ಸುಂಟಿಕೊಪ್ಪ NEWS DESK ಡಿ.14: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿಗಳ “ಚಡ್ಡಿದೋಸ್ತ್’ ಬಳಗದ ವತಿಯಿಂದ ಆರನೇ ವರ್ಷದ ಸೌಹಾರ್ಧ ಕ್ರಿಕೆಟ್ ಟೂರ್ನಿಯು ಗುಡ್ಡೆಹೊಸೂರು ಐಎನ್‌ಎಸ್ ಅಕಾಡೆಮಿ ಮೈದಾನದಲ್ಲಿ ಡಿ.15ರಂದು ನಡೆಯಲಿದೆ. ಚಡ್ಡಿದೋಸ್ತ್ ಬಳಗದ ಸೌಹಾರ್ದ ಕ್ರಿಕೆಟ್ ಟೂರ್ನಿಯ ಉದ್ಘಾಟನೆಯನ್ನು ಗುಡ್ಡೆಹೊಸೂರು ಐಎನ್ಎಸ್ ಅಕಾಡಮಿಯ ಮಾಲೀಕರಾದ ಐಚೇಟ್ಟಿರ ಪೊನ್ನಪ್ಪ ಸೋಮಯ್ಯ ನೆರವೇರಿಸಲಿದ್ದಾರೆ. ಚಡ್ಡಿದೋಸ್ತ್ ಬಳಗ ಅಧ್ಯಕ್ಷ ಕೆ.ಕೆ.ಹರೀಶ್ ಮತ್ತು ಸ್ಥಾಪಕಾಧ್ಯಕ್ಷ ಎನ್.ಮೋಹನ್ ಉಪಸ್ಥಿತರಿರುವರು. ಸಂಜೆ ನಡೆಯುವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕರಾದ ಮೆಟಿಲ್ಡ ಫಾಯಾಸ್ , ಲೀಲಾ, ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಶಿವಪ್ಪ,ಅನಿತಾ, ಮೈಸೂರು ಕೆ.ಆರ್.ಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಂದ್ರು, ಚಡ್ಡಿದೋಸ್ತ್ ಬಳಗದ ಸ್ಥಾಪಕಾಧ್ಯಕ್ಷ ಎನ್.ಮೋಹನ್ ಉಪಸ್ಥಿತರಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಕೆ.ಕೆ.ಹರೀಶ್ ವಹಿಸಲಿದ್ದಾರೆ.
ಲೇಖಕ: admin
ಮಡಿಕೇರಿ ಡಿ.14 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಅದನ್ನು ವಿಶೇಷ ಗ್ರಾಮ ಸಭೆಗೆ ಆಗಮಿಸಿದ್ದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ ವೀಕ್ಷಿಸಿ, ಸಾಮಾಜಿಕ ಕಳಕಳಿಯಿಂದ ಸ್ವಂತ ಖರ್ಚಿನಲ್ಲಿ ಮೇಲ್ಛಾವಣಿ ದುರಸ್ಥಿ ಕಾರ್ಯವನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶಾಲೆಯ ಮುಖ್ಯಶಿಕ್ಷಕರು, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪದಾಧಿಕಾರಿಗಳು, ಸಾರ್ವಜನಿಕರು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಡಿ.16 ರಿಂದ ಡಿ.22ರ ವರೆಗಿನ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ವಾರದಲ್ಲಿ ದೂರ ಪ್ರಯಾಣ ಮಾಡುವಿರಿ. ಹಿರಿಯರ ಆರೋಗ್ಯಕ್ಕೆ ತುಂಬಾ ಖರ್ಚಾಗಲಿದೆ. ಹಳೇ ಸಾಲ ವಸೂಲಿ ಆಗಿ ನಿಮ್ಮ ಹಣ ನಿಮ್ಮ ಕೈಗೆ ಬರಲಿದೆ. ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ಈ ವಾರ ತುಂಬಾ ಶುಭಯೋಗ. ಹಳೇ ಸಾಲವನ್ನು ತೀರಿಸುವಿರಿ. ದೂರದ ನೆಂಟರು ಭೇಟಿಯಾಗುವಿರಿ. ಹಣಕಾಸು ತುಂಬಾ ಖರ್ಚಾಗಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ವಾರ ನಿಮ್ಮ ರಾಶಿಯಲ್ಲಿ ನೀಚಗ್ರಹ ಪ್ರವೇಶದಿಂದ ಅನಾರೋಗ್ಯ, ಸುತ್ತಾಟಗಳು, ಕಲಹ, ಹಣವ್ಯೆಯ :: ಪರಿಹಾರ ಗುರುವಾರ ಶ್ರೀ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ :: ಶುಭಸಂಖ್ಯೆ : 3,…
ಕುಶಾಲನಗರ ಡಿ.14 NEWS DESK : ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೆ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಡಲ ಪೂಜೋತ್ಸವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದೇವಾಲಯದಲ್ಲಿ ಧ್ವಜಾರೋಹಣ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್ ,ಸೋಮಶೇಖರ್ ವಿಷ್ಣುಮೂರ್ತಿ ಭಟ್ ಅವರುಗಳಿಂದ ಪೂಜಾ ಕಾರ್ಯಕ್ರಮ ನಡೆಯಿತು. ನಂತರ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳಿಂದ ಸಾಮೂಹಿಕ ಪೂಜೆ ಸಲ್ಲಿಸಲಾಯಿತು. ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ, ಕಾರ್ಯದರ್ಶಿ ಮಹೇಶ ನಾಲ್ವಡೆ, ಖಜಾಂಚಿ ಸುಬ್ರಮಣಿ, ಜಂಟಿ ಕಾರ್ಯದರ್ಶಿ ಶ್ರೀನಿವಾಸ್, ವಿ.ಎಸ್.ಆನಂದ್ ಕುಮಾರ್, ಡಿ ಆರ್ ಸೋಮಶೇಖರ್ , ಕರ್ಪು ಸ್ವಾಮಿ, ಚಂದ್ರು , ದೇವಾಲಯಗಳ ಒಕ್ಕೂಟ ಉಪಾಧ್ಯಕ್ಷ ರಾಮದಾಸ್, ಖಜಾಂಚಿ ಎಸ್.ಕೆ.ಶ್ರೀನಿವಾಸರಾವ್, ಪ್ರಧಾನ ಕಾರ್ಯದರ್ಶಿ ಎಂ.ಎನ್.ಚಂದ್ರಮೋಹನ್ ಮತ್ತಿತರರು ಇದ್ದರು.
ಮಡಿಕೇರಿ ಡಿ.14 NEWS DESK : ಪುತ್ತರಿ ಹಬ್ಬದ ಪ್ರಯುಕ್ತ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀಭಗವತಿ ದೇವಾಲಯದಲ್ಲಿ ಪುತ್ತರಿ ಧಾರೆ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದ ಕ್ಷೇತ್ರಪಾಲಕ, ನಾಗ, ಗಣಪತಿ ಪೂಜೆ ಸಲ್ಲಿಸಿ ಶ್ರೀ ಭಗವತಿ ದೇವಿಗೆ ಊರಿನವರ ಸಮ್ಮುಖದಲ್ಲಿ ಅರ್ಚಕಾರದ ರಾಧಾಕೃಷ್ಣ ಭಟ್ ವಿಶೇಷ ಪೂಜೆ ಸಲ್ಲಿಸಿದರು. ಕುಲದೇವರಾದ ಇಗ್ಗುತ್ತಪ್ಪ ನೆಲೆಯಲ್ಲಿ ಪುತ್ತರಿ ಹಬ್ಬ ಕಟ್ಟಿನ ನಿಯಮದಂತೆ ಎಲ್ಲೆಡೆ ಪುತ್ತರಿ ಆಚರಣೆ ನಡೆಯಲಿದೆ. ಧಾನ್ಯಲಕ್ಷ್ಮಿಯನ್ನು ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳುವ ಮೂಲಕ ದೇವರು ಎಲ್ಲರಿಗೂ ಒಳಿತನ್ನು ಮಾಡಲೆಂದು ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕ್ಯಾ.ಮುಳ್ಳಂಡ ಪ್ರಭಕ ತಿಮ್ಮಯ್ಯ ಬೇಡಿಕೊಂಡರು. ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.
ಕುಶಾಲನಗರ ಡಿ.14 NEWS DESK : ಹನುಮ ಜಯಂತಿ ಅಂಗವಾಗಿ ಕುಶಾಲನಗರದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವಿವಿಧ ವಿನ್ಯಾಸಗಳ ಮಂಟಪಗಳ ಅದ್ದೂರಿ ಶೋಭಾಯಾತ್ರೆ ಸಂಭ್ರದಿಂದ ನಡೆಯಿತು. ಕುಶಾಲನಗರ ಪಟ್ಟಣದಲ್ಲಿ ರಾತ್ರಿ ಅಬ್ಬರದ ಡಿಜೆಯೊಂದಿಗೆ ಬೆಳಕಿನ ಚಿತ್ತಾರಗಳು ಮೂಡಿಬಂದು. ಕುಶಾಲನಗರ ರಥ ಬೀದಿಯ ಆಂಜನೇಯ ದೇವಾಲಯದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಮಂಟಪ, ಮಾದಾಪಟ್ಟಣ ರಾಮದೂತ ಜಯಂತಿ ಆಚರಣೆ ಸಮಿತಿ ಎಚ್ ಆರ್ ಪಿ ಕಾಲೋನಿಯ ಅಂಜನಿಪುತ್ರ ಜಯಂತಿ ಉತ್ಸವ ಆಚರಣೆ ಸಮಿತಿ, ಹಾರಂಗಿಯ ವೀರ ಹನುಮ ಸೇವಾ ಸಮಿತಿಯ ಮಂಟಪ, ಮುಳ್ಳುಸೋಗೆ ಚಾಮುಂಡೇಶ್ವರಿ ಉತ್ಸವ ಸಮಿತಿ, ಕೂಡಿಗೆ ಹನುಮ ಸೇವಾ ಸಮಿತಿ, ಗುಡ್ಡೆ ಹೊಸೂರು ವೀರಾಂಜನೇಯ ಸೇವಾ ಸಮಿತಿ ಹಾಗೂ ಬೈಚನಹಳ್ಳಿ ಗೆಳೆಯರ ಬಳಗದ ಮಂಟಪಗಳು ಹನುಮ ಭಕ್ತರ ಮೆರವಣಿಗೆಯಲ್ಲಿ ಬಂದು ವಿಶೇಷ ಕಥಾ ವಸ್ತುಗಳ ಪ್ರದರ್ಶನಗಳನ್ನು ನೀಡಿದವು. ಕುಶಾಲನಗರ ಸೇರಿದಂತೆ ನೆರೆ ಜಿಲ್ಲೆಗಳಿಂದ ಸಾವಿರಾರು ಹನುಮ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಕುಣಿದು ಕುಪ್ಪಳಿಸಿದರು. ದಶಮಂಟಪ ಸಮಿತಿ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ,…
ಕುಶಾಲನಗರ ಡಿ.14 NEWS DESK : ಹನ್ನೆರಡನೇ ಶತಮಾನದ ವಚನಕಾರರ ಆಂದೋಲನ ಹಾಗೂ ಅವರ ಜೀವನ ಸಂದೇಶ ಮನುಕುಲದ ಉನ್ನತಿಗೆ ಮಹಾಚೈತನ್ಯದಾಯಕ ಎಂದು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಕೊಡಗು ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ಕುಶಾಲನಗರ ತಾಲ್ಲೂಕು ಕದಳಿ ವೇದಿಕೆಯ ನೂತನ ಪದಾಧಿಕಾರಿಗಳ ಸೇವಾ ದೀಕ್ಷೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಶರಣರ ಆದರ್ಶಗಳನ್ನು ಅರಿತು ಅಧ್ಯಯನ ಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಆದರ್ಶ ಪ್ರಾಯವಾದ ಬದುಕು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಮಡಿಕೇರಿ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹಾಗೂ ಕಣ್ಣಿನ ತಜ್ಞೆ ವಿಜಯಲಕ್ಷ್ಮಿ ಚೇತನ್ ಮಾತನಾಡಿ, ವಿದ್ಯಾರ್ಥಿನಿಯರಿಗೆ ಕಣ್ಣುಗಳ ಆರೋಗ್ಯದ ಕುರಿತು ಮಾಹಿತಿ ನೀಡಿ, ಮೊಬೈಲ್, ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ಬಳಕೆಯ…
ಮಡಿಕೇರಿ ಡಿ.14 NEWS DESK : ವಿರಾಜಪೇಟೆ ಸಮೀಪದ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಪೂಜಾಕೈಂಕರ್ಯಗಳು ಸೇರಿದಂತೆ ಸಂಕಲ್ಪ ಪೂಜೆ, ಶಾರದ ಮಾತೆಗೆ ಕುಂಕುಮಾರ್ಚನೆ, ಪುಷ್ಪರ್ಚನೆ, ಅಲಂಕಾರ ಪೂಜೆ ಯನ್ನು ನಡೆಸಿದರು. ಸರಸ್ವತಿ ಸ್ತೋತ್ರವನ್ನು ಪಠಿಸಿ ನೈವೇದ್ಯ ಪ್ರಸಾದವನ್ನು ಸಮರ್ಪಿಸಿದರು. ನಂತರ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಹಾ ಮಂಗಳಾರತಿ ನೆರವೇರಿಸಲಾಯಿತು. ಪೂಜಾ ಕಾರ್ಯಕ್ರಮವನ್ನು ಅರ್ಚಕರಾದ ವಾಮನಮೂರ್ತಿ ಭಟ್ ನೆರವೇರಿಸಿದರು. ಈ ಸಂದರ್ಭದ ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್, ಸದಸ್ಯರುಗಳು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.
ಮಡಿಕೇರಿ ಡಿ.14 NEWS DESK : ವಿಶಿಷ್ಟ ಸಂಸ್ಕೃತಿಯ ಕೊಡವ ಜನಾಂಗದ ಪ್ರಧಾನ ಹಬ್ಬಗಳಲ್ಲಿ ಒಂದಾದ ಪುತ್ತರಿಯನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದಕ್ಷಿಣ ಕೊಡಗಿನ ಪತ್ ಕಟ್ ನಾಡ್ ನ ಬಾಳೆಲೆ ಬಳಿಯ ಬಿಳೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಿತು. ಹುಣ್ಣಿಮೆಯ ದಿನವಾದ ಇಂದು ಬೆಳಗ್ಗೆ ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕವಾಗಿ ನವ ಧಾನ್ಯ ಭತ್ತದ ಕದಿರು ಕೊಯ್ಯುವ ಮೂಲಕ 31ನೇ ವರ್ಷದ ಹಬ್ಬವನ್ನು ಅರ್ಥಪೂರ್ಣಗೊಳಿಸಿದರು.ದುಡಿಕೊಟ್ಟ್-ಪಾಟ್ ಮೂಲಕ ಗದ್ದೆಗೆ ಮೆರವಣಿಗೆಯಲ್ಲಿ ತೆರಳಿ ತೆನೆ ತುಂಬಿದ ಕದಿರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಕೃತಿ ದೇವಿಗೆ ನಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಪುತ್ತರಿಯ ಆಚಾರ, ವಿಚಾರಗಳನ್ನು ಆರಂಭಿಸಿದರು. ಕೊಯ್ದ ಕದಿರನ್ನು “ಪೊಲಿಯೇ ಬಾ, ಪೊಲಿ ಪೊಲಿಯೇ ಬಾ” ಎಂದು ಧಾನ್ಯಲಕ್ಷ್ಮಿಯನ್ನು ಘೋಷವಾಕ್ಯದ ಮೂಲಕ ಆಹ್ವಾನಿಸುತ್ತಾ ಮನೆ ತುಂಬಿಕೊಂಡರು. ನಂತರ ನವ ಧಾನ್ಯವನ್ನು ಪೂಜ್ಯಸ್ಥಾನದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಕೊಡವ ಜನಾಂಗ ಹಾಗೂ ನಾಡಿನ…
ನಾಪೋಕ್ಲು ಡಿ.14 NEWS DESK : ಪುತ್ತರಿ ಹಬ್ಬವೆಂದರೆ ಗ್ರಾಮೀಣ ಪ್ರದೇಶದಲ್ಲಿ ಅತೀವ ಸಂಭ್ರಮ. ಧಾನ್ಯಲಕ್ಷ್ಮಿಯನ್ನು ಕರೆತರುವ ಈ ಹಬ್ಬದಲ್ಲಿ ಸಿಡಿಮದ್ದುಗಳದ್ದೇ ದರ್ಬಾರ್. ರಾಜ್ಯದ ಇತರೆಡೆಗಳಲ್ಲಿ ದೀಪಾವಳಿಯನ್ನು ಬೆಳಕಿನ ಹಬ್ಬವಾಗಿ ಆಚರಿಸಿದರೆ ಕೊಡಗಿನಲ್ಲಿ ಪುತ್ತರಿಯನ್ನು ಬೆಳಕಿನ ಹಬ್ಬವಾಗಿ ಆಚರಿಸುತ್ತಾರೆ ಅಂತೆಯೇ ಪಟಾಕಿಗಳಿಗೆ, ಸುಡು ಮದ್ದುಗಳಿಗೆ ಅಧಿಕ ಬೇಡಿಕೆ. ನಾಪೋಕ್ಲುವಿನ ಸಂತೆ ಮೈದಾನದಲ್ಲಿ ಪಟಾಕಿಗಳ ಮಾರಾಟ ಬಿರುಸಿನಿಂದ ನಡೆಯಿತು. ಗ್ರಾಹಕರು ಇಲ್ಲಿನ ಐದು ಮಳಿಗೆಗಳಿಂದ ಪಟಾಕಿಗಳನ್ನು ಖರೀದಿಸಿದರು. ಪುತ್ತರಿ ಹಬ್ಬದಂದು ಭತ್ತದ ಗದ್ದೆಗಳಲ್ಲಿ ಕದಿರು ಕೊಯ್ಯುವಲ್ಲಿಂದ ಹಿಡಿದು ರಾತ್ರಿಯಿಡೀ ಪಟಾಕಿ ಸಿಡಿಸುತ್ತಾರೆ. ಅದಕ್ಕೂ ಮುನ್ನ ಕತ್ತಲೆ ಆವರಿಸುತ್ತಿದ್ದಂತೆ ನೆರೆಕಟ್ಟುವ ಕಾರ್ಯ ಆರಂಭಗೊಳ್ಳುತ್ತದೆ. ಇಡೀ ದಿನ ಪಟಾಕಿಗಳ ಸದ್ದು ಮಾರ್ದನಿಸುತ್ತದೆ. ಬಾಣಬಿರುಸುಗಳ ಸದ್ದಿನೊಂದಿಗೆ ಮಕ್ಕಳು,ಹಿರಿಯರು ಖುಷಿ ಪಡುತ್ತಾರೆ. ಹಬ್ಬದಲ್ಲಿ ಸಾವಿರಾರು ರೂಪಾಯಿಗಳ ಪಟಾಕಿಗಳನ್ನು ಬೆಲೆ ಲೆಕ್ಕಿಸದೆ ಗ್ರಾಹಕರು ಖರೀದಿಸಿ, ಸಿಡಿಸಿ ಸಂಭ್ರಮಿಸುತ್ತಾರೆ. ವರದಿ : ದುಗ್ಗಳ ಸದಾನಂದ.






