*ಪುತ್ತರಿ (ಹುತ್ತರಿ) ಹಬ್ಬದ ಶುಭಾಶಯಗಳು : ಕಾವೇರಮ್ಮ ಸರ್ವರಿಗೂ ಅಭ್ಯುದಯ ನೀಡಲಿ*
ಲೇಖಕ: admin
*ಪುತ್ತರಿ ನಮ್ಮೆರ ನಲ್ಲಾಮೆ*
*ಪುತ್ತರಿ (ಹುತ್ತರಿ) ಹಬ್ಬದ ಶುಭಾಶಯಗಳು : ಕಾವೇರಿ ತಾಯಿ ಸರ್ವರಿಗೂ ಸಮೃದ್ಧಿ ತರಲಿ*
*ಪುತ್ತರಿ ಹಬ್ಬದ ಶುಭಾಶಯಗಳು : ಸರ್ವರಿಗೂ ಒಳಿತಾಗಲಿ*
ಮಡಿಕೇರಿ ಡಿ.13 NEWS DESK : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಡಿ.14 ರಂದು ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ನಡೆಯಲಿದೆ. ಸಂಜೆ 6 ಗಂಟೆಗೆ ಪುತ್ತರಿ ವೆಳ್ಳಾಟಂ ನಡೆಯಲಿದ್ದು, ರಾತ್ರಿ 8.30 ಗಂಟೆಗೆ ಕದಿರು ತೆಗೆಯಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಡಿ.13 NEWS DESK : ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಡಿ.20 ರಂದು ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಲಿದ್ದಾರೆ. ಕಾಲ್ನಡಿಗೆ ಜಾಥಾ ಕಾರ್ಯಕ್ರಮವು ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದೆ. “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಡಿ.20 ರಂದು ಬೆಳಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೆಎಸ್‍ಎಫ್‍ಸಿ ಕಟ್ಟಡ, ಇಂಡಸ್ಟ್ರೀಯಲ್ ಪ್ರದೇಶ ಇಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್, 18 ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ…
ಸೋಮವಾರಪೇಟೆ ಡಿ.13 NEWS DESK : ಕಳೆದ ಅಕ್ಟೋಬರ್‍ನಲ್ಲಿ ನಡೆದ ವಾಣಿಜ್ಯ ಮಳಿಗೆಗಳ ಹರಾಜನ್ನು ರದ್ದುಪಡಿಸಿ, ಮರು ಇ-ಟೆಂಡರ್ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು ಆಗ್ರಹಿಸಿದರು. ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟೆಂಡರ್‍ನಲ್ಲಿ ಅಕ್ರಮ ನಡೆದಿದೆ ಎಂದು ಎಲ್ಲಾ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಟೆಂಡರ್‌ದಾರರ ಹೆಸರು, ಮಳಿಗೆ ಸಂಖ್ಯೆಗಳು ಮಧ್ಯವರ್ತಿಗಳ ಕೈಸೇರಿವೆ. ಪಂಚಾಯಿತಿ ಕಚೇರಿಯಲ್ಲಿ ಗೌಪ್ಯವಾಗಿರಬೇಕಾದ ಮಾಹಿತಿಗಳು ಸೋರಿಕೆಯಾಗಿರುವ ಕಾರಣ ಮಧ್ಯವರ್ತಿಗಳು ಡೀಲ್‍ಗೆ ಇಳಿಯಲು ಕಾರಣವಾಗಿದೆ. ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮಾಹಿತಿ ಸೋರಿಕೆ ಮಾಡಿದ್ದಾರೆ. ಈ ಬಗ್ಗೆ ಅಧ್ಯಕ್ಷರು ವಿವರಣೆ ನೀಡಬೇಕು. ಸೂಕ್ತ ಕ್ರಮಕೈಗೊಳ್ಳಬೇಕೆಂದು ಸರ್ಕಾರಿ ನಾಮನಿರ್ದೇಶನ ಸದಸ್ಯರಾದ ಡಿ.ಯು.ಕಿರಣ್, ವಿನಯ್, ಸದಸ್ಯರಾದ ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್, ಬಿ.ಸಂಜೀವ, ಜೀವನ್ ಆಗ್ರಹಿಸಿದರು. ನಿಯಮದಂತೆ ಟೆಂಡರ್ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೆ, ಬಿಡ್‍ದಾರರ ಹೆಸರು ಸೋರಿಕೆಯಾಗಿರುವುದು ತಮ್ಮ ಗಮನಕ್ಕೆ ಬಂದಿದೆ. ಸದಸ್ಯರ ಆರೋಪವೂ ಸರಿಯಾಗಿದೆ. ಸದಸ್ಯರ ತೀರ್ಮಾನದಂತೆ ನಿರ್ಣಯ ಕೈಗೊಳ್ಳಲಾಗುವುದು ಎಂದು…
ಕುಶಾಲನಗರ ಡಿ.13 NEWS DESK : ಹನುಮ ಜಯಂತಿ ಅಂಗವಾಗಿ ಕುಶಾಲನಗರ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಮಹಾಮಂಗಳಾರತಿ, ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆ ನಡೆಯಿತು. ದೇವಾಲಯದ ಅರ್ಚಕರಾದ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಮಯೂರ ಭಟ್ ಮತ್ತು ಅರ್ಚಕರ ತಂಡದಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು. ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ರಥ ಬೀದಿಯ ಮೂಲಕ ಸಾಗಿ ಬೈಚನಹಳ್ಳಿ ಮಾರಿಯಮ್ಮ ದೇವಾಲಯ ತನಕ ಸಾಗಿತು. ದೇವಾಲಯ ಸೇವಾ ಟ್ರಸ್ಟ್ ಅಧ್ಯಕ್ಷ ವಿ.ಡಿ.ಪುಂಡರಿಕಾಕ್ಷ ಕಾರ್ಯದರ್ಶಿ ರಾಜೀವ್ ಖಜಾಂಚಿ ಜಗದೀಶ್ ಮತ್ತಿತರರು ಇದ್ದರು. ಇದೆ ವೇಳೆ ಹನುಮ ಜಯಂತಿ ಅಂಗವಾಗಿ ಕುಶಾಲನಗರ ಹನುಮಂತೋತ್ಸವ ಆಚರಣೆ ಸಮಿತಿ ಆಶ್ರಯದಲ್ಲಿ ಕುಶಾಲನಗರ ಮತ್ತು ಸುತ್ತಮುತ್ತಲ ಗ್ರಾಮಗಳ 9 ಮಂಟಪಗಳ ಶೋಭಾ ಯಾತ್ರೆ ನಡೆಯಿತು. ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ಕುಶಾಲನಗರ ಹೆಚ್ ಆರ್ ಪಿ…
ಮಡಿಕೇರಿ ಡಿ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ಇದೇ ಡಿಸೆಂಬರ್, 15 ಕ್ಕೆ 14 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಇದೇ ಡಿ.15 ರಂದು ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮಗಳು ಜರುಗಲಿವೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ಪಟ್ಟಣ ಮತ್ತು ಐಗೂರು ಗ್ರಾಮ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹಾಗೂ ಬೆಳ್ತಂಗಡಿ, ಹಾಗೆಯೇ ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಹೇಳಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಔನ್ನತ್ಯಕ್ಕೆ ಕೊಂಡೊಯ್ಯುವಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ ಅರೆಭಾಷೆಯಲ್ಲಿ ಪುಸ್ತಕ ಪ್ರಕಟಣೆ, ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮ ಹಾಗೂ ಅರೆಭಾಷೆ ಬರವಣಿಗೆಗೆ ಹೆಚ್ಚು ಒತ್ತು ನೀಡುವುದು. ಜೊತೆಗೆ…
ಮಡಿಕೇರಿ ಡಿ.13 NEWS DESK : ಆನೆ ತುಳಿತಕ್ಕೆ ಒಳಗಾಗಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಕಟಗೇರಿ ಗ್ರಾಮದ ನಿವಾಸಿ ಕರ್ತಮಾಡ ಪೂವಣ್ಣ ಅವರ ಪತ್ನಿ ಶಾರದಾ ಅವರ ಆರೋಗ್ಯವನ್ನು ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ವಿಚಾರಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು. ಸರ್ಕಾರದಿಂದ ತಕ್ಷಣವೇ ಆಸ್ಪತ್ರೆಯ ವೈದ್ಯಕೀಯ ವೆಚ್ಚ ಹಾಗೂ ಸಂತ್ರಸ್ತೆಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಡಿಸಿಎಫ್ ನೆಹರು ಮತ್ತು ಅರಣ್ಯ ಸಿಬ್ಬಂದಿ ಹಾಜರಿದ್ದರು.






