ಮಡಿಕೇರಿ NEWS DESK ಡಿ.12 : ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ಶಿಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ಶಿಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿ0ದ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬ0ದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ…
ಲೇಖಕ: admin
ಮಡಿಕೇರಿ ಡಿ.12 NEWS DESK : ಸಿಂಗಾಪುರದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆಯಲ್ಲಿ ಕೊಟ್ಟಗೇರಿಯ ಅರಮಣಮಾಡ ಪೊನ್ನಮ್ಮ ಸೋಮಯ್ಯ ಕಂಚಿನ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಚೆಪ್ಪುಡೀರ ಅರುಣ್ ಮಾಚಯ್ಯ ನೇತೃತ್ವದಲ್ಲಿ ಸಿಂಗಾಪುರದಲ್ಲಿ ನಡೆದ 16ನೇ ಏಷಿಯಾ ಪೆಸಿಫಿಕ್ ಶಿಟೋರಿಯೋ ಕರಾಟೆ ಚಾಂಪಿಯನ್ ಶಿಪ್’ನಲ್ಲಿ ಭಾಗವಹಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾಳೆ. ಗೋಣಿಕೊಪ್ಪಲಿನ ಜಮ್ಮಡ ಜಯ ಜೋಯಪ್ಪ ಹಾಗೂ ಕಾರ್ತಿಕ್ ದೇವಯ್ಯ ಅವರಲ್ಲಿ ತರಬೇತಿ ಪಡೆಯುತ್ತಿರುವ ಪೊನ್ನಮ್ಮ ಬಾಳೆಲೆ ಸಮೀಪದ ಕೊಟ್ಟಗೇರಿಯ ನಿವಾಸಿ ಅರಮಣಮಾಡ ವಿನು ಸೋಮಯ್ಯ ಹಾಗೂ ಶಿಲ್ಪ ಸೋಮಯ್ಯ ಅವರ ಪುತ್ರಿ.
ವಿರಾಜಪೇಟೆ ಡಿ.12 NEWS DESK : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ನಡೆಸಲಾಗುವ 14 ವರ್ಷದ ಒಳಗಿರುವ ಬಾಲಕರ ಕ್ರಿಕೆಟ್ ಪಂದ್ಯಾವಳಿಗೆ ಕೊಡಗಿನ ಇಬ್ಬರು ಬಾಲಕರು ಆಯ್ಕೆಯಾಗಿದ್ದಾರೆ. ವಿರಾಜಪೇಟೆ ಪ್ರಗತಿ ಆಂಗ್ಲ ಮಾದ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯಶಸ್ಸ್ ಮತ್ತು 7ನೇ ತರಗತಿಯ ವಿದ್ಯಾರ್ಥಿ ವೃತನ್ ಮಂಗಳೂರು ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.ಈ ಹಿಂದೆ ಮೈಸೂರು ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ರಾಯಚೂರು ವಿಭಾಗ, ಮಂಗಳೂರು ವಿಭಾಗ, ಮೈಸೂರು ವಿಭಾಗ, ಶಿವಮೊಗ್ಗ ವಿಭಾಗ, ಧಾರವಾಡ ವಿಭಾಗ ಮತ್ತು ತುಮಕೂರು ವಿಭಾಗಗಳ ಮಧ್ಯೆ 14 ವರ್ಷ ಒಳಗಿರುವ ಬಾಲಕರ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ನಾಪೋಕ್ಲು ಡಿ.12 NEWS DESK : ಮೈಸೂರು ಕೇರಳ ಸಮಾಜದಲ್ಲಿ ನ್ಯಾಷನಲ್ ಮುಬೀನ ಹಾಗೂ ಶಿಟೋರಿಯೋ ಅಸೋಸಿಯೇಷನ್ ವತಿಯಿಂದ ನಡೆದ ಮೂರನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪದಕಗೆದ್ದು ಸಾಧನೆ ಮಾಡಿದ್ದಾರೆ. ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಟ್ಟಂಚೆಟ್ಟಿರ ಕೆ.ಪಿ. ಅಂಜನ್ ಹಾಗೂ ಕೇಲೇಟಿರ ಈತನ್ ಪೊನ್ನಣ್ಣ ಕರಾಟೆ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಸ್.ದೈವಿಕ ಕುಮಿತೆ ವಿಭಾಗದಲ್ಲಿ ಬೆಳ್ಳಿ, ಕಟಾ ಕಂಚು ಪದಕ ಪಡೆದಿದ್ದಾರೆ. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮಣವಟ್ಟಿರ ಲಚನ್ ಪೊನ್ನಣ್ಣ ಕಟಾ ಮತ್ತು ಕುಮಿತೆ ವಿಭಾಗದಲ್ಲಿ ಕಂಚು ಪಡೆದಿದ್ದಾರೆ. ಇವರಿಗೆ ಚೆಟ್ಟಿಯಾರಂಡ ದಿಲನ್ ತಿಮಯ್ಯ ಹಾಗೂ ಧೀರಜ್ ಕಾರ್ಯಪ್ಪ ಅವರು ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.12 NEWS DESK : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ದಶಾ ದೇಚಮ್ಮ ಹಾಗೂ ಶಮಂತ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಸ್ಥಾಪಕ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ, ನಿರ್ದೇಶಕಿ ವಿದ್ಯಾ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಪ್ರಶಸ್ತಿ ಪತ್ರ ವಿತರಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.12 NEWS DESK : ಸದಸ್ಯರ ಒಗ್ಗಟ್ಟು ಮತ್ತು ಆರ್ಥಿಕ ಸಹಕಾರದಿಂದ ಸಮಾಜವನ್ನು ಅಭಿವೃದ್ಧಿಪಡಿಸಲು ಸಾಧ್ಯ ಎಂದು ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್ ಹೇಳಿದರು. ಮೂರ್ನಾಡು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ ಮೂರ್ನಾಡು ಗೌಡ ಸಮಾಜದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳು ಉತ್ತಮ ಗುಣನಡತೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಕಠಿಣ ಶ್ರಮವಹಿಸಿ ಕ್ರೀಡೆ, ಕೃಷಿ ಮತ್ತು ವಿದ್ಯಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಕೀರ್ತಿಯನ್ನು ತರುವಂತಾಗಬೇಕು .ಈ ನಿಟ್ಟಿನಲ್ಲಿ ಪೋಷಕರ ಜವಾಬ್ದಾರಿ ಅತಿ ಮುಖ್ಯವಾಗಿದೆ ಎಂದರು. ಸಭೆಯಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ಸದಸ್ಯರ ಸಲಹೆ ಸೂಚನೆಗಳನ್ನು ಪರಿಗಣಿಸಿ ಆಡಳಿತ ಮಂಡಳಿ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಈ ಸಂದರ್ಭ ದಾನಿ ಉಳುವಾರನ ಎಸ್.ವಸಂತಕುಮಾರ್ (ಬೆಂಗಳೂರು) ಅವರನ್ನು ಸಮಾಜದ ವತಿಯಿಂದ ಫಲಪುಷ್ಪ ತಾಂಬೂಲ ನೀಡಿ ಸನ್ಮಾನಿಸಲಾಯಿತು. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನು ಪ್ರತಿಭಾ…
ಮಡಿಕೇರಿ NEWS DESK ಡಿ.12 : ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿದ್ದ ಆರು ಗಂಟೆಗಳ ಕೊಡಗು ಬಂದ್ ಗೆ ಉತ್ತಮ ಸ್ಪಂದನೆ ದೊರೆತ್ತಿದೆ. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು, ಖಾಸಗಿ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಹೊಟೇಲ್ ಸೇರಿದಂತೆ ವಿವಿಧ ವ್ಯಾಪಾರೋದ್ಯಮಗಳು ಬಂದ್ ಆಗಿವೆ. ಬೆರಳೆಣಿಕೆಯಷ್ಟು ಅಂಗಡಿ ಮತ್ತು ಹೊಟೇಲ್ ಗಳು ತೆರೆದಿದ್ದು, ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸುತ್ತಿವೆ. ವಾಹನಗಳ ಸಂಚಾರ ಮಾಮೂಲಿನಂತಿದೆ. ಸರಕಾರಿ ಬಸ್ ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿದೆ. ಖಾಸಗಿ ವಾಹನಗಳ ಸಂಚಾರ ಎಂದಿನoತ್ತಿದೆ. ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಶೇ.50 ರಷ್ಟು ಆಟೋರಿಕ್ಷಾಗಳು ಸಂಚರಿಸುತ್ತಿವೆ. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ, ಗೋಣಿಕೊಪ್ಪಲು ಮೊದಲಾದೆಡೆ ಬಂದ್ ಗೆ ಸ್ಪಂದನೆ ದೊರೆತ್ತಿದೆ. ಗುರುವಾರ ಬೆಳಿಗ್ಗೆ 6 ಗಂಟೆಯಿoದ ಮಧ್ಯಾಹ್ನ 12…
ಮಡಿಕೇರಿ NEWS DESK ಡಿ.11 : ಭಾರತ ದೇಶ ಕಂಡ ಸರ್ವ ಶ್ರೇಷ್ಠ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ರಾಷ್ಟ್ರದ್ರೋಹಿ ಕೃತ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಡಿ.12ರ ಕೊಡಗು ಬಂದ್ ಗೆ ನೈತಿಕ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಶಾಂತವಾದ ಕೊಡವಲ್ಯಾಂಡ್ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಭಂಗಗೊಳಿಸುವ ಈ ಪ್ರಯತ್ನವು ದೇಶದ್ರೋಹ, ಪ್ರಭುತ್ವ ದ್ರೋಹ, ವಿದ್ರೋಹ ಹಾಗೂ ಬುಡಮೇಲು ಕೃತ್ಯದಂತಹ ದ್ರೋಹ ಚಿಂತನೆಯನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ. ಪಿತೂರಿಯ ಆಳ ಅಗಲವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಲಂಕುಷವಾಗಿ ತನಿಖೆ ನಡೆಸಬೇಕು. ಕಿಡಿಗೇಡಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಬೇಕು ಮತ್ತು ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ನಡೆಸಬೇಕು. ತಪ್ಪಿತಸ್ಥನೆಂದು ಕಂಡುಬಂದರೆ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಡಿ.12ರ ಬಂದ್‌ಗೆ ನಾವು ನೈತಿಕ…
ಮಡಿಕೇರಿ NEWS DESK ಡಿ.11 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಕೊಡಗು ಬಂದ್ ಗೆ ಕಾವೇರಿಸೇನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸೇನೆಯ ಸಂಚಾಲಕ ರವಿ ಚಂಗಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗಿನ ಹೆಮ್ಮೆಯ ವೀರಪುತ್ರರಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಈ ಪ್ರಕರಣ ಕೊಡಗು ಮಾತ್ರವಲ್ಲದೆ ಇಡೀ ದೇಶದ ಜನರಿಗೆ ನೋವನ್ನುಂಟು ಮಾಡಿದೆ. ವೀರ ಸೇನಾಧಿಕಾರಿಗಳಿಗೆ ಅಗೌರವ ತೋರಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಕರೆ ನೀಡಲಾಗಿರುವ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗಿನ ಬಂದ್ ಗೆ ಕಾವೇರಿಸೇನೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಸಮಸ್ತ ಜನತೆ ಕೂಡ ಬೆಂಬಲ ನೀಡುವ ಮೂಲಕ ಬಂದ್ ನ್ನು…
ಮಡಿಕೇರಿ ಡಿ.11 : ಕುಶಾಲನಗರದಲ್ಲಿ ವಿವಾಹ ಶಾಸ್ತ್ರ ನಡೆಯುತ್ತಿದ್ದ ಸಂದರ್ಭ ವಧುವಿನ ಕೊಠಡಿಯಿಂದ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಪ್ರಕರಣವನ್ನು ಬೇಧಿಸಿರುವ ಕೊಡಗು ಜಿಲ್ಲಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಶಾಲನಗರ ಸಮೀಪದ ತೊರೆನೂರು ನಿವಾಸಿ ಚರಣ್ ಕುಮಾರ್(19), ಗೋಣಿಮರೂರು ಗ್ರಾಮದ ನಿವಾಸಿ ನಿತಿನ್ ಎಸ್.ಎಲ್.(22) ಹಾಗೂ ಅರಿಶಿನಕುಪ್ಪೆ ನಿವಾಸಿ ಮಿಥುನ್(24) ಎಂಬುವವರೇ ಬಂಧಿತ ಆರೋಪಿಗಳು. ಕುಶಾಲನಗರದ ರೈತ ಭವನದಲ್ಲಿ ನ.28 ರಂದು ನಳಿನಿ ಎಂಬುವವರ ಮಗಳ ವಿವಾಹ ಶಾಸ್ತç ನಡೆಯುತಿತ್ತು. ಈ ಸಂದರ್ಭ ವಧುವಿನ ಕೊಠಡಿಯಲ್ಲಿದ್ದ 28 ಗ್ರಾಂ ಚಿನ್ನಾಭರಣ ಮತ್ತು 5 ಸಾವಿರ ರೂ. ನಗದು ಕಳವಾಗಿತ್ತು. ಈ ಬಗ್ಗೆ ನಳಿನಿ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆೆ ನಡೆಸಿ ಆರೋಪಿಗಳನ್ನು ಬಂಧಿಸಿದರು. ಮಾಲು ಸಹಿತ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಪಿಐ ಪ್ರಕಾಶ್ ಬಿ.ಜಿ., ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ಪಿಎಸ್‌ಐ…






