ಲೇಖಕ: admin

ಮಡಿಕೇರಿ NEWS DESK ಡಿ.11 : ಕೊಡಗು ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿ ಧರ್ಮ, ಜಾತಿಗಳನ್ನು ಮೀರಿದ ಬಾಂಧವ್ಯವಿದೆ. ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರು ಕೊಡಗಿನ ಅಸ್ಮಿತೆಯಾಗಿದ್ದಾರೆ. ಸ್ವಾತಂತ್ರö್ಯ ಹೋರಾಟಗಾರರೇ ಇರಲಿ, ದೇಶಕಾಯುವ ವೀರ ಸೇನಾನಿಗಳೇ ಇರಲಿ ಯಾರಿಗೂ ಅವಮಾನವಾದರೂ ಅದು ಇಡೀ ಕೊಡಗಿನ ಜನತೆಗೆ ಅವಮಾನವಾದಂತೆ ಎಂದು ಕೊಡಗು ಗೌಡ ಯುವ ವೇದಿಕೆ ಅಭಿಪ್ರಾಯಪಟ್ಟಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ, ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಒಬ್ಬ ಅನಾಮಿಕ ಎಂದು ದುರುದ್ದೇಶದಿಂದ ಸುಳ್ಳು ಹೇಳುವ ಮೂಲಕ ಕೊಡಗಿನ ಜನ ಸಮುದಾಯದ ನಡುವೆ ಶಾಂತಿ ಕದಡುವ ಪ್ರಯತ್ನವನ್ನು ಕೆಲವರು ಮಾಡಿದ್ದರು. ಆದರೆ ನ್ಯಾಯಾಲಯದಲ್ಲಿ ಇವರಿಗೆ ಸರಿಯಾದ ಉತ್ತರ ದೊರೆತ್ತಿದ್ದು, ಯುವ ವೇದಿಕೆ ಇದನ್ನು ಸ್ವಾಗತಿಸುವುದಾಗಿ ಹೇಳಿದರು. ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರು ಕೊಡಗಿನ ಅಸ್ಮಿತೆಯಾಗಿದ್ದು, ಅವರು 1837ರ ಕೊಡಗು-ಕೆನರಾ ಬ್ರಿಟಿಷ್ ವಿರೋಧಿ ಯುದ್ಧದ ಪ್ರಮುಖ ನಾಯಕರು. ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಗಲ್ಲಿಗೆ…

Read More

ಮಡಿಕೇರಿ ಡಿ.11 NEWS DESK : ಕಾಡಾನೆಯೊಂದು ಕಾಫಿ ತೋಟ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಪಾಲಿಬೆಟ್ಟದ ಕಾರ್ಮಿಕ ಮಂಜು(42) ಅಮ್ಮತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕ ಮಂಜು ಮತ್ತು ಸ್ನೇಹಿತನೊಂದಿಗೆ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ ಸಂದರ್ಭ ಕಾಫಿ ತೋಟದೊಳಗಿದ್ದ ಕಾಡಾನೆಯೊಂದು ಹಿಂಬದಿಯಿಂದ ಏಕಾಏಕಿ ದಾಳಿ ಮಾಡಿ ಗಾಯಗೊಳಿಸಿದೆ. ಜೊತೆಯಲಿದ್ದ ಮತ್ತೋರ್ವ ಕಾರ್ಮಿಕ ಕಾಡಾನೆ ದಾಳಿಯಿಂದ ಪಾರಾಗಿ ಇತರ ಕಾರ್ಮಿಕರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಬಂದ ಕಾರ್ಮಿಕರು ಗಂಭೀರ ಗಾಯಗೊಂಡ ಕಾರ್ಮಿಕ ಮಂಜು ಅವರನ್ನು ಪ್ರಥಮ ಚಿಕಿತ್ಸೆಗೆ ಅಮ್ಮತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸಿಎಫ್ ಗೋಪಾಲ್, ಆರ್ ಎಫ್ ಓ ಗಂಗಾಧರ್ ಗಾಯಾಳುವಿನ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಳುವಿನ ಸಂಪೂರ್ಣ ವೆಚ್ಚವನ್ನು ಇಲಾಖೆ…

Read More

ಮಡಿಕೇರಿ ಡಿ.11 NEWS DESK : ಸಾಮಾಜಿಕ ಜಾಲತಾಣಗಳಲ್ಲಿ ದೇಶದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಅಗೌರವ ತೋರಿದ ಪ್ರಕರಣವನ್ನು ಖಂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕರೆ ನೀಡಿರುವ ಕೊಡಗು ಬಂದ್ ಗೆ ಕೊಡಗು ಹೆಗ್ಗಡೆ ಸಮಾಜ ಸಂಪೂರ್ಣ ಬೆಂಬಲ ನೀಡುವುದಾಗಿ ಸಮಾಜದ ಕಾರ್ಯದರ್ಶಿ ಪಡಿಞರಂಡ ಪ್ರಭು ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.11 NEWS DESK : ದಕ್ಷಿಣ ಕೊಡಗಿನ ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಮತ್ತು ಡಿಸ್ಪೆನ್ಸರ್ ಹಾಗೂ 11 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ನೀರಿನ ಘಟಕ ವನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಮಾಯಾಮುಡಿ ಗ್ರಾ.ಪಂ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಅವರು, ಮಕ್ಕಳಿಗೆ ಶುದ್ಧ ಕುಡಿಯುವ ನೀರನ್ನು ನೀಡುವ ಉದ್ದೇಶದಿಂದ ಬಿಸಿ ಹಾಗೂ ತಣ್ಣೀರಿನ ವಾಟರ್ ಫಿಲ್ಟರ್‌ನ್ನು ನೀಡಲಾಗಿದೆ ಎಂದರು. ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿಯನ್ನು ಗ್ರಾ.ಪಂ. ಹೊಂದಿದೆ. ಸ್ವಚ್ಛ ಪರಿಸರ, ಶುದ್ಧಗಾಳಿ, ನೀರು ಎಲ್ಲರಿಗೂ ಅತ್ಯವಶ್ಯಕ. ಶುದ್ಧಗಾಳಿ ಮತ್ತು ಶುದ್ಧ ನೀರಿನಿಂದ ಶೇ.80ರಷ್ಟು ವಿವಿಧ ರೋಗಗಳು ಬಾರದಂತೆ ತಡೆಗಟ್ಟಬಹುದು ಎಂದು ತಿಳಿಸಿದರು. ಕುಡಿಯುವ ನೀರಿನ ಘಟಕದಿಂದ ಮಾಯಮುಡಿ ಗ್ರಾ.ಪಂ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ. ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಮಾಯಮುಡಿ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು,…

Read More

ಮಡಿಕೇರಿ ಡಿ.11 NEWS DESK : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕರಣಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.

Read More

ಮಡಿಕೇರಿ ಡಿ.11 NEWS DESK : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಎರಡು ಪ್ರತಿಷ್ಠಿತ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿಗಳಿಗೆ ಕೊಡಗು ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ. ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರಿಗೆ ರಾಜ್ಯಮಟ್ಟದ ‘ಡಾ.ಎಚ್.ನರಸಿಂಹಯ್ಯ’ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಜಾನಪದ ತಜ್ಞರಾದ ರಾಣಿ ಮಾಚಯ್ಯ ಅವರು ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯದಲ್ಲಿ ಜಿಲ್ಲೆಗೊಬ್ಬರಂತೆ ಜೀವಮಾನ ಸಾಧಕರನ್ನು ಗುರುತಿಸಿ ‘ಎಚ್ ಎನ್’ ಪ್ರಶಸ್ತಿ ನೀಡಲಾಗುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಹಿರಿಯ ಪತ್ರಕರ್ತರಾದ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಅವರನ್ನು ಆಯ್ಕೆ ಮಾಡಲಾಗಿದ್ದು, ರಾಜ್ಯಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಸಾಧನಾ ಪ್ರಶಸ್ತಿ ‘ಚೈತನ್ಯ ಸ್ತ್ರೀ’ ಪ್ರಶಸ್ತಿ ಕೊಡಗು ಜಿಲ್ಲೆಯ ರಾಣಿ ಮಾಚಯ್ಯ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಪರಿಷತ್ ರಾಜ್ಯ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಮಟ್ಟದ ನಾಲ್ಕನೇ…

Read More

ಮಡಿಕೇರಿ ಡಿ.11 NEWS DESK : ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ 2024-25ನೇ ಸಾಲಿನ ಮಕ್ಕಳ ಗ್ರಾಮಸಭೆಯು ಚೆಟ್ಟಿಮಾನಿ ಶಾಲಾ ಆವರಣದಲ್ಲಿ ನಡೆಯಿತು. ಶಾಲಾ ನಾಯಕ ಕೌಶಿಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು. ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಮಕ್ಕಳ ಬೇಡಿಕೆಗಳ ಬಗ್ಗೆ ಹಿಂದಿನ ಸಭೆಯ ನಡಾವಳಿಯನ್ನು ವಿವರಿಸಿದರು. ಚರಂಡೆಟ್ಟಿ, ಕೋಪಟ್ಟಿ, ಕಾನಕಂಡಿ ಮತ್ತು ಚೆಟ್ಟಿಮಾನಿ ಶಾಲೆಯ ಮಕ್ಕಳು ವಿವಿಧ ಸಮಸ್ಯೆಗಳ ಕುರಿತು ಪಂಚಾಯ್ತಿ ಆಡಳಿತ ಮಂಡಳಿಯ ಗಮನ ಸೆಳೆದರು. ಎಲ್ಲಾ ಬೇಡಿಕೆಗಳನ್ನು ಕ್ರೀಯಾಯೋಜನೆಯಲ್ಲಿ ಅಳವಡಿಸಲಾಗುವುದೆಂದು ಆಡಳಿತ ಮಂಡಳಿ ತಿಳಿಸಿತು. ಕುಂದಚೇರಿ ಪಂಚಾಯಿತಿ ಆಡಳಿತ ಮಂಡಳಿ, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಸಹ ಶಿಕ್ಷಕರು ವಿದ್ಯಾರ್ಥಿಗಳು, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಗೂ ಮೊದಲು ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ ನಾಲ್ಕು ಶಾಲೆಗಳ ಮಕ್ಕಳಿಗಾಗಿ ಸ್ವಚ್ಛತೆ, ಛದ್ಮವೇಷ, ಏಕಪಾತ್ರಾಭಿನಯ, ರಸಪ್ರಶ್ನೆ, ಪ್ರಬಂಧ, ಗಟ್ಟಿ ಓದುವುದು, ಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತೀರ್ಪುಗಾರರಾಗಿ ಪಿಡಿಓ ಯಾದವ್,…

Read More

ಮಡಿಕೇರಿ ಡಿ.11 NEWS DESK : ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ವಿರಾಜಪೇಟೆಯ ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವಣ್ಣ ಎಸ್. ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ಕೆಂಚನೂರು ಶಂಕರ, ಕಾರ್ಯಕ್ರಮದ ಆಯೋಜಕರಾದ ವಿದೂಷಿ ಪ್ರೇಮಾಂಜಲಿ ಆಚಾರ್ಯ ಹಾಗೂ ಅತಿಥಿ ಗಣ್ಯರು ಶಿವಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಶಿವಣ್ಣ ಅವರ ಸಾಧನೆಯನ್ನು ಗುರುತಿಸಿ ಇತ್ತೀಚೆಗೆ ಕುಟ್ಟಂದಿ ಕೆ.ಬಿ.ಪ್ರೌಢಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

Read More

ಮಡಿಕೇರಿ ಡಿ.11 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮತ್ತು ರಾಜ್ಯ ಸರಕಾರದ ನಿರ್ಲಕ್ಷö್ಯ ಧೋರಣೆಯನ್ನು ಖಂಡಿಸಿ ಡಿ.13 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಟೀಕಿಸಿದ್ದಾರೆ. ಬಜೆಟ್‌ನಲ್ಲಿ ಘೋಷಿಸುವ ಮೊತ್ತಕ್ಕೂ, ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಇದರಿಂದ ಹಿಂದುಳಿದ, ಅತೀ ಹಿಂದುಳಿದ, ಅಲೆಮಾರಿ ಸಮುದಾಯಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಇತರ ಸಮುದಾಯಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಹಿಂದಿನ ಸರಕಾರದಲ್ಲಿ ಸ್ವ-ಉದ್ಯೋಗ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ…

Read More

ಮಡಿಕೇರಿ NEWS DESK ಡಿ.11 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಆರು ಗಂಟೆಗಳ ಕೊಡಗು ಬಂದ್ ಗೆ ಅರೆಕಾಡು ಹೊಸ್ಕೇರಿಯ ಕೊಡವ ವೆಲ್ ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಬೆಂಬಲ ಸೂಚಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಇಬ್ಬರು ವೀರ ಸೇನಾಧಿಕಾರಿಗಳನ್ನು ಅಪಮಾನಿಸಿರುವ ಪ್ರಕರಣ ಭಾರತೀಯ ಸೇನಾ ವ್ಯವಸ್ಥೆಗೆ ತೋರಿದ ಅಗೌರವವಾಗಿದೆ. ಆದ್ದರಿಂದ ಇದನ್ನು ದೇಶದ್ರೋಹದ ಪ್ರಕರಣವೆಂದು ಪರಿಗಣಿಸಿ ಕಿಡಿಗೇಡಿಯನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೊಡಗಿನ ವೀರ ಪುತ್ರರಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರು ಒಂದು ಜನಾಂಗಕ್ಕೆ ಸೀಮಿತರಾದವರಲ್ಲ, ಬದಲಿಗೆ ಸೇನಾಪಡೆಯ ಶಕ್ತಿಯನ್ನು ಹೆಚ್ಚಿಸಿ ದೇಶಭಕ್ತಿ ಮೆರೆದ ಇಬ್ಬರು ವೀರರು ಇಡೀ ದೇಶದ ಆಸ್ತಿಯಾಗಿದ್ದಾರೆ.…

Read More