ಮಡಿಕೇರಿ ಡಿ.6 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲೆಯ ಮಾಜಿ ಸೈನಿಕರು, ಕೊಡವ ಸಮಾಜಗಳ ಪ್ರತಿನಿಧಿಗಳು ಹಾಗೂ ಸದಸ್ಯರು ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಸಮಾವೇಶಗೊಂಡು, ವೀರ ಸೇನಾನಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರದ ಪ್ರಥಮ ಮಹಾ ದಂಡ ನಾಯಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಸೈನಿಕರ ಸೇನಾನಿ ಎಂದೇ ಖ್ಯಾತರಾದ ಜ.ತಿಮ್ಮಯ್ಯ ಭಾರತದ ಹೆಮ್ಮೆಯ ಶ್ರೇಷ್ಠ ಪುತ್ರರು. ಅವರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಅವಹೇಳನ ಭಾರತೀಯರಿಗೆಲ್ಲರಿಗು ಮಾಡಿರುವ ಅವಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವೀರಸೇನಾನಿಗಳನ್ನು ಅವಮಾನಿಸಿರುವ ಪ್ರಕರಣದಡಿ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು…
ಲೇಖಕ: admin
ವಿರಾಜಪೇಟೆ ಡಿ.6 NEWS DESK : ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗ ಬನದಲ್ಲಿ ಸ್ಕಂದ ಪಂಚಮಿಯ ಪ್ರಯುಕ್ತ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ನಾಗನಿಗೆ ಹಾಲಿನ ಅಭಿಷೇಕ, ಸೀಯಾಳ ಅಭಿಷೇಕ, ಲಂಕಾರ ಪೂಜೆ, ಕುಂಕುಮಾರ್ಚನೆ, ನಾಗತಂಬಿಲ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಬಳಿಕ ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಭಕ್ತರು ಹರಕೆಯ ವಸ್ತುಗಳನ್ನು ದೇವಸ್ಥಾನಕ್ಕೆ ಅರ್ಪಿಸಿದರು. ಪೂಜಾ ಕಾರ್ಯಕ್ರಮಗಳನ್ನು ಅರ್ಚಕರಾದ ವೇಣುಗೋಪಾಲ್ ಭಟ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಭಕ್ತಾದಿಗಳು, ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಮಡಿಕೇರಿ ಡಿ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ಸಂವಿಧಾನ ರಚಿಸುವ ಮೂಲಕ ರಾಷ್ಟ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ರಾಷ್ಟ್ರದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸುವ ಮೂಲಕ ಪ್ರತಿಯೊಬ್ಬರೂ ಕರ್ತವ್ಯವನ್ನು ಪಾಲಿಸುವುದು ಅತಿ ಮುಖ್ಯವಾಗಿದೆ ಎಂದರು. ನಾಪೋಕ್ಲು ವಸತಿ ಶಾಲೆಯ ಸಹ ಶಿಕ್ಷಕರಾದ ರೂಪಾ ಮಾತನಾಡಿ ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅಂಬೇಡ್ಕರ್ ಸಾರಿದ್ದಾರೆ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳನ್ನು ಹೊರತಂದಿದ್ದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೂಲಕ ಪ್ರತಿಯೊಬ್ಬರಲ್ಲಿ…
ಕುಶಾಲನಗರ ಡಿ.6 NEWS DESK : ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ಡಿ.12 ಮತ್ತು 13 ರಂದು 39ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಉಪಾಧ್ಯಕ್ಷ ನವನೀತ್ ಪೊನ್ನೇಟಿ ಹಾಗೂ ಕಾರ್ಯದರ್ಶಿ ಕೆ.ವಿ.ಅನುದೀಪ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಿ.12 ರಂದು ರಥಬೀದಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಪವನಾಮ ಹೋಮ ನಡೆಯಲಿದೆ. 13 ರಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಪ್ರಸಾದ ಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಬೈಚನಹಳ್ಳಿ ಮಾರಮ್ಮ ದೇವಾಲಯದವರೆಗೆ ನಡೆಯಲಿದೆ. ಮಧ್ಯಾಹ್ನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಕೊಡಗಿನ ವಿವಿಧೆಡೆಗಳಿಂದ ಸೇರಿದಂತೆ ನೆರೆಯ ಮೈಸೂರು, ಹಾಸನ ಜಿಲ್ಲೆಗಳಿಂದ ಸುಮಾರು 20 ರಿಂದ 25…
ಮಡಿಕೇರಿ ಡಿ.6 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕೊಡಗು ಗೌಡ ವಿದ್ಯಾ ಸಂಘದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರದ ಪ್ರಯುಕ್ತ ಡಿ.25 ರಂದು ಅರೆಭಾಷೆ ಜನಾಂಗ ಬಾಂಧವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರೆಭಾಷೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯ ಕುಮಾರ್, ನಗರದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಂಭಾಗಣದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ 2 ಪುಟ ಮೀರದಂತೆ ಅರೆಭಾಷೆ ಸಮುದಾಯದ ಐನ್ ಮನೆ ಬಗ್ಗೆ ಅರೆಭಾಷೆ ಪ್ರಬಂಧ ಸ್ಪರ್ಧೆ, 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ (ಒಟ್ಟು 50 ರಸಪ್ರಶ್ನೆಗಳು, ಸಮಯ 1 ಗಂಟೆ), ಅರೆಭಾಷಿಕ ಬಾಂಧವರಿಗೆ ಅರೆಭಾಷೆ ಸೋಬಾನೆ ಸ್ಪರ್ಧೆ (5 ನಿಮಿಷಗಳು ಮೀರಬಾರದು), 1 ರಿಂದ 4ನೇ ತರಗತಿ ಹಾಗೂ 5 ರಿಂದ…
ಮಡಿಕೇರಿ ಡಿ.6 NEWS DESK : ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್1-ದೊಡ್ಡಮಾಳ್ತೆ ಫೀಡರ್‍ನಲ್ಲಿ ಫೀಡರ್ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಡಿ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ದೊಡ್ಡಮಳ್ತೆ, ಹಣಕೋಡು, ಗೆಜ್ಜೆಹಣಕೋಡು, ಚಿಕ್ಕತೋಳೂರು, ಕಾಡುಮನೆ, ಕೂಗೆಕೋಡಿ, ಕಾರಡಿಕಟ್ಟೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಡಿ.6 NEWS DESK : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಆಟೋಟವು ಸಹ ಇರಬೇಕು. ಆದರೆ ಮೊಬೈಲ್ ನೋಡುವ ಗೀಳು ಇರಬಾರದು ಎಂದು ಸಲಹೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಸಂಗೀತ, ಕಲೆ, ನಾಟಕ, ನೃತ್ಯ ಹೀಗೆ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು ಹೊಸತನ ಕಲಿಯಲು ಪ್ರಯತ್ನಿಸಬೇಕು, ಇದರಿಂದ ಪ್ರತಿಭೆ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು. ಪ್ರತಿಯೊಬ್ಬರ ಬದುಕಿನಲ್ಲಿ ಸಂತಸ,…
ಮಡಿಕೇರಿ ಡಿ.6 NEWS DESK : ಕೊಡಗಿನಲ್ಲಿ ಕೆಲವು ದುಷ್ಟಶಕ್ತಿಗಳು ಗೌಡ ಜನಾಂಗವನ್ನು ಗುರಿಯಾಗಿಸಿಕೊಂಡು ಆಗಿಂದಾಗ್ಗೆ ಅವಹೇಳನ ಮಾಡುವುದು, ಗೌಡ ಸಮಾಜಗಳು ಹಾಗೂ ಗೌಡ ಸಮುದಾಯದ ಜನರಿಗೆ ತೊಂದರೆಯಾಗುವಂತೆ ವರ್ತಿಸುವ ಕೃತ್ಯವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ವರ್ಷಗಳ ಹಿಂದೆ ಮಡಿಕೇರಿ ನಗರದ ಕೊಡಗು ಗೌಡ ವಿದ್ಯಾಸಂಘ ಹಾಗೂ ಕೊಡಗು ಗೌಡ ಸಮಾಜವನ್ನು ಗುರಿ ಮಾಡಿ ಇಲ್ಲಿನ ಕಟ್ಟಡಗಳು ಅನಧಿಕೃತವೆಂದು ವ್ಯಕ್ತಿಯೊಬ್ಬರು ತಕರಾರು ತೆಗೆದಿದ್ದರು. ಕೊಡಗಿನ ಇತಿಹಾಸ ಪ್ರಸಿದ್ಧ ಮಡಿಕೇರಿ ರಾಜರ ಕೋಟೆ ಒಳಭಾಗದಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆ ಸ್ಥಾಪಿಸುವ ನಿರ್ಧಾರವನ್ನು ಇದೇ ವ್ಯಕ್ತಿ ವಿರೋಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಈ ವ್ಯಕ್ತಿಗೆ ದಂಡ ವಿಧಿಸಲ್ಪಟ್ಟಿದೆ. ಜನಾಂಗೀಯ ದ್ವೇಷವನ್ನು ಹುಟ್ಟು ಹಾಕುತ್ತಿರುವ ವ್ಯಕ್ತಿಯ ಹಿಂದೆ ಕೆಲವು ದುಷ್ಟಶಕ್ತಿಗಳ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಜಿಲ್ಲಾಡಳಿತ…
ಮಡಿಕೇರಿ ಡಿ.6 NEWS DESK : ಕಾಫಿ ಬೆಳೆಗಾರರು ಸರ್ಫೇಸಿ ಕಾಯ್ದೆಯಿಂದ ಎದುರಿಸುತ್ತಿದ್ದ ಕಿರುಕುಳ ಮತ್ತು ಆರ್ಥಿಕ ಒತ್ತಡದ ಸಮಸ್ಯೆಯನ್ನು ಕೇಂದ್ರ ಸರಕಾರ ಬಗೆಹರಿಸಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೇಂದ್ರ ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಲೋಕಸಭೆಯಲ್ಲಿ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಸರ್ಫೇಸಿ ಕಾಯ್ದೆಯಿಂದ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಕೇಂದ್ರದ ಗಮನ ಸೆಳೆಯುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಕೇಂದ್ರ ಸರಕಾರದ ವಾಣಿಜ್ಯ ಮತ್ತು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಕಾಫಿ ಕೃಷಿ ಸರ್ಫೇಸಿ ಕಾಯ್ದೆಯಡಿ ಬರುವುದಿಲ್ಲ ಎಂದು ಉತ್ತರ ನೀಡುವ ಮೂಲಕ ಕಾಫಿ ಬೆಳೆಗಾರರಿಗೆ ನೆರವಾಗಿದ್ದಾರೆ. ಇದು ಬೆಳೆಗಾರರಿಗೆ ಹರ್ಷವನ್ನು ತಂದಿದೆ ಎಂದು ತಿಳಿಸಿದ್ದಾರೆ. ಹವಾಮಾನ ವೈಪರೀತ್ಯ ಸೇರಿದಂತೆ ಇನ್ನೂ ಕೆಲವು ಸಮಸ್ಯೆಗಳಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಸರ್ಫೇಸಿ ಕಾಯ್ದೆಯಿಂದ ಮತ್ತಷ್ಟು ಒತ್ತಡ ಎದುರಿಸುತ್ತಿರುವ ಸಂದರ್ಭದಲ್ಲೇ ಕೇಂದ್ರ ಪ್ರಕಟಿಸಿರುವ ನಿರ್ಧಾರ ಬೆಳೆಗಾರರಿಗೆ ಹೆಚ್ಚು…
ಬೆಂಗಳೂರಿ ಡಿ.6 NEWS DESK : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದರು. ಅಂಬೇಡ್ಕರ್ ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ…






