ಲೇಖಕ: admin

ಮಡಿಕೇರಿ ನ.22 NEWS DESK : ಸಾಮಾಜಿಕ ಜಾಲತಾಣಗಳಲ್ಲಿ ದೇಶದ ವೀರಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳು ಈ ದೇಶ ಕಂಡ ಅಪ್ರತಿಮ ಸೇನಾನಿಗಳಾಗಿದ್ದಾರೆ. ಇವರ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆ ಮೂಲಕ ಕಿಡಿಗೇಡಿಯೊಬ್ಬ ವೀರ ಸೇನಾನಿಗಳನ್ನು ಅವಮಾನಿಸಿದ್ದು, ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಸೇನಾನಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿರುವುದಲ್ಲದೆ ಕೊಡವರ ಬಗ್ಗೆಯೂ ಅಗೌರವದ ಮಾತುಗಳನ್ನಾಡಿದ್ದಾನೆ. ಭಾರತೀಯ ಸೇನೆಗೆ ಮತ್ತು ದೇಶಕ್ಕೆ ತಮ್ಮ ಶೂರತ್ವದ ಮೂಲಕವೇ ಅಪಾರ ಕೊಡುಗೆಯನ್ನು ನೀಡಿರುವ ವೀರರ ನಾಡು ಕೊಡಗಿನ ಕಣ್ಮಣಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ದೇಶದ್ರೋಹಿಯನ್ನು ಪೊಲೀಸರು…

Read More

ಮಡಿಕೇರಿ ನ.22 NEWS DESK : ಅಪ್ರತಿಮ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ವಿರುಧ್ಧ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಬಿಜೆಪಿ ವತಿಯಿಂದ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ  ದೂರು ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ  ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ದೂರು ಸಲ್ಲಿಸಿದ ಬಿಜೆಪಿ ಪ್ರಮುಖರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಿಡಿಗೇಡಿಯನ್ನು  ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭ  ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್  ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರುಗಳಾದ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.  

Read More

ಮಡಿಕೇರಿ ನ.22 NEWS DESK : ಹೊಸೂರು ನ್ಯಾಯಾಲಯದ ವಕೀಲರ ಹಲ್ಲೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ನ್ಯಾಯಾಲಯ ಸಂಕೀಣ೯ದ ಮುಂದೆ ಪ್ರತಿಭಟನೆ ನಡೆಸಿದ ವಕೀಲರು ಇಂಥ ಪ್ರಕರಣಗಳು ಮರುಕಳಿಸದಂತೆ ವಕೀಲ ವೃಂದಕ್ಕೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಎರಡು ದಿನಗಳ ಹಿಂದೆ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರು ನ್ಯಾಯಲಯದ ಆವರಣದಲ್ಲಿ ವಕೀಲ ಕಣ್ಣನ್ ಅವರ ಮೇಲೆ ಹಲ್ಲೆ ಮಾಡಲಾಗಿದೆ, ಇಂದಿನ ದಿನಗಳಲ್ಲಿ ನ್ಯಾಯಾಲಯದ ಅಧಿಕಾರಿಗಳಾಗಿರುವ ವಕೀಲರು ಭಯದ ವಾತವರಣದಲ್ಲಿ ಕೆಲಸ ನಿರ್ವಹಿಸುವಂತ್ತಾಗಿದೆ. ವಕೀಲರಿಗೆ ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಇಂತಹ ಘಟನೆಗಳು ಮರುಕಳುಹಿಸುತ್ತಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ವಕೀಲರುಗಳಿಗೆ ಸೂಕ್ತ ರಕ್ಷಣೆಯನ್ನು ನೀಡುವಂತಾಗಬೇಕು. ಕೃತ್ಯ ಎಸಗಿದ ಅಪರಾಧಿಗೆ ಶೀಘ್ರ ನ್ಯಾಯಾಂಗ ವಿಚಾರಣೆಯಾಗಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.  ಮಡಿಕೇರಿ ವಕೀಲರ ಸಂಘದ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜ್, ಜಂಟಿ ಕಾಯ೯ದಶಿ೯ ಪವನ್ ಪೆಮ್ಮಯ್ಯ, ಖಜಾಂಜಿ…

Read More

ಮಡಿಕೇರಿ ನ.22 NEWS DESK : ಕೊಡಗು “ಜಿಲ್ಲಾ ಮಟ್ಟದ ಯುವಜನೋತ್ಸವ’ ಕಾರ್ಯಕ್ರಮವು ನ.30 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ, ಫೀಲ್ಡ್ ಮಾರ್ಷಲ್ ಕೆಂ.ಎಂ.ಕಾರ್ಯಪ್ಪ ಕಾಲೇಜು ಸಹಯೋಗದೊಂದಿಗೆ ನಗರದ ಫೀಲ್ಡ್ ಮಾರ್ಷಲ್ ಕೆಂ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಆಸಕ್ತರು ನ.28ರ ಸಂಜೆ 5 ಗಂಟೆಯ ಒಳಗೆ ಹೆಸರು ನೊಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ವಿಷಯಾಧಾರಿತ ಸ್ಪರ್ಧೆ: ವಿಜ್ಞಾನ ಮೇಳ ಗುಂಪು ಸ್ಪರ್ಧೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಧುನಿಕತೆ ವಿಷಯದ ಬಗ್ಗೆ ಪ್ರದರ್ಶನವಿರಬೇಕು. ಇದರಲ್ಲಿ ನಾವಿನ್ಯತೆಗೆ ಪ್ರಾತಿನಿಧ್ಯ ನೀಡಲಾಗುವುದು ಸಕ್ರಿಯ ಮಾದರಿ ತಯಾರಿಕೆಯ ಪ್ರದರ್ಶನವಿರಬೇಕು. (ವಿಶೇಷ ಸೂಚನೆ: ನಿಷ್ಕ್ರಿಯ ಮಾದರಿ ತಯಾರಿಕೆಗೆ ಅವಕಾಶವಿಲ್ಲ ಉದಾಹರಣೆ: ಡ್ಯಾಂ, ಸೋಲಾರ್ ಮಾದರಿ ಸಿಸ್ಟಮ್) ಸ್ಪರ್ಧೆಯ ವಿಜೇತರಿಗೆ ಪ್ರಥಮ ರೂ.…

Read More

ಮಡಿಕೇರಿ ನ.22 NEWS DESK : ಕೊಡವಲ್ಯಾಂಡ್ ಹಕ್ಕೊತ್ತಾಯದ ಪ್ರತಿಪಾದನೆಯ ನಿರಂತರತೆಗಾಗಿ ನ.26 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಮತ್ತು ಭಾರತದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಕೊಡವರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕೊಡವ ಸಮಾವೇಶ ಕೊಡವರ ರಾಜ್ಯಾಂಗದತ್ತ ಹಕ್ಕೊತ್ತಾಯದ ನಿರಂತರ, ಘಟನಾತ್ಮಕ ಅರಾಜಕೀಯ ಪ್ರಯಾಣವನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಪ್ರತಿಧ್ವನಿಸುತ್ತದೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಭುತ್ವದಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಮತ್ತು ವಿಶ್ವರಾಷ್ಟ್ರ ಮಾನ್ಯತೆಯೊಂದಿಗೆ ಆದಿಮಸಂಜಾತ ಕೊಡವರಿಗೆ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಪರಿಗಣನೆ ಮತ್ತು ಕೊಡವರ ಇತರೆ ಹತ್ತು ಶಾಸನ ಬದ್ಧ ಗುರಿಗಳು ಮತ್ತು ಅಶೋತ್ತರಗಳಿಗಾಗಿ ಸಂವಿಧಾನಿಕ ಹಕ್ಕೊತ್ತಾಯಗಳನ್ನು ಸಿಎನ್‍ಸಿ ಪ್ರತಿಪಾದಿಸುತ್ತ ಬಂದಿದೆ. ಕೊಡವ ಲೋಕದ…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ನ.24 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಕೋರಿದೆ.

Read More

ಕುಶಾಲನಗರ, ನ.22 NEWS DESK : ಬೀದರ್ ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ  ಅಕ್ಷರ ಜ್ಯೋತಿ ಯಾತ್ರೆ ಗೆ ಕುಶಾಲನಗರ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ನೆರೆಯ ಮೈಸೂರು ಜಿಲ್ಲೆಯಿಂದ  ಆಗಮಿಸಿದ ಆಗಮಿಸಿದ ಅಕ್ಷರ ಜ್ಯೋತಿ ಯಾತ್ರೆಯನ್ನು ಕುಶಾಲನಗರ ಅನುಗ್ರಹ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಬಳಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ‌ ಬರ ಮಾಡಿಕೊಂಡರು. ಅಕ್ಷರ ಜ್ಯೋತಿ ಯಾತ್ರೆಯ ಉದ್ದೇಶ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ರಾಜ್ಯದ ಎಲ್ಲಾ ಗಡಿ ಪ್ರದೇಶಗಳು ಹಾಗೂ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 63 ದಿನಗಳ ಕಾಲ ಅಕ್ಷರ ಜ್ಯೋತಿ ಯಾತ್ರೆ ನಡೆಯಲಿದ್ದು, ಪ್ರೌಢ ಹಾಗೂ ಪಿಯು ತರಗತಿಗಳ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ, ಮಾತೃ ಪ್ರೇಮ ಮೂಡಿಸುವುದು. ಒಳ್ಳೆಯ ಹವ್ಯಾಸ ಹಾಗೂ ಅಭ್ಯಾಸಗಳ ಮೂಲಕ ಉತ್ತಮ ಚಾರಿತ್ರ್ಯ ವುಳ್ಳವರಾಗಿ ಅವರನ್ನು ರೂಪಿಸಲು…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಕ.ಸಾ.ಪ ಮೂರ್ನಾಡು ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತೂರು ಮೂರ್ನಾಡು ಗ್ರಾ.ಪಂ, ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲೆ, ಕಾಲೇಜು, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಬೆಳಿಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ…

Read More

ಮಡಿಕೇರಿ ನ.22 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭಿ) ಕ್ಲಿನಿಕ್ , ಸಾಮಾನ್ಯ ವೈದ್ಯ ಶಾಸ್ತ್ರ ವಿಭಾಗ ಹಾಗೂ ಕುಶಾಲನಗರ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆಯನ್ನು ಆಚರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ, ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಮಡಿಕೇರಿ  ಬೋಧಕ ಆಸ್ಪತ್ರೆಯ  ಸಹಯೋಗದಲ್ಲಿ ಅಪಸ್ಮಾರದ ಪ್ರಯಾಣದಲ್ಲಿ ಮೈಲಿಗಲ್ಲುಗಳು ಎಂಬ 2024ರ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಂಸ್ಥೆಯ ಸಾಮಾನ್ಯ ವೈದ್ಯಕಿಯ ವಿಭಾಗದ ಮುಖ್ಯ ವೈದ್ಯಧಿಕಾರಿ ಡಾ.ಚೇತನ್,  ಅಪಾಸ್ಮಾರ ಖಾಯಿಲೆಯ ಬಗ್ಗೆ  ಅರಿವು  ಮೂಡಿದರು. ಕಾರ್ಯಕ್ರಮಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಆಡಳಿತಧಿಕಾರಿ ರೋಹಿಣಿ, ವೈದ್ಯರಾದ ಡಾ.ಅಜಯ್, ಕರ್ನಾಟಕ…

Read More

ಮಡಿಕೇರಿ ನ.22 NEWS DESK : ಭಾರತ ದೇಶ ಕಂಡ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆ ಮೂಲಕ ಭಾರತೀಯ ಸೇನೆಯ ಪಿತಾಮಹ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಗಳ ಜನರಲ್ ಖ್ಯಾತಿಯ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಲಾಗಿದೆ. ಇದು ಕೊಡಗು ಮಾತ್ರವಲ್ಲದೆ ಇಡೀ ದೇಶದ ಜನರಿಗೆ ನೋವನ್ನುಂಟು ಮಾಡಿದೆ. ಭಾರತೀಯ ಸೇನೆಯ ಬಗ್ಗೆ ಗೌರವವಿಲ್ಲದ ದೇಶದ್ರೋಹಿ ವೀರ ಸೇನಾನಿಗಳ ಬಗ್ಗೆ ಕೇವಲವಾಗಿ ಪ್ರತಿಕ್ರಿಯೆ ನೀಡಿದ್ದಾನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಅಮೋಘ ಸೇವೆ ಸಲ್ಲಿಸಿ ವಿಶ್ವದ ಗಮನ ಸೆಳೆದಿದ್ದ ಇಬ್ಬರು ವೀರ ಸೇನಾಧಿಕಾರಿಗಳ ಬಗ್ಗೆ ಅವಹೇಳನ ಮಾಡಿರುವುದನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಿಡಿಗೇಡಿಯನ್ನು ಕೊಡಗು…

Read More