ಲೇಖಕ: admin

ಮಡಿಕೇರಿ ಮೇ 16 NEWS DESK  : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಮೇ 19 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಮಗ್ಗುಲ 66/33/11 ಕೆ.ವಿ. ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ 33ಕೆವಿ ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು 33/11 ಕೆವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ 9.30…

Read More

ಮಡಿಕೇರಿ ಮೇ 16 NEWS DESK : ನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಯ ಸ್ಥಳಕ್ಕೆ ಪ್ರತಿಮೆ ನಿರ್ಮಾಣ ಶಿಲ್ಪಿ ಕೃಷ್ಣ ನಾಯಕ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 2 ರಿಂದ 3 ಸೆಂಟ್ ಜಾಗದಲ್ಲಿ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 9 ಅಡಿ ಎತ್ತರದ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವ ಬಗ್ಗೆ ಪ್ರತಿಮೆ ನಿರ್ಮಾಣ ಸಮಿತಿ ಸದಸ್ಯರ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಸಿ.ಸತೀಶ್ ಮಾತನಾಡಿ ಶಾಸಕರು, ನಗರಸಭೆ ಅಧ್ಯಕ್ಷರು ಮತ್ತು ಸದಸ್ಯರ ಒಮ್ಮತದ ಸಹಕಾರದಿಂದ ನಗರದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಂತೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಸುಮಾರು 44 ಲಕ್ಷ ರೂ. ವೆಚ್ಚದಲ್ಲಿ ಡಾ.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಮತ್ತು ಉದ್ಯಾನವನ ನಿರ್ಮಾಣವಾಗಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಾರದ ನಾಗರಾಜ್, ನಗರಸಭೆ ಮಾಜಿ…

Read More

ಮಡಿಕೇರಿ ಮೇ 16 NEWS DESK  : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅತ್ಯಂತ ಕುಗ್ರಾಮ ಎಂದೇ ಬಿಂಬಿತರಾಗಿರುವ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು 35 ಲಕ್ಷ ರೂಗಳ ಭರಪೂರ ಅನುದಾನವನ್ನು ನೀಡಿದ್ದಾರೆ. ಅತ್ಯಂತ ದುರ್ಗಮವಾದ ಹಾದಿಗಳನ್ನು ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮ 2018 ರ ಪ್ರಕೃತಿ ವಿಕೋಪದಲ್ಲಿ ಬಹು ಸಂಕಷ್ಟಕ್ಕೆ ಒಳಗಾದ ಪ್ರದೇಶವಾಗಿದ್ದು, ಅಲ್ಲಿನ ಜನರ ಕೋರಿಕೆ ಮೇರೆಗೆ ಶಾಸಕರು 35 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಪ್ರತಿಯೊಬ್ಬ ಪ್ರಜೆಯು ಸರ್ಕಾರದ ಸೌಲಭ್ಯ ಪಡೆಯಲು ಅರ್ಹನಾಗಿದ್ದು ಅದನ್ನು ಒದಗಿಸುವ ಕರ್ತವ್ಯ ಜನಪ್ರತಿನಿಧಿಯ ಜವಾಬ್ದಾರಿ ಎಂದು ಮಾತನಾಡಿದ ಡಾ|| ಮಂತರ್ ಗೌಡ ರವರು ಕುಗ್ರಾಮ ಎಂದು ಅಪಖ್ಯಾತಿ ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮವನ್ನು ಸುಗ್ರಾಮವಾಗಿಸಲು ಬದ್ದನಾಗಿದ್ದೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಶೀಘ್ರದಲ್ಲಿಯೇ ಕಾಮಗಾರಿಯನ್ನು ಉತ್ತಮ…

Read More

ಮಡಿಕೇರಿ ಮೇ 16 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆ.21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿ ಈ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು, ಆಸಕ್ತಿವುಳ್ಳವರು ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ನೋಂದಣಿಗೆ ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸುವ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇಂದಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ವ್ಯಾಜ್ಯಗಳನ್ನು ನೋಂದಾಯಿತ ಕಾನೂನು ಸಮನ್ವಯಕರ ಮಧ್ಯಸ್ಥಿಕೆಯಲ್ಲಿ ತಾವಿರುವ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…

Read More

ಮಡಿಕೇರಿ ಮೇ 16 NEWS DESK : ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 20 ರಂದು ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಕಡಂಗ ಗ್ರಾಮದ ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲಾ ಮೈದಾನದಲ್ಲಿ  ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಜಾನಪದ ತಜ್ಞರಾದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ, ಕೊಡವ ಕೌಟುಂಬಿಕ ಹಾಕಿಯ ಸಂಸ್ಥಾಪಕರಾದ ಪಾಂಡಂಡ ಕುಟ್ಟಣಿ ಸಭಾ ಮಂಟಪದಲ್ಲಿ ನಡೆಯಲಿದೆ. *11 ಪ್ರವೇಶ ದ್ವಾರಗಳು* ಕನ್ನಡದ ಹಬ್ಬದ ಅಂಗವಾಗಿ ಕಡಂಗ ಪಟ್ಟಣದಲ್ಲಿ 11 ಮಂದಿ ಹಿರಿಯರ ನೆನಪಿನ ದ್ವಾರಗಳನ್ನು ರಚಿಸಲಾಗಿದೆ. ಅವುಗಳೆಂದರೆ ಕುಲ್ಲಚಂಡ ದಿ.ಲಾಲು ಮೇದಯ್ಯ ಮತ್ತು ದಿ.ದೇವಕ್ಕ ಪ್ರವೇಶ ದ್ವಾರ, ಕೋಡಿರ ದಿ.ಮನು ಮೊಣ್ಣಪ್ಪ ನೆನಪಿನ ದ್ವಾರ, ದೇಯಿರ ಕುಟುಂಬಸ್ಥರ ನೆನಪಿನ ಪ್ರವೇಶ ದ್ವಾರ, ಮೇದುರ ದಿ.ನಂಜಪ್ಪ ಹಾಗೂ ದಿ.ಸೀತಮ್ಮ ನೆನಪಿನ ಪ್ರವೇಶ…

Read More

ಮಡಿಕೇರಿ ಮೇ 16 NEWS DESK : ಆದಿವಾಸಿಗಳ ಹಕ್ಕಿಗಾಗಿ ಹೋರಾಟಗಳನ್ನು ನಡೆಸುತ್ತಿದ್ದ ಕಾರ್ಡ್ ಸಂಸ್ಥೆಯ ಪ್ರಮುಖ ಹಾಗೂ ಸಾಮಾಜಿಕ ಕಾರ್ಯಕರ್ತ ಕುಶಾಲನಗರದ ರಾಯ್ ಡೇವಿಡ್ (70) ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು, ಗಿರಿಜನ ಮುಖಂಡ ಜೆ.ಪಿ.ರಾಜು ಹಾಗೂ ಆದಿವಾಸಿ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Read More

ಮಡಿಕೇರಿ ಮೇ 15 NEWS DESK : ವಿಶ್ವ ತಾಯಂದಿರ ದಿನದ ಅಂಗವಾಗಿ ಪ್ರತಿನಿಧಿ ಪತ್ರಿಕೆಯ ವತಿಯಿಂದ ಕೊಡ ಮಾಡುವ ಮಹಾತಾಯಿ ಪ್ರಶಸ್ತಿ ಯನ್ನು ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ಪೋಷಕರಾದ ಜಮೀಲ ಅವರು ಪಡೆದುಕೊಂಡರು. ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ  ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

Read More

ಮಡಿಕೇರಿ ಮೇ 15 NEWS DESK : ವಿದ್ಯಾರ್ಥಿ ಜೀವನದಲ್ಲಿ ಪುಸ್ತಕಗಳು ಕೇವಲ ಪಠ್ಯದ ಭಾಗವಾಗಿರದೆ, ಅವರ ಉತ್ತಮ ಸಹಚರರಾಗಿರಬೇಕು. ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ನಂಜುಂಡ ಸ್ವಾಮಿ ಅವರು ನುಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2025-26ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಮುಗಿದ ನಂತರ ವಿದ್ಯಾರ್ಥಿಗಳಲ್ಲಿ ಮುಂದೆ ಏನು ಎಂಬ ಭಾವನೆ ಮೂಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಓದು ಮನುಷ್ಯನನ್ನು ಪರಿಪೂರ್ಣನನ್ನಾಗಿ ಮಾಡುತ್ತದೆ ಎಂಬಂತೆ ವಿದ್ಯಾರ್ಥಿ ದಿಸೆಯಲ್ಲಿ ಪುಸ್ತಕಗಳ ಸ್ನೇಹ ಅದು ಇಡೀ ಜೀವನದ ಯಶಸ್ಸಿಗೆ ಭದ್ರ ಬುನಾದಿ ಹಾಕುತ್ತದೆ ಎಂದರು. ಜಾತಿಗಿಂತ ಮಾನವೀಯ ಮೌಲ್ಯಗಳು ದೊಡ್ಡದು ಎಂಬ ಸಂದೇಶವನ್ನು ಬುದ್ಧ, ಬಸವ ಅಂಬೇಡ್ಕರ್ ಸೇರಿದಂತೆ ಮಹಾನ್ ವ್ಯಕ್ತಿಗಳು ಸಾರಿದ್ದಾರೆ. ಇಂತಹ ಗುಣಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು. ನಾವು ಸೋತಾಗ ಅಥವಾ ದಾರಿ ಕಾಣದಿದ್ದಾಗ ಧೈರ್ಯ…

Read More

ಮಡಿಕೇರಿ,ಮೇ 15 NEWS DESK : ಮಡಿಕೇರಿಯಲ್ಲಿರುವ ಕೊಡವ ಹೆರಿಟೇಜ್ ಕೇಂದ್ರವನ್ನು ಮಡಿಕೇರಿ ಕೊಡವ ಸಮಾಜಕ್ಕೆ ಹಸ್ತಾಂತರಿಸುವ ಕುರಿತು ಮಡಿಕೇರಿ ಕ್ಷೇತ್ರದ ಡಾ.ಮಂತ್‍ರ್ ಗೌಡ ಅವರ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ನಗರದ ಸುದರ್ಶನ್ ಅತಿಥಿ ಗೃಹದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರೊಂದಿಗೆ ಚರ್ಚಿಸಿ, ಕೊಡವ ಹೆರಿಟೇಜ್ ಕೇಂದ್ರದ ಕಟ್ಟಡ ಕಾಮಗಾರಿ ಶೇ.90ರಷ್ಟು ಮುಕ್ತಾಯವಾಗಿದ್ದು, ಒಳಾಂಗಣ ಕಾಮಗಾರಿಗಳು ಬಾಕಿ ಇವೆ. ಇದನ್ನು ಕೊಡವ ಸಂಸ್ಕøತಿಯ ಮ್ಯೂಸಿಯಂ ಮಾದರಿಯಲ್ಲಿ ಅನುಷ್ಟಾನ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ನಿರ್ವಹಣೆ, ಮೇಲ್ವಿಚಾರಣೆಗಾಗಿ ಕೇಂದ್ರವನ್ನು ಕೊಡವ ಸಮಾಜಕ್ಕೆ ಹಸ್ತಾಂತರಿಸಿದರೆ ಸುಲಭವಾಗುತ್ತದೆ ಎಂದು ಶಾಸಕರ ಗಮನ ಸೆಳೆದರು. ಬಳಿಕ ಶಾಸಕ ಡಾ.ಮಂತರ್ ಗೌಡ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಮಡಿಕೇರಿ ಕೊಡವ ಸಮಾಜ ಉತ್ತಮ ರೀತಿಯಲ್ಲಿ ಸಂಸ್ಥೆಯನ್ನು ನಿರ್ವಹಿಸುವ ವಿಶ್ವಾಸವಿದೆ. ಕೊಡವ ಹೆರಿಟೇಜ್ ಕೇಂದ್ರದ ಜವಾಬ್ದಾರಿಯನ್ನು ಕೊಡವ ಸಮಾಜಕ್ಕೆ ನೀಡುವ…

Read More

ಮಡಿಕೇರಿ ಮೇ 15 NEWS DESK : ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಡಾ.ಮಂತರ್ ಗೌಡ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಮಡಿಕೇರಿ ನಗರದ ಅಭಿವೃದ್ಧಿಗೆ ಪ್ರಥಮ ಆದ್ಯತೆ ಮೇಲೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದರು. ಈಗಾಗಲೇ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅದೇ ರೀತಿ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚುವುದು, ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸುವುದು, ಅಗತ್ಯವಿರುವ ಕಡೆ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ವಿವರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಸ್ಥಾಯಿ…

Read More