ಲೇಖಕ: admin

ಸಿದ್ದಾಪುರ ಡಿ.7 NEWS DESK : ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸತೀಶ್‌ನಾರಾಯಣ್ ಆಯ್ಕೆಯಾಗಿದ್ದಾರೆ. ಕೆಪಿಎಸ್ ಶಾಲಾ‌ ಸಭಾಂಗಣದಲ್ಲಿ ಕೆಪಿಎಸ್ ಶಾಲಾ ಉಪಾಧ್ಯಕ್ಷ ಪಿ.ಕೆ.ಮುಸ್ತಫಾ ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ಅಫ್ಸಲ್, ಕೋಶಾಧಿಕಾರಿಯಾಗಿ ಸಂಯುಕ್ತ, ಸಂಘಟನಾ ಕಾರ್ಯದರ್ಶಿಗಳಾಗಿ ಸುಜಾತ, ಬೆಳ್ಳಿಯಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರಾಗಿ ಶುಭ,ವಿನೋದ್, ನಿಶಾ, ಜಿಶಾ ಆಯ್ಕೆಯಾದರು. ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಆಲ್ವರೀಸ್, ಉಪಪ್ರಾಂಶುಪಾಲರಾದ ಅನಿಲ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಭಾರತಿ ಹಾಜರಿದ್ದರು.

Read More

ಮಡಿಕೇರಿ ಡಿ.7 NEWS DESK : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ವರ್ಷಗಳ (ANM) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ 18-12-2024 ಆಗಿರುತ್ತದೆ. ವಿಧ್ಯಾರ್ಹತೆ ದ್ವಿತೀಯ ಪಿ.ಯು.ಸಿ ಪಾಸ್ ಆಗಿರಬೇಕು ಮತ್ತು 17 ವರ್ಷದಿಂದ 30 ವರ್ಷದೊಳಗಿನವರಾಗಿರಬೇಕು 1200 ರೂ.ಗಳ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಬೆಳಿಗೆ 10 ಗಂಟೆಯಿಂದ 5 ಗಂಟೆಯೊಳಗೆ ಸಂಪರ್ಕಿಸಬಹದು.

Read More

ಪೊನ್ನಂಪೇಟೆ, ಡಿ.7 NEWS DESK : ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಈ ಕಾರಣದಿಂದ ಕ್ರೀಡೆ ಪರಸ್ಪರ ಮನಸ್ಸುಗಳನ್ನು ಬೆಸೆಯುತ್ತದೆ. ಅದರಿಂದ ಕ್ರೀಡೆಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅಜ್ಜಿಕುಟ್ಟೀರ ಎಸ್. ನರೇನ್ ಕಾರ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿಟ್ಟಂಗಾಲ, ಬಿ. ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಮನೆತನಗಳ ನಡುವಿನ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ‘ಹೈ ಪ್ಲೈಯರ್ಸ್ ಕಪ್-2024’ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಕೊಡಗಿನ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಕೂಟಗಳು ಹೆಚ್ಚು ಆಯೋಜನೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದರಿಂದಾಗಿ ಸೂಕ್ತ ಅವಕಾಶಗಳ ಕೊರತೆ ಎದುರಿಸುತ್ತಿದ್ದ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚು ಅನುಕೂಲವಾಗುತ್ತಿದೆ ಎಂದು ಹೇಳಿದರು.…

Read More

ಸೋಮವಾರಪೇಟೆ ಡಿ.7 NEWS DESK : ಸೋಮವಾರಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಪ.ಪಂ ಮುಖ್ಯಾಧಿಕಾರಿ ಕಾರ್ಯನಿರ್ವಾಹಣ ಸತೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ದಲಿತಪರ ಸಂಘಟನೆಗಳ ಮುಖಂಡರುಗಳಾದ ಜನಾರ್ಧನ್. ಟಿ.ಈ.ಸುರೇಶ್. ಬಿ.ಈ.ಜಯೇಂದ್ರ, ಪ್ರತಾಪ್. ಈರಪ್ಪ. ಡಿ.ಎಸ್.ನಿರ್ವಾಣಪ್ಪ. ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಪಿ.ಕೆ.ಚಂದ್ರು, ಮೋಹಿನಿ ಇದ್ದರು.

Read More

ಮಡಿಕೇರಿ ಡಿ.7 NEWS DESK : ಉಡೋತ್‍ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ನಾಲ್ಕನೇ ವರ್ಷದ ನೇಮೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಮತ್ತು ಪ್ರಸಾದ ವಿತರಣೆ ನಡೆಯಿತು. ಸಂಜೆ ದೈವದ ಭಂಡಾರ ಇಳಿಯುವುದು, ರಾತ್ರಿಯಿಂದ ಮರುದಿನ ವರೆಗೆ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಎ.ಎಸ್.ಪೊನ್ನಣ್ಣ ಭೇಟೆ :: ನೆಮೋತ್ಸವದ ಪ್ರಯುಕ್ತ ರಾತ್ರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕ್ಷೇತ್ರದ ಅಭಿವೃದ್ಧಿಗೆ ಬೇಕಾದಂತ ಸಲಹೆ ಸೂಚನೆಗಳನ್ನು ಸ್ಥಳೀಯರೊಂದಿಗೆ ಚರ್ಚಿಸಿ, ಅಜ್ಜನ ಸನ್ನಿಧಿಗೆ ಕಾಣಿಕೆ ಒಪ್ಪಿಸಿದರು.

Read More

ಸೋಮವಾರಪೇಟೆ ಡಿ.7 NEWS DESK : ಮಧ್ಯಪ್ರದೇಶದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿ ಎಂ.ಎಂ.ತಾನಿಯಾ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದಾಳೆ. ಕೆಪಿಎಸ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಎಂ.ಎಂ.ತಾನಿಯಾ, ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಮಹಮ್ಮದ್ ಅಸ್ಲಾಂ ಹಾಗೂ ಅಸ್ಮಾ ಭಾನು ದಂಪತಿದ ಪುತ್ರಿ. ಇವಳಿಗೆ ಕುಪ್ಪಂಡ ಸುಬ್ಬಯ್ಯ, ಮೂಕಳಮಾಡ ಗಣಪತಿ ತರಬೇತಿ ನೀಡಿದ್ದು, ಡ್ಯಾನಿ ಈರಪ್ಪ ಅವರು ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ.

Read More

ಗೋಣಿಕೊಪ್ಪ ಡಿ.7 NEWS DESK : ಸಾಮರಸ್ಯವನ್ನು ವೃದ್ಧಿಸುವ ಮೂಲಕ ಉತ್ತಮ ವಾತಾವರಣವನ್ನು ಕಲ್ಪಿಸುವ ಶಕ್ತಿ ಕ್ರೀಡೆಯಿಂದ ಮಾತ್ರ ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಜಿ.ಪಿ.ಎಲ್ ಕ್ರಿಕೆಟ್ ಪ್ರೀಮಿಯ ಲೀಗ್ ಎಂಟನೇ ಆವೃತ್ತಿಯ ಎರಡನೇ ದಿನದ ಪ್ರಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಸಮಾಜ ನಿರ್ಮಿಸಲು ತಾರತಮ್ಯಗಳನ್ನು ತೊಡೆದು ಹಾಕಲು ಕ್ರೀಡೆಗಳಿಂದ ಸಾಧ್ಯವಾಗುತ್ತದೆ ಎಂದರು. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟಿನಿಂದ ಬದುಕು ನಡೆಸಲು ಮತ್ತು ದೇಶ ಕಟ್ಟುವ ಗುರಿಯನ್ನು ಹೊಂದಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲೆ ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದೆ. ಹೀಗಾಗಿ ಕ್ರೀಡೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಹೆಚ್ಚಿನ ಆರೋಗ್ಯವನ್ನು ಗಳಿಸಿಕೊಳ್ಳಬಹುದು ಎಂದು ಹೇಳಿದರು. ಕ್ರೀಡೆ ಗ್ರಾಮೀಣ ಮಕ್ಕಳ ಅವಕಾಶಗಳಾಗಿ ಪರಿವರ್ತನೆಗೊಂಡು ರಾಜ್ಯ ಮತ್ತು ದೇಶವನ್ನು ಪ್ರತಿನಿಧಿಸುವಂತಹ ಪ್ರತಿಭೆಗಳನ್ನು ಸೃಷ್ಟಿಸಬೇಕಾಗಿದೆ ಎಂದರು. ಈ ನಿಟ್ಟಿನಲ್ಲಿ ಜಿಪಿಎಲ್ ಸಂಸ್ಥೆ ಎಂಟು…

Read More

ಮಡಿಕೇರಿ ಡಿ.7 NEWS DESK : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಈ ಬಾರಿಯೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿ ಯವರ ನೇತೃತ್ವದಲ್ಲಿ ಸಂಪ್ರೋಕ್ಷಣೆ ಪೂಜೆಯೂ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ  ಗಣಹೋಮ, ಸಂಪ್ರೋಕ್ಷಣೆ”, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ದೇವರಿಗೆ ಮುಂಜಾನೆಯಿಂದಲೇ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನೆರವೇರಿತು. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ , ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ…

Read More

ಮಡಿಕೇರಿ ಡಿ.7 NEWS DESK :  ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಪತ್ರಕರ್ತರಿಗಾಗಿ ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ವೈಭವ ಪಂದ್ಯಾವಳಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಡಿ.೮ರಂದು ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್‌ನ ಪ್ರದಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಪತ್ರಕರ್ತರಿಗಾಗಿ ಫುಟ್ಬಾಲ್, ಷೆಟಲ್ ಬ್ಯಾಡ್ಮೆಂಟನ್, ಕೇರಂ, ಟಿಟಿ, ಚೆಸ್, ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಇದೇ ಪ್ರಥಮ ಬಾರಿಗೆ ಆಯೋಜಿಸಿರುವ ವಾಲಿಬಾಲ್ ವೈಭವಕ್ಕೆ ೪೨ ಪತ್ರಕರ್ತರರು ಪಾಲ್ಗೊಳ್ಳಲಿದ್ದಾರೆ. ೫ ತಂಡಗಳ ನಡುವೆ ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ. ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಈಗಾಗಲೇ ನಡೆಸಲಾಗಿದ್ದು, ಕ್ರೀಡಾಕೂಟದ ತಂಡದ ನಾಯಕತ್ವವನ್ನು ಶಿವು ಕಾಂತ್‌ರಾಜ್, ಲೋಕೇಶ್ ಕಾಟಕೇರಿ, ಇಸ್ಮಾಯಿಲ್ ಕಂಡಕೆರೆ, ಪ್ರೇಮ್ ಕುಮಾರ್, ಆದರ್ಶ್ ಅದ್ಕಲೇಗಾರ್ ವಹಿಸಿದ್ದಾರೆ. ಕ್ರೀಡಾಕೂಟದ…

Read More

ಮಡಿಕೇರಿ ಡಿ.7 NEWS DESK : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಈ ಬಾರಿಯೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿ ಯವರ ನೇತೃತ್ವದಲ್ಲಿ ಸಂಪ್ರೋಕ್ಷಣೆ ಪೂಜೆಯೂ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ  ಗಣಹೋಮ, ಸಂಪ್ರೋಕ್ಷಣೆ”, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ದೇವರಿಗೆ ಮುಂಜಾನೆಯಿಂದಲೇ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನೆರವೇರಿತು. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ , ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಭೂತ ಬಲಿ, ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.7 ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ…

Read More