ಬೆಂಗಳೂರು ಅ.24 NEWS DESK : 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‍ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಇಂದು (ಅ.23) ನಡೆದ ಶತಮಾನೋತ್ಸವ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರುವ ಡಿಸೆಂಬರ್‍ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಂಟಿ ಅಧಿವೇಶನಕ್ಕೆ ಮಹಾತ್ಮಾ ಗಾಂಧೀಜಿಯವರನ್ನು ಜಗತ್ತಿನ ನಾಯಕ ಎಂದು ಕರೆದ ಅಮೇರಿಕಾದ ಮಾಜಿ ಅಧ್ಯಕ್ಷರಾಗಿರುವ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಬರಾಕ್…
ಲೇಖಕ: admin
ಮಡಿಕೇರಿ ಅ.24 NEWS DESK : ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆಯುತ್ತಿರುವ 17 ವರ್ಷದೊಳಗಿನ ಬಾಲಕಿಯರ ಸಿ.ಬಿ.ಎಸ್.ಇ. ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಮಡಿಕೇರಿಯ ಕೊಡಗು ವಿದ್ಯಾಲಯ ಬಾಲಕಿಯರ ತಂಡವು ಫೈನಲ್ ಹಂತಕ್ಕೆ ಪ್ರವೇಶಿಸಿದೆ. ಸೆಮಿ ಫೈನಲ್ ಪಂದ್ಯದಲ್ಲಿ ಕೊಡಗು ವಿದ್ಯಾಲಯ ತಂಡವು ತಮಿಳುನಾಡಿನ ಸಚ್ಚಿದಾನಂದ ಜ್ಯೋತಿ ನಿಕೇತನ್ ಶಾಲಾ ತಂಡವನ್ನು 2-0 ಗೋಲುಗಳಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿತು. ಕೊಡಗು ವಿದ್ಯಾಲಯ ತಂಡದ ನಾಯಕಿ ಪರ್ಲಿನ್ ಪೊನ್ನಮ್ಮ ಫೀಲ್ಡ್ ಗೋಲು ಬಾರಿಸಿದರೆ ಮುನ್ನಡೆ ಆಟಗಾರ್ತಿ ನೀತು ಚೌದ್ರಿ ಪೆನಾಲ್ಟಿ ಕಾರ್ನರ್ ನಲ್ಲಿ ಗೋಲು ಬಾರಿಸುವ ಮೂಲಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊಡಗು ವಿದ್ಯಾಲಯ ತಂಡವು ಉತ್ತರ ಪ್ರದೇಶದ ಶ್ರೀ ಠಾಕೂರ್ ದ್ವಾರಾ ಬಾಲಿಕ ವಿದ್ಯಾಲಯ ತಂಡವನ್ನು 1-0 ಗೋಲುಗಳಿಂದ ಸೋಲಿಸಿತ್ತು. ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಮಡಿಕೇರಿಯ ಕೊಡಗು ವಿದ್ಯಾಲಯ ತಂಡವು ಹರಿಯಾಣದ ಬಲಿಷ್ಠ ತಂಡವಾದ ಲಿಟ್ಲ್ ಏಂಜಲ್ ಸ್ಕೂಲ್ ಸೋನಿಪತ್…
ಮಡಿಕೇರಿ ಅ.24 NEWS DESK : ಬಾಳೆಯಡ ಚರ್ಮಣ ರಾಜು ಹಾಗೂ ಮಾಚಮ್ಮ ಪಾಚಿ (ತಾಮನೆ ಮಾಚೆಟ್ಟಿರ) ದಂಪತಿಯರ ಪುತ್ರನಾಗಿ ಕರುಣ್ ಕಾಳಪ್ಪನವರು ಸೋಮವಾರಪೇಟೆಯಲ್ಲಿ ಜನಿಸಿದರು. ಶಿಕ್ಷಣ :: ಕರುಣ್ ಅವರ ಪ್ರಾಥಮಿಕ ಶಿಕ್ಷಣ ಮಾದಪುರ ಹಾಗೂ ಕೊಡ್ಲಿಪೇಟೆ ಸರ್ಕಾರಿ ಶಾಲೆ ಹಾಗೂ ಮಡಿಕೇರಿಯ ಸೈಂಟ್ ಮೈಕಲ್ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ವಿರಾಜಪೇಟೆ ಸೈಂಟ್ ಅನ್ಸ್ ಶಾಲೆಯಲ್ಲಿ, ಸರ್ಕಾರಿ ಸೀನಿಯರ್ ಕಾಲೇಜು ಮಡಿಕೇರಿಯಲ್ಲಿ ಪಿ.ಯು.ಸಿ ಯ ಜೊತೆಗೆ ವಾಂಡರರ್ಸ್ ಗೆ ಸೇರಿ ಶಂಕರ್ ಸ್ವಾಮಿ ಅವರ ಶಿಷ್ಯರಾಗಿ ಮುಂದುವರಿಯುತ್ತಾರೆ. ಸೈಂಟ್ ಜೋಸೆಫ್ ಕಾಲೇಜು ಬೆಂಗಳೂರಿನಲ್ಲಿ ಬಿ.ಎ ಪದವಿಯನ್ನು ಪಡೆಯುತ್ತಾರೆ. ತದನಂತರ ಮಾರ್ಕೆಟಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆಯುತ್ತಾರೆ. ಎಂ.ಬಿ.ಎ ಯನ್ನು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ ಮಾಡುತ್ತಾರೆ. ಇವರು ಕಾಲೇಜು ದಿನಗಳಲ್ಲಿ ಉತ್ತಮ ಓಟಗಾರರಾಗಿದ್ದರು. 1982 ರಲ್ಲಿ ಕ್ರೀಡಾ ಶಾಲೆ :: ಪದ್ಮಶ್ರೀ ಪುರಸ್ಕೃತ ಎಂ.ಪಿ.ಗಣೇಶ್ ಅವರ ಕನಸಿನಂತೆ ಲಕ್ನೋದಲ್ಲಿ ಕೆ.ಡಿ.ಸಿಂಗ್ ಬಾಬು ಅವರು ಸ್ಥಾಪಿಸಿದ ಕ್ರೀಡಾ ಶಾಲೆಯಂತೆಯೇ ಕರ್ನಾಟಕದಲ್ಲಿ ಸ್ಥಾಪಿಸಬೇಕು…
ಮಡಿಕೇರಿ ಅ.23 NEWS DESK : ಕೊಡಗು ಜಿಲ್ಲೆಯಲ್ಲಿ ಅ.26 ರಂದು ನಡೆಯುವ ಕಂದಾಯ ಇಲಾಖೆಯ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ(ಸ್ಥಳೀಯ) ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರವಾದ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಡಿಕೇರಿ ಸೇರಿದಂತೆ ಈ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ…
ಮಡಿಕೇರಿ ಅ.23 NEWS DESK : ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 1824 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಈಗ 200 ವರ್ಷ ಆಗಿದೆ. ಚೆನ್ನಮ್ಮ ಜೊತೆ ಸಂಗೊಳ್ಳಿರಾಯಣ್ಣ ಸಹ ಹೋರಾಡಿದ್ದರು. ನಂತರ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಹೋರಾಡಿದ್ದರು. ಪ್ರತಿ ದಿನ ಪ್ರತಿ ಕ್ಷಣ ಅವರ ನೆನಪು ಇರಬೇಕು. ನೆನಪಷ್ಟೇ ಅಲ್ಲದೆ ಅವರ ಜೀವನ ಸಂದೇಶವನ್ನು ಪಾಲಿಸಬೇಕು. ಅವರ ಕನಸು ನನಸಾಗುತ್ತದೆ ಎಂದು ಹೇಳಿದರು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ.…
ಮಡಿಕೇರಿ ಅ.23 NEWS DESK : ಕೊಡಗು ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆಯು ಅ.25 ರಿಂದ ನ.3 ರವರೆಗೆ ನಡೆಯಲಿದ್ದು, ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಮೀಕ್ಷೆ ನಡೆಸಿ ಕಾಲಮಿತಿಯಲ್ಲಿ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ನಗರಾಭಿವೃದ್ಧಿ ಕೋಶ ಜೊತೆಗೆ ಪಂಚಾಯತ್ ರಾಜ್ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿ ಸರ್ವೋಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ…
ಮಡಿಕೇರಿ ಅ.23 NEWS DESK : ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್ತಿನ ಬೇರುಗಳಂತೆ ಅದು ಗಟ್ಟಿಗೊಂಡರೆ ಪರಿಷತ್ತು ಸದೃಢಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ನುಡಿದರು. ಗಡಿಭಾಗ ಕುಟ್ಟ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶ್ರೀಮಂಗಲ ಹೋಬಳಿಯ ನೂತನ ಕಾರ್ಯಕಾರಿ ಮಂಡಳಿಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಡಿಭಾಗದ ಕನ್ನಡೇತರರಿಗೆ ಕನ್ನಡ ಕಲಿಸುವ ಕೆಲಸ ಆಗಬೇಕಿದೆ. ಅಲ್ಲದೆ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು. ಪರಿಷತ್ತಿನ ಸದಸ್ಯತ್ವ ಮತ್ತು ದತ್ತಿ ಸ್ಥಾಪನೆಗೆ ಹೋಬಳಿ ಸದಸ್ಯರು ಮುಂದಾಗಬೇಕು ಎಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಮಂಗಲ ಹೋಬಳಿಯ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ್, ಮುಂದಿನ ತಿಂಗಳಿನಲ್ಲಿ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಎರಡು ದತ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಿದ್ದು, ಅದರ ಸಂಕ್ಷಿಪ್ತ ರೂಪುರೇಷೆ ವಿವರಿಸಿದರು. ಶ್ರೀಮಂಗಲ ಹೋಬಳಿಯ ಇನ್ನಿತರ ಸಂಘ ಸಂಸ್ಥೆಗಳ ಒಡಗೂಡಿ ಕಾರ್ಯಕ್ರಮ ನಡೆಸಲು ಆಡಳಿತ ಮಂಡಳಿಯ…
ಮಡಿಕೇರಿ ಅ.23 NEWS DESK : ಮಡಿಕೇರಿ ನಗರಸಭಾ ನಿಧಿಯಿಂದ ಗೌಳಿಬೀದಿಯ ಕಂಚಿಕಾಮಾಕ್ಷಿ ಬಳಿ ನಿರ್ಮಿಸಿರುವ ಕಾಂಕ್ರೀಟ್ ರಸ್ತೆ ಹಾಗೂ ಕೋದಂಡರಾಮ ದೇವಾಲಯದ ಬಳಿ ನಿರ್ಮಿಸಿರುವ ಡಾಂಬರು ರಸ್ತೆಯನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಮಡಿಕೇರಿ ನಗರ ರಸ್ತೆಗಳು ಗುಂಡಿಮಯವಾಗಿದ್ದು, ಕೆಲವು ರಸ್ತೆಗಳ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಮಡಿಕೇರಿ ನಗರದ ಎಲ್ಲಾ ರಸ್ತೆಯ ಕಾಮಗಾರಿ ಕೈಗೊಳ್ಳಲು ಮುಂದಾಗಲಾಗಿದೆ ಎಂದರು. ನಂತರ ತಾತ್ಕಾಲಿಕ ಕೋಳಿ ಅಂಗಡಿ ವೀಕ್ಷಣೆ ಮಾಡಿದರು. ಚರಂಡಿ ಸರಿಪಡಿಸುವಂತೆ ನಗರಸಭಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಸದಸ್ಯರಾದ ಆರ್.ಪಿ.ಚಂದ್ರಶೇಖರ್, ಮಿನಾಜ್ ಪ್ರವೀಣ್, ಬ್ಲಾಕ್ ಅಧ್ಯಕ್ಷ ಹಂಸ, ನಗರಸಭೆ ಮಾಜಿ ಉಪಾಧ್ಯಕ್ಷೆ ಸವಿತಾ ರಾಕೇಶ್, ಜಗದೀಶ್, ಪೌರಾಯುಕ್ತ ಹೆಚ್.ಆರ್.ರಮೇಶ್, ಎಂಜಿನಿಯರ್ ಸತೀಶ್, ಪ್ರಮುಖರಾದ ಯಾಖುಬ್, ಸದಾ ಮುದ್ದಪ್ಪ, ಪ್ರಕಾಶ್ ಆಚಾರ್ಯ, ವಿ.ಜಿ.ಮೋಹನ್,ಎಂ.ಎ.ಫಾರೂಕ್ , ಗಿರೀಶ್, ಕಲಿಲ್ ಭಾಷಾ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.
ಸುಂಟಿಕೊಪ್ಪ ಅ.23 NEWS DESK : ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಬಾವಿ ಸಭೆ ನಡೆಯಿತು. ಸುಂಟಿಕೊಪ್ಪದ ದ್ವಾರಕ ಸಭಾಂಗಣದಲ್ಲಿ ಹೋಬಳಿ ಕ.ಸಾ.ಪ.ಅಧ್ಯಕ್ಷ ಪಿ.ಎಫ್.ಸಭಾಸ್ಟೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು. ಕನ್ನಡ ವೃತ್ತ ಸ್ಥಾಪನೆಗೆ ಕಾರ್ಯನಿರ್ವಹಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕ್ಲಾಡಿಯಸ್ ಲೋಬೋ ಅವರನ್ನು ಮತ್ತು ಕನ್ನಡ ಪರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸೇವೆ ಸಲ್ಲಿಸಿರುವ ಜಾಹಿದ್ ಅಹ್ಮದ್ ಅವರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಹಾಗೂ ಮುಖ್ಯ ಭಾಷಣಕಾರರನ್ನು ಆಹ್ವಾನಿಸುವ ಚರ್ಚೆ ನಡೆಯಿತು. ಕುಶಾಲನಗರ ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ ನ.11 ರಂದು ಕುಶಾಲನಗರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ 5 ಸಹಸ್ರ ಮಂದಿಯಿಂದ ಏಕಕಂಠದಿಂದ ಏಕಕಾಲದಲ್ಲಿ ಕನ್ನಡನಾಡಗೀತೆ, ರೈತಗೀತೆ ಮತ್ತು ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಗೀತಾ ಗಾಯನದ ಕುರಿತು ಮಾಹಿತಿಯನ್ನು ನೀಡಿದರು. ಸುವರ್ಣ…
ಮಡಿಕೇರಿ ಅ.23 NEWS DESK : ಕೊಡಗು ಜಿಲ್ಲೆಯ ಚುಟುಕು ಕವಿ ಹಾ.ತಿ.ಜಯಪ್ರಕಾಶ್ ವಿರಚಿತ ಚುಟುಕು ಕವಿತೆಗಳ ಹನಿ ಎಂಬ ಸಂಕಲನ ಅ.27 ರಂದು ಲೋಕಾಪ೯ಣೆಯಾಗಲಿದ್ದು, ನಾಡಿನ ಹೆಸರಾಂತ ಕವಿ, ಸಾಹಿತಿ ಡಾ. ಬಿ.ಆರ್.ಲಕ್ಷ್ಮಣರಾವ್ ಹನಿಯನ್ನು ಲೋಕಾಪ೯ಣೆಗೊಳಿಸಲಿದ್ದಾರೆ. ಕುಶಾಲನಗರದಲ್ಲಿನ ಹಾ.ತಿ ಜಯಪ್ರಕಾಶ್ ಅವರ ನಿವಾಸ ವರವರದ ದಲ್ಲಿ ಬೆಳಗ್ಗೆ 10.30 ಗಂಟೆಗೆ ಹನಿ ಕೖತಿಯ ಲೋಕಾಪ೯ಣೆ ಕಾಯ೯ಕ್ರಮ ನಡೆಯಲಿದ್ದು, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾ ಅಧ್ಯಕ್ಷ ಟಿ.ಪಿ.ರಮೇಶ್, ಸಾಹಿತಿ ನಾಗೇಶ್ ಕಾಲೂರು ಪಾಲ್ಗೊಳ್ಳಲಿದ್ದಾರೆ. 160 ಚುಟುಕಗಳು ಹನಿ ಸಂಕಲನದಲ್ಲಿದೆ ಎಂದು ಪ್ರಕಾಶಕರಾದ ಅನಿಲ್ ಹೆಚ್. ಟಿ. ಮಾಹಿತಿ ನೀಡಿದ್ದಾರೆ.






