ಲೇಖಕ: admin

ಸುಂಟಿಕೊಪ್ಪ ಡಿ.13 NEWS DESK  : ಯೇಸುಕ್ರಿಸ್ತರ ಜನನದ ಕ್ಯಾರೋಲ್ಸ್ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಸಾಂತಕ್ಲಾಸ್ ವೇಷಧಾರಿ, ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗೂ ಗಾಯನ ವೃಂದವರು ಮನೆಮನೆಗೆ ತೆರಳಿ ಪ್ರಾರ್ಥಿಸಿ, ಕ್ರಿಸ್ತರ ಶುಭಸಂದೇಶವನ್ನು ಸಾರಿದರು. ಕ್ರೈಸ್ತ ಭಾಂದವರು ಡಿಸೆಂಬರ್ ಮಾಸದಲ್ಲಿ ಮನೆಗಳಿಗೆ ಸುಣ್ಣ ಬಣ್ಣ ಬಳಿದು ವಿವಿಧ ಬಗೆಯ ನಕ್ಷತ್ರಗಳನ್ನು ಮನೆಯ ಮೇಲ್ಚಾವಣಿಗಳ ಮೇಲೆ ಅಳವಡಿಸುವುದು. ಮನೆಗಳಲ್ಲಿ ಕ್ರಿಸ್ತನ ಜನನದ ಸ್ಥಳವಾದ ಗೋದಾಲಿ (ದನದಕೊಟ್ಟಿಗೆ) ನಿರ್ಮಾಣವಾದರೆ, ಮಹಿಳೆಯರು ವಿವಿಧ ಬಗೆ ಬಗೆಯ ತಿಂಡಿ ಖಾದ್ಯಗಳನ್ನು ತಯಾರಿಸುವ ಸಡಗರ ಸಂಭ್ರಮಕ್ಕೆ ಅಣಿಯಾಗುತ್ತಿರುವಂತೆಯೇ ಸಾಂತಕ್ಲಾಸ್ ಅವರನ್ನು ಒಳಗೊಂಡ ಕ್ಯಾರೋಲ್ಸ್ ತಂಡವು ಆಗಮಿಸಿ ಮನೆಗಳಿಗೆ ಆರ್ಶಿವಚನ ನೀಡಿ ಮನೆಯ ಮಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದೇ ಈ ಹಬ್ಬದ ವಿಶೇಷತೆಯಾಗಿದೆ. ವಿಶ್ವದಾದ್ಯಂತ 2024 ರ ಕ್ರಿಸ್ತರ ಜನನದ ಹಬ್ಬವನ್ನು ಸಡಗರ ಸಂಭ್ರಮದಲ್ಲಿ ಆಚರಿಸಲು ಅಣಿಗೊಳ್ಳುತ್ತಿದೆ. ಅದೇ ರೀತಿಯ ಸುಂಟಿಕೊಪ್ಪ ದೇವಾಲಯದಲ್ಲಿಯೂ ಕ್ರೈಸ್ತ ಧರ್ಮಗರುಗಳು, ಕ್ರೈಸ್ತ ದೇವಾಲಯ ಕ್ರೈಸ್ತ ಬಾಂಧವರು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಾಲಯದಲ್ಲಿ…

Read More

ಮಡಿಕೇರಿ ಡಿ.13 NEWS DESK : ಜಿಲ್ಲಾ ವ್ಯಾಪ್ತಿಯ ಸಿ ಮತ್ತು ಡಿ ವರ್ಗದ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬದುಕು ಕಟ್ಟಿಕೊಂಡಿರುವ ಬಡ ಕೃಷಿಕರ ಕೃಷಿ ಭೂಮಿಯನ್ನು ಮೀಸಲು ಅರಣ್ಯವೆಂದು ಘೋಷಿಸಕೂಡದೆಂದು ಆಗ್ರಹಿಸಿ ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷಣೆಯಡಿ ಸೋಮವಾರಪೇಟೆಯ ರೈತ ಹೋರಾಟ ಸಮಿತಿಯಿಂದ ಡಿ.20 ರಂದು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮ ಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು. ಈ ಸಮಸ್ಯೆ ಕೇವಲ ಸೋಮವಾರಪೇಟೆ ತಾಲ್ಲೂಕಿಗೆ ಮಾತ್ರ ಸೀಮಿತವಾಗಿಲ್ಲ. ಜಿಲ್ಲೆಯ ಎಲ್ಲಾ ಭಾಗಗಳಲ್ಲು ಈ ಸಂಕಷ್ಟವನ್ನು ಕೃಷಿಕರು ಎದುರಿಸುತ್ತಿದ್ದಾರೆ. ಸಿ ಮತ್ತು ಡಿ ಭೂಮಿಯನ್ನು ಮೀಸಲು ಅರಣ್ಯವೆಂದು ಘೋಷಿಸಿದಲ್ಲಿ ಕೊಡಗಿನ…

Read More

ಮಡಿಕೇರಿ ಡಿ.13 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದ ಪ್ರತಿಭನಾಕಾರರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಹಿಂದುಳಿದ ಸಮೂಹಗಳ ನೆರವಿನಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪ್ರಸ್ತುತ ಅವರನ್ನೆ ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಘೋಷಿಸಿರುವ ಭಾಗ್ಯಗಳನ್ನು ಪೂರೈಸುವ ಏಕಮಾತ್ರ ಉದ್ದೇಶದಿಂದ ವಿವಿಧ…

Read More

ಮಡಿಕೇರಿ ಡಿ.13 NEWS DESK : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2024ರ ಡಿ.20, 21 ಮತ್ತು  22 ರಂದು ಮಂಡ್ಯದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು, 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. “ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು”, ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, “ಸಾಹಿತ್ಯದಲ್ಲಿ ರಾಜಕೀಯ – ರಾಜಕೀಯದಲ್ಲಿ ಸಾಹಿತ್ಯ” ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ. ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕೈಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು ಕವನವಾಚನ ಮಾಡಲಿದ್ದಾರೆ.…

Read More

ಮಡಿಕೇರಿ ಡಿ.13 NEWS DESK  : ನಾಪೋಕ್ಲುವಿನ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಗೆ ಪ್ರತಿಷ್ಠಿತ ಸಿಐಐ – ಎಫ್‍ಪಿಒ ಎಕ್ಸಲೆನ್ಸ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಇದು ಕೊಡಗು ಜಿಲ್ಲೆಗೆ ಹೆಮ್ಮೆಯ ವಿಚಾರವೆಂದು ಸಂಸ್ಥೆಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿಗಾಗಿ ಅರ್ಹತೆ ಪಡೆದ ದೇಶದ 144 ಉತ್ತಮ ರೈತ ಉತ್ಪಾದಕ ಕಂಪನಿಗಳಲ್ಲಿ ಈಶಾ ಫೌಂಡೇಶನ್ ನ 25 ಎಫ್‍ಪಿಒಗಳಲ್ಲಿ ಒಂದಾದ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ನಾಲ್ಕು ಮಾದರಿಯ ಪ್ರಶಸ್ತಿಗಳಲ್ಲಿ ಖರೀದಿ ಮತ್ತು ಮಾರಾಟ ವ್ಯವಹಾರದ ಯಶಸ್ಸಿಗಾಗಿ ನಮ್ಮ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ ಎಂದರು. ಭಾರತದಾದ್ಯಂತದ ರೈತ ಉತ್ಪಾದಕ ಕಂಪನಿಗಳೊಂದಿಗೆ ಸ್ಪರ್ಧಿಸಿ, ಕಠಿಣ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪೊನ್ನಾಡ್ ಎಫ್‍ಪಿಒ ವಿಜಯಶಾಲಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಸಿಐಐ – ಎಫ್‍ಪಿಒ ಶೃಂಗಸಭೆಯಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮಿನಾಜ್…

Read More

ಸೋಮವಾರಪೇಟೆ ಡಿ.13 NEWS DESK : ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದು ಬಸವಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆಯ ಕರ್ಕಳ್ಳಿಯಲ್ಲಿರುವ ಅಕ್ಕನ ಬಳಗದ ಸಭಾಂಗಣದಲ್ಲಿ ಆಡಳಿತ ಮಂಡಳಿಯ ಸದಸ್ಯರಿಗೆ ಮಾರ್ಗದರ್ಶನ ನೀಡಿ ಮಾತನಾಡಿದರು. ಇಂದು ಮಕ್ಕಳಿಗೆ ಸಂಸ್ಕಾರದ ಅಗತ್ಯವಿದೆ. ತಾಯಂದಿರು ಜವಾಬ್ದಾರಿ ತೆಗೆದುಕೊಳ್ಳಬೇಕು, ಆಧುನಿಕತೆ ಬೆಳೆದಂತೆ ಆದ್ಯಾತ್ಮ, ಸಂಸ್ಕಾರ ಮರೆಯಾಗುತ್ತಿದೆ ಎಂದರು.  ಮಾಸಿಕ ಪೂಜೆಯ ದಿನ ಎಲ್ಲಾ ತಾಯಂದಿರು ತಮ್ಮ ಮಕ್ಕಳೊಂದಿಗೆ ವಚನಗಳ ಅಭ್ಯಾಸ, ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡಿ ಆ ಮೂಲಕ ಧಾರ್ಮಿಕ ಜಾಗೃತಿ ಮೂಡಿಸಿ ಹಾಗೂ ಸಮಾಜದಲ್ಲಿ ಅಕ್ಕಮಹಾದೇವಿ ಮತ್ತು ವಚನಕಾರರ ಬಗ್ಗೆ ಅರಿವು ಮೂಡಿಸುವ ಕೆಲಸವಾಗಲಿ ಎಂದು ತಿಳಿಸಿದರು. ಬೆಂಗಳೂರಿನ ಸ್ತ್ರೀರೋಗ ತಜ್ಞ ವೈದ್ಯರಾದ, ಡಾ.ಬಿ.ಎಂ.ಲತಾ ಸಾರ್ವಜನಿಕರ ಉಪಯೋಗಕ್ಕೆ ನೀಡಿದ್ದ ಅಡುಗೆ ಪಾತ್ರೆಗಳನ್ನು ತಪೂಕ್ಷೇತ್ರ ಮನೆಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಅಕ್ಕನ ಬಳಗಕ್ಕೆ ಹಸ್ತಾಂತರಿಸಿ ಆಶೀರ್ವದಿಸಿದರು.  ಈ ಸಂದರ್ಭ ಅಕ್ಕನ ಬಳಗದ ಅಧ್ಯಕ್ಷೆ ಗೀತಾರಾಜು,…

Read More

ಮಡಿಕೇರಿ ಡಿ.13 NEWS DESK  : ಕೊಡಗು ಜಿಲ್ಲೆಯ ನ್ಯಾಷನಲ್ ಮೆಡಿಕೋಸ್ ಸಂಸ್ಥೆ, ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್, ಸ್ವಸ್ಥ ಕೂರ್ಗ್ ಫೌಂಡೇಶನ್ ಸಹಯೋಗದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26 ರಂದು ಕೃತಕ ಅಂಗಾಂಗಗಳ ಉಚಿತ ಜೋಡಣೆ, ವಿತರಣೆ ಮತ್ತು ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಖ್ಯಾತ ಇ.ಎನ್.ಟಿ ವೈದ್ಯರು ಹಾಗೂ ಸಂಸ್ಕೃತಿ ಸಿರಿ ಬಳಗದ ಟ್ರಸ್ಟಿ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಪೊಲೀಸ್ ಮೈತ್ರಿ ಭವನದಲ್ಲಿ ಉಚಿತ ಜೋಡಣೆ, ವಿತರಣೆ, ಆರೋಗ್ಯ ತಪಾಸಣೆ ಮತ್ತು ತಜ್ಞ ವೈದ್ಯರುಗಳ ಸಮ್ಮುಖದಲ್ಲಿ ಸಮಾಲೋಚನೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಐ.ಎಂ.ಎ ಕೊಡಗು, ಎ.ಓ.ಐ ಕೊಡಗು (ಇ.ಎನ್.ಟಿ ಸರ್ಜನ್ಸ್), ಸ್ವಸ್ಥ ಕೂರ್ಗ್, ಡಿಆರ್‍ಎಂ ಆಸ್ಪತ್ರೆ ಮೈಸೂರು, ಎನ್‍ಜಿಒ, ಕೊಡಗು ಕಾಫಿ ಪ್ಲಾಂಟರ್ಸ್ ಸದಸ್ಯರು ಕೊಡಗು ಇವರುಗಳ ಸಹಯೋಗದೊಂದಿಗೆ ನಡೆಸಲಾಗುವ ಉಚಿತ ಶಿಬಿರದಲ್ಲಿ 2ಆ ಇಕೋ ಮತ್ತು ಉಚಿತ ಲ್ಯಾಬ್…

Read More

ಮಡಿಕೇರಿ ಡಿ.11 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮತ್ತು ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳು ಕಚೇರಿ ಎದುರು ಜಮಾಯಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ, ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ರವಿ ಕಾಳಪ್ಪ, ಕೆ.ಎಸ್.ರಮೇಶ್, ಅರುಣ್ ಶೆಟ್ಟಿ, ನಾಗೇಶ್ ಕುಂದಲ್ಪಾಡಿ, ಮನು…

Read More

ಮಡಿಕೇರಿ ಡಿ.13 NEWS DESK : ಶಾಸಕರ ಅನುದಾನದಿಂದ ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ ಹಾಗೂ ಕೋಟೇರಿ ರಸ್ತೆಯಿಂದ ಮೂಟೇರಿ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ದೊರೆಯಿತು. ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪ ಮಾತನಾಡಿ, ಕಾಮಗಾರಿ ನಡೆಯುವ ಸಂದರ್ಭ ಯಾವುದೇ ರೀತಿಯ ರಾಜೀ ಮಾಡಿಕೊಳ್ಳದೆ, ಉತ್ತಮ ರೀತಿಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲು ಸಹಕರಿಸಬೇಕೆಂದು ವಿನಂತಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯರಗಳಾದ ಸಾಬ ತಿಮ್ಮಯ್ಯ, ಕುಲ್ಲೇಟಿರ ಅರುಣ ಬೇಭ, ಹೇಮಾವತಿ, ಗಂಗಮ್ಮ, ಗ್ರಾಮಸ್ಥರಾದ ಬಿದ್ದಾಟಂಡ ಡಿಕ್ಕಿ, ಪಟ್ರಪಂಡ ಮೋಹನ್, ಬಿದ್ದಾಟಂಡ ದಿನೇಶ್, ಬಿದ್ದಾಟಂಡ ಜೀನ್ನು ನಾಣಯ್ಯ, ಬಿದ್ದಾಟಂಡ ರೋಜಿ, ಫುಲ್ಲೇರ ಪದ್ಮಿನಿ, ಬಿದ್ದಾಟಂಡ ಕುಟುಂಬಸ್ಥರು ಹಾಗೂ ಪುಲ್ಲೆರ ಕುಟುಂಬಸ್ಥರು ಹಾಜರಿದ್ದರು.

Read More

ಸುಂಟಿಕೊಪ್ಪ ಡಿ.13 NEWS DESK : ಸುಂಟಿಕೊಪ್ಪ 1ನೇ ವಿಭಾಗ ಹಾಗೂ 3ನೇ ವಿಭಾಗದಲ್ಲಿ ಇದೀಗ ನೂತನ ಟ್ರಾನ್ಸ್‌ಫಾರಂ ಅಳವಡಿಸುವ ಮೂಲಕ ವಿದ್ಯುತ್ ಇಲಾಖೆ ಗ್ರಾಮಸ್ಥರ ಗಂಭೀರ ಸಮಸ್ಯೆಯ ಪರಿಹಾರಕ್ಕೆ ಮುಂದಾಗಿದ್ದು, ಚೆಸ್ಕಾಂ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮಸ್ಥರು ಹಾಗೂ ಪಂಚಾಯಿತಿ ಶ್ಲಾಘನೆ ವ್ಯಕ್ತಪಡಿಸಿದೆ. ಸುಂಟಿಕೊಪ್ಪ 1ನೇ ವಿಭಾಗದ ಗುಡ್ಡಪ್ಪ ರೈ, ಶಿವರಾಮ ರೈ ಬಡಾವಣೆ ಹಾಗೂ ಮಾಸ್ಟರ್ ಬಡಾವಣೆಯಯಲ್ಲಿ ವಿದ್ಯುತ್ ಮಂದಬೆಳಕಿನ ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ಇಲ್ಲಿನ ನಿವಾಸಿಗಳು ಪಂಚಾಯಿತಿ ಸದಸ್ಯರುಗಳ ಗಮನಕ್ಕೆ ತಂದ ಮೇರೆಗೆ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಚೆಸ್ಕಾಂ ಇಲಾಖೆಗೆ ನೂತನ ಟ್ರಾನ್ಸ್‌ಫಾರಂ ಅಳವಡಿಸುವಂತೆ ಮನವಿ ಮಾಡಲಾಗಿತ್ತು. ಇದೀಗ ನೂತನ ಟ್ರಾನ್ಸ್‍ಫಾರಂ ಅಳವಡಿಸುವ ಮೂಲಕ ವಿದ್ಯುತ್ ಇಲಾಖೆ ಗ್ರಾಮಸ್ಥರ ಗಂಭೀರ ಸಮಸ್ಯೆಯನ್ನು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಸಭೆಯಲ್ಲಿ ನಿರ್ಣಯ ಕೈಗೊಂಡು ಪಂಚಾಯಿತಿ ವತಿಯಿಂದ ಚೆಸ್ಕಾಂ ಇಲಾಖೆಗೆ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಮನವಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಚೆಸ್ಕಾಂ…

Read More