡಿಕೇರಿ ಬಸ್ ನಿಲ್ದಾಣಕ್ಕೆ ಬಾರದೆ ಜನರಲ್ ತಿಮ್ಮಯ್ಯ ವೃತ್ತದಲ್ಲೇ ಪ್ರಯಾಣಿಕರನ್ನು ಇಳಿಸುತ್ತಿವೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಹ ಕಾರ್ಯದರ್ಶಿ ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಪ್ರಯಾಣಿಕರು ಪಡುತ್ತಿರುವ ಕಷ್ಟದ ಕುರಿತು ವಿವರಿಸಿದರು. ರಾತ್ರಿ ವೇಳೆ ಮಂಗಳೂರು, ಬೆಂಗಳೂರು, ಮೈಸೂರು ಕಡೆಯಿಂದ ಬರುವ ಬಸ್ ಗಳು ಮಡಿಕೇರಿ ಬಸ್ ನಿಲ್ದಾಣಕ್ಕೆ ಹೋಗದೆ ಪ್ರಯಾಣಿಕರನ್ನು ಜನರಲ್ ತಿಮ್ಮಯ್ಯ ವೃತ್ತದಲ್ಲೇ ಇಳಿಸಲಾಗುತ್ತಿದೆ. ಮಧ್ಯರಾತ್ರಿಯಲ್ಲಿ ಪ್ರಯಾಣಿಕರು ಭಯದ ವಾತಾವರಣವನ್ನು ಎದುರಿಸಬೇಕಾಗಿದೆ. ನಿಗಧಿತ ಸ್ಥಳಗಳಿಗೆ ತೆರಳಲು ಆಟೋರಿಕ್ಷಾಗಳಿಗೆ ದುಬಾರಿ ದರ ನೀಡಬೇಕಾಗಿದೆ. ಬೀದಿನಾಯಿಗಳು ಪ್ರಯಾಣಿಕರ ಮೇಲೆ ದಾಳಿ ಮಾಡುತ್ತಿವೆ. ಬಸ್ ಸಿಬ್ಬಂದಿಗಳು ಪ್ರಯಾಣಿಕರ ಹಿತ ಕಾಪಾಡದೆ ಹಾರಿಕೆಯ ಉತ್ತರ ನೀಡಿ ಮರಳುತ್ತಿದ್ದಾರೆ ಎಂದು ಇಬ್ರಾಹಿಂ ಆರೋಪಿಸಿದರು. ತಕ್ಷಣ ಸ್ಪಂದಿಸಿದ ಡಿಪೋ ವ್ಯವಸ್ಥಾಪಕರು ಸಂಬಂಧಪಟ್ಟವರಿಗೆ ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಮಡಿಕೇರಿ NEWS DESK ಅ.30 : ಕರ್ನಾಟಕ ಏಕೀಕರಣ ಮತ್ತು ಸ್ವಾತಂತ್ರö್ಯ ಹೋರಾಟದಲ್ಲಿ ಕರ್ನಾಟಕದ ಮಹಿಳೆಯರ ಪಾತ್ರ ಸ್ಮರಣೀಯವಾದುದೆಂದು ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೂಡಕಂಡಿ ದಯಾನಂದ ಹೇಳಿದರು. ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಳೆಜಿನ ಸಹಯೋಗದೊಂದಿಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕದ ಏಕೀಕರಣ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಕರ್ನಾಟಕದ ಮಹಿಳೆಯರು ಎಂಬ ವಿಷಯದಡಿ ಏರ್ಪಡಿಸಲಾಗಿದ್ದ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಉಪನ್ಯಾಸ ನೀಡಿದರು. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಎರಡು ಬಗೆಯ ಚಳವಳಿ ನಡೆದಿದೆ. ಒಂದು ರಾಜ್ಯದೊಳಗಡೆ ಆದರೆ ಮತ್ತೊಂದು ರಾಷ್ಟ್ರ ಮಟ್ಟದಲ್ಲಿ ಆಗಿರುವಂತಹ ಚಳವಳಿ. ಎರಡರಲ್ಲೂ ಕರ್ನಾಟಕದ ಮಹಿಳೆಯರ ಪಾತ್ರ ಹಿರಿದಾದುದು. ತಮ್ಮ ಬದುಕು, ಬವಣೆಯನ್ನು ಬದಿಗಿಟ್ಟು ಬ್ರಟಿಷರ ವಿರುದ್ಧ ಹೋರಾಟ ಮಾಡಿ ಜೈಲುವಾಸ ಅನುಭವಿಸಿದವರೂ ಇದ್ದಾರೆ. ಜಯಶ್ರೀ ದೇವಿ ಲಿಗಾಡೆ, ಕಿತ್ತೂರು ಚೆನ್ನಮ್ಮ, ಯಶೋಧರಮ್ಮ ದಾಸಪ್ಪ, ರಾಣಿ ಅಬ್ಬಕ್ಕ, ಬಳ್ಳಾರಿಯ ರುದ್ರಮ್ಮ, ನಾಗಮ್ಮ ಪಾಟೀಲ,ಶಕುಂತಲಾ,…
ಮಡಿಕೇರಿ NEWS DESK ಅ.30 : ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಬುಧವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ರಾಜ್ಯ ಮಟ್ಟದ ಶೈಕ್ಷಣಿಕ ಹಾಕಿ ಟೂರ್ನಿಯ 17 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರು ಎರಡೂ ವಿಭಾಗಗಳಲ್ಲೂ ಮೈಸೂರು ವಿಭಾಗ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು. ಬಾಲಕರ ವಿಭಾಗದಲ್ಲಿ ಮೈಸೂರು ವಿಭಾಗ ತಂಡವು ಕೊಡಗು ಜಿಲ್ಲೆಯ ಕೂಡಿಗೆ ಕ್ರೀಡಾ ವಸತಿ ಶಾಲಾ ತಂಡದ ವಿರುದ್ಧ 3- 1 ಗೋಲುಗಳಿಂದ ಜಯಗಳಿಸಿತು. ಬಾಲಕಿಯರ ವಿಭಾಗದಲ್ಲಿ ಮೈಸೂರು ವಿಭಾಗ ತಂಡವು ಕೊಡಗು ಜಿಲ್ಲೆಯ ಕೂಡಿಗೆ ವಸತಿ ಶಾಲೆ ತಂಡವನ್ನು 2-0 ಅಂತರದಿಂದ ಮಣಿಸಿತು. ಇದಕ್ಕೂ ಮೊದಲು ನಡೆದ ಪಂದ್ಯಗಳಲ್ಲಿ ಬೆಳಗಾವಿ ವಿಭಾಗ ತಂಡವು ಕಲಬುರಗಿ ವಿಭಾಗ ತಂಡವನ್ನು 5-2 ಗೋಲುಗಳಿಂದ, ಬಾಲಕರ ವಿಭಾಗದಲ್ಲಿ ಬೆಳಗಾವಿ ತಂಡ ಬೆಂಗಳೂರು ತಂಡವನ್ನು 5-1 ಗೋಲುಗಳ ಅಂತರದಿಂದ ಸೋಲಿಸಿತು.
ಮಡಿಕೇರಿ NEWS DESK ಅ.30 : ಸಾಹಿತಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಹಾಗೂ ವಿಶ್ರಾಂತ ಕುಲಪತಿಗಳಾದ ಕೊಡಗಿನ ಮೂಲದ ಪ್ರೊ.ಪದ್ಮಾ ಶೇಖರ್ ಅವರು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಶಾಲನಗರ ತಾಲ್ಲೂಕಿನ ತೊರೆನೂರಿನವರಾದ ಪ್ರ‍್ರೊ.ಪದ್ಮಾ ಶೇಖರ್ ಅವರು, ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿದ್ದಾರೆ. ಸಾಹಿತ್ಯ, ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತç ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು, ಮೈಸೂರು ವಿವಿ ಮಹಿಳಾ ಅಧ್ಯಯನದ ನಿರ್ದೇಶಕರು, ಮೈಸೂರು ವಿವಿ ಕ್ರೈಸ್ತಶಾಸ್ತ್ರ ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಶೈಕ್ಷಣಿಕ ಕಾರ್ಯಚಟುವಟಿಕೆಗಳೊಂದಿಗೆ ಇವರು ಜೀವನ ಚರಿತ್ರೆ, ವಿಮರ್ಶೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ತಮ್ಮನ್ನು ಗಾಢವಾಗಿ ತೊಡಗಿಸಿಕೊಂಡವರು. ಜೈನಶಾಸ್ತçದ ಕುರಿತು, ಕನ್ನಡ ಮತ್ತು ಪ್ರಾಕೃತ ಸಂಬಂಧಗಳು, ಕನ್ನಡ ಛಂದಸ್ಸುಗಳ ಬಗ್ಗೆ ಆಳವಾದ ಅಧ್ಯಯನ ನಡೆಸಿ ಸಂಶೋಧನಾ ಗ್ರಂಥಗಳನ್ನು ಹೊರ ತಂದವರಾಗಿದ್ದಾರೆ. ಇವುಗಳೊಂದಿಗೆ ‘ಹಕ್ಕಿಯ ಹರಯ’,…
ಮಡಿಕೇರಿ NEWS DESK ಅ.30 : ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌಲ್ಸಿಲ್ ವತಿಯಿಂದ ನ.1 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30 ಗಂಟೆಯಿAದ 11.30 ಗಂಟೆಯವರೆಗೆ ಧರಣಿ ನಡೆಸಿ ಹಿರಿಯ ಆರ್ಥಿಕ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಪಾದಿಸಿರುವ 2ನೇ ರಾಜ್ಯಗಳ ಮರು-ಸಂಘಟನೆಯ ಆಯೋಗ ರಚನೆಗಾಗಿ ಆಗ್ರಹಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಿಎನ್‌ಸಿಯಿಂದ ಮಂಡಿಸಲಾದ ನಮ್ಮ ಸಂವಿಧಾನದ ಆರ್ಟಿಕಲ್ 244, 371 R/w 6ನೇ ಮತ್ತು 8ನೇ ಶೆಡ್ಯೂಲ್‌ನ ಅಡಿಯಲ್ಲಿ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗದ ಅಗತ್ಯವಿದೆ. ಈ ಕುರಿತು ಸಿಎನ್‌ಸಿ ನ್ಯಾಯಾಲಯದಲ್ಲಿ ಕಾನೂನು…






