ಚೆಟ್ಟಳ್ಳಿ ಡಿ.6 NEWS DESK : ಚೆಟ್ಟಳ್ಳಿಯ ಪುತ್ತರಿರ ಕುಟುಂಬದ ನಾಗರ ನೆಲೆಯಲ್ಲಿ ನಾಗರ ಪಂಚಮಿಯ ವಾರ್ಷಿಕ ಪೂಜೆ ಶ್ರದ್ದಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ಅರ್ಚಕರು ನಾಗರ ಕಲ್ಲಿಗೆ ಕ್ಷೀರಾಭಿಶೇಕ, ಪಾಯಸ, ಮಹಾಪೂಜೆ ಮಾಡಿದರು. ಕುಟುಂಬದ ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಮಾತನಾಡಿ, ಪ್ರತೀ ವರ್ಷದಂತೆ ಷ್ರಷ್ಠಿ ಆಚರಣೆಗೆ ಮುಂಚಿತವಾಗಿ ನಾಗರ ಪಂಚಮಿಯನ್ನು ಆಚರಿಸಲಾಗುತ್ತಿದ್ದು, ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಇದೇ ಸಂದರ್ಭ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಲೇಖಕ: admin
ವಿರಾಜಪೇಟೆ ಡಿ.6 NEWS DESK : ಬೆಂಗಳೂರಿನ ಪ್ರೆಸಿಡೆನ್ಸಿ ಯೂನಿವರ್ಸಿಟಿಯಲ್ಲಿ ಜರುಗಿದ ಘಟಿಕೋತ್ಸವದಲ್ಲಿ ವಿರಾಜಪೇಟೆಯ ಬಿ.ಆರ್.ಪ್ರಿಯಾಂಕಗೆ ಗಣಿತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಯಿತು. ಇವರು ವಿರಾಜಪೇಟೆ ತಾಲೂಕಿನ ಕಡಂಗಮೂರೂರಿನ ಬಿ.ಎಲ್.ರಾಮಚಂದ್ರ(ನಿವೃತ್ತ ಸೈನಿಕ) ಹಾಗೂ ಪದ್ಮಾವತಿ(ಶಿಕ್ಷಕಿ) ದಂಪತಿಯ ಪುತ್ರಿ.
ಮಡಿಕೇರಿ ಡಿ.6 NEWS DESK : ಮಡಿಕೇರಿ ದಸರಾ ಆಚರಣೆಗೆ ಸರಕಾರ ಮಂಜೂರು ಮಾಡಿರುವ ರೂ.1.50 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಜಿಲ್ಲೆಯ ಶಾಸಕರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಉಪಾಧ್ಯಕ್ಷ ಬಿ.ಎಂ.ರಾಜೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಸರಾ ಜನೋತ್ಸವ ಮುಗಿದು ಎರಡು ತಿಂಗಳಾಗಿದ್ದರು ಇನ್ನೂ ಕೂಡ ಸರಕಾರ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಹಣ ಬಾರದೆ ಇರುವುದರಿಂದ ದಶಮಂಟಪ ಸಮಿತಿಗಳು ಸಾಲದ ಸಂಕಷ್ಟಕ್ಕೆ ಸಿಲುಕಿದ್ದು, ಶಾಸಕರು ತಕ್ಷಣ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ. ದಸರಾ ಜನೋತ್ಸವದ ಆಕರ್ಷಣೆಯಾದ ನಗರದ ದಶ ದೇವಾಲಯಗಳ ಮಂಟಪಕ್ಕಾಗಿ ಪ್ರತಿಯೊಂದು ಮಂಟಪ ಸಮಿತಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿದೆ. ವಿಜೃಂಭಣೆಯ ದಶ ಮಂಟಪಗಳ ಶೋಭಾಯಾತ್ರೆಗಾಗಿ ಸಾಲ ಮಾಡಿ ಹಗಲಿರುಳೆನ್ನದೆ ಶ್ರಮಿಸಲಾಗಿದೆ. ದಸರಾಕ್ಕೆ ವರ್ಣರಂಜಿತ ಆಕರ್ಷಣೆ ನೀಡಿದ ದಶಮಂಟಪ ಸಮಿತಿಗಳು ಇಂದು ಸಂಕಷ್ಟಕ್ಕೆ ಸಿಲುಕಿವೆ. ದೊಡ್ಡ ಮೊತ್ತದ ಅನುದಾನ ಮಂಜೂರು ಮಾಡಿಸಿರುವುದಾಗಿ ಹೆಮ್ಮೆ ವ್ಯಕ್ತಪಡಿಸಿದ್ದ ಶಾಸಕರು ಇಂದು ಸಮಿತಿಗಳ ನೆರವಿಗೆ…
ಸುಂಟಿಕೊಪ್ಪ ಡಿ.6 NEWS DESK : ಮಕ್ಕಳ ಪ್ರತಿಭೆಗಳನ್ನು ಹೊರ ತರುವಲ್ಲಿ ಶಾಲಾ ವಾರ್ಷಿಕೋತ್ಸವ ಸೂಕ್ತ ವೇದಿಕೆಯಾಗಿದೆ ಎಂದು ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಮಾರ್ ಲಾರೆನ್ಸ್ ಮುಕ್ಕಾಜಿ ಹೇಳಿದರು. 7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಆರ್ಶಿವಚನ ನೀಡಿದರು. ಮಕ್ಕಳು ಇಡೀ ವರ್ಷ 4 ಗೋಡೆಗಳ ನಡುವೆ ಕಲಿಯುತ್ತಾರೆ. ಪೊಷಕರು ಮತ್ತು ಶಿಕ್ಷಕರ ನಡುವೆ ಅಂತರವಿರುತ್ತದೆ. ಆದರೆ ವಾರ್ಷಿಕೋತ್ಸವ ಸಂದರ್ಭ ಶಿಕ್ಷಕರು, ಪೋಷಕರು, ಮಕ್ಕಳು ಒಟ್ಟಾಗಿ ಬೆರೆಯುವುದರಿಂದ ಪರಸ್ಪರ ಸ್ನೇಹ ವಿಶ್ವಾಸ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಕುಮಾರ್ ಮಾತನಾಡಿ, ಶಾಲೆಯು ಶಿಸ್ತು ಮತ್ತು ಪ್ರೇಮಮಯ ವಾತವಾರಣದಲ್ಲಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅತ್ಯಂತ ಸಂತಸದಿಂದ ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ತರುವಲ್ಲಿ ಶಾಲಾ ವಾರ್ಷಿಕೋತ್ಸವ ಒಂದು ಪ್ರೇರಣೆ ಮತ್ತು ವೇದಿಕೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾದ್ಯಾಯನಿ ಟೆಸಿಮ್ಯಾನುವೇಲ್ ವಹಿಸಿದ್ದರು.ವೇದಿಕೆಯಲ್ಲಿ…
ಮಡಿಕೇರಿ ಡಿ.6 NEWS DESK : ಪಾಲಿಬೆಟ್ಟ-ಗೋಣಿಕೊಪ್ಪ ಮಾರ್ಗವಾಗಿ ನಡೆಯುತ್ತಿರುವ ರಸ್ತೆ ಕಾಮಗಾರಿಯ ಗುಣಮಟ್ಟವನ್ನುಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ನಂತರ ಗುತ್ತಿಗೆಗಾರರೊಂದಿಗೆ ಚರ್ಚಿಸಿ, ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ಮಡಿಕೇರಿ ಡಿ.6 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳಿಗೆ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದಿಂದ ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದ ಅಧ್ಯಕ್ಷ ಕೊಟ್ಟುಕತ್ತಿರ ಪಿ.ಸೋಮಣ್ಣ ನೇತೃತ್ವದಲ್ಲಿ ಮಾಜಿ ಸೈನಿಕರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿ, ನಂತರ ಮೆರವಣಿಗೆ ಮೂಲಕ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದರು. ಫೀ.ಮಾ.ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಇಬ್ಬರು ಮಹಾನ್ ಸೇನಾಧಿಕಾರಿಗಳನ್ನು ಅಪಮಾನಿಸಿದವರ ಬಗ್ಗೆ ಸವಿಸ್ತಾರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಸಂಘದ ಕಾರ್ಯದರ್ಶಿ ಸಿ.ಜಿ.ತಿಮ್ಮಯ್ಯ, ಸಹ ಕಾರ್ಯದರ್ಶಿ ಎಂ.ಕೆ.ನಾಚಪ್ಪ, ಸಂಚಾಲಕ ನಾಟೋಳಂಡ ಸೋಮಯ್ಯ ಹಾಗೂ ಸಹ…
ಮಡಿಕೇರಿ ಡಿ.6 NEWS DESK : ಸಿದ್ದಾಪುರದಲ್ಲಿ ನಡೆದ ಕೊಡಗು ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ಇಸ್ಲಾಮಿಕ್ ಕಲೋತ್ಸವದ ತ್ವಲಬಾ ವಿಭಾಗದಲ್ಲಿ ನಾಲ್ಕು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಆಸಿಫ್ ಅಂಧತ್ವವನ್ನು ಮೆಟ್ಟಿ ನಿಂತು ಗೆಲುವು ಸಾಧಿಸಿದ್ದಾನೆ. ನಾಪೋಕ್ಲು ಮೂಲದ ದೃಷ್ಟಿ ಕಳೆದುಕೊಂಡಿರುವ ಆಸೀಫ್ ಉಸ್ಮಾನ್ ಮುಸ್ಲಿಯಾರ್ ನೇತೃತ್ವದ ಸುಂಟ್ಟಿಕೊಪ್ಪ ತಸ್ಕಿಯಾತು ತ್ವಲಬಾ ದರ್ಸ್ ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು, ಉರ್ದು ಗೀತೆ, ಅಝಾನ್, ಕನ್ನಡ ಹಾಡು, ಮುಂತಾದ ವಿಭಾಗಗಳಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗಗಳಲ್ಲಿ ಬಹುಮಾನ ಪಡೆದುಕೊಂಡಿದ್ದಾನೆ. ನಾಪೋಕ್ಲುವಿನ ಹಮ್ಜಾ-ಆಯಿಷಾ ದಂಪತಿಯ ಹಿರಿಯ ಪುತ್ರನಾಗಿರುವ ಆಸಿಫ್ ಕೊಡಗು ಜಿಲ್ಲಾ ಜಮ್ಯಿಯತುಲ್ ಮುಅಲ್ಲಿಮೀನ್ ನ ಸ್ಪರ್ಧಾ ಕಾರ್ಯಕ್ರಮದ ಎಲ್ಲಾ ವಿಭಾಗಗಳಲ್ಲಿ ಆಸಿಫ್ ಭಾಗವಹಿಸುತ್ತಾನೆ ಎಂದು ಶಿಕ್ಷಕರು ಹೇಳುತ್ತಾರೆ. ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾ ಮಟ್ಟದ ಇಸ್ಲಾಮಿಕ್ ಕಲೋತ್ಸವದ ಸಮಾರೋಪ ಸಮಾರಂಭದಲ್ಲಿ ಆಸಿಫ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರು ಡಿ.6 NEWS DESK : ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿ.ಉಮಾಪತಿ ಅವರ ಪರಿಚಯ: : ಮಾರ್ಚ್ 18,1959 ರಲ್ಲಿ ಚಿತ್ರದುರ್ಗ…
ಗೋಣಿಕೊಪ್ಪ ಡಿ.5 NEWS DESK : ಗೋಣಿಕೊಪ್ಪ ಕ್ರಿಕೆಟ್ ಪ್ರೀಮಿಯರ್ ಲೀಗ್ (ಜಿ.ಪಿ.ಎಲ್) ಎಂಟನೇ ಆವೃತ್ತಿಗೆ ಸಂಭ್ರಮದ ಚಾಲನೆ ದೊರೆಯಿತು. ಗೋಣಿಕೊಪ್ಪ ಪ್ರಾಥಮಿಕ ಶಾಲಾ ದಸರಾ ಮೈದಾನದಲ್ಲಿ ನಾಲ್ಕು ದಿನ ನಡೆಯುವ ಐ.ಪಿ.ಎಲ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಉದ್ಯಮಿ ಮಾಚ್ಚಮಾಡ ಅನೀಶ್ ಮಾದಪ್ಪ, ಜಿಪಿಲ್ ಅಸೋಶಿಯೇಷನ್ ಅಧ್ಯಕ್ಷ ಸಿಂಗಿ ಸತೀಶ್ ಕ್ರಿಕೆಟ್ ಉತ್ಸವಕ್ಕೆ ಚಾಲನೆ ನೀಡಿದರು. ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ “ಚೆನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವನ್ ಪಂಜಾಬ್, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಕಿಂಗ್ಸ್ ಇಲೆವನ್ ಪಂಜಾಬ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್, ಲಕ್ನೋ ಹೆಸರಿನ ತಂಡಗಳು ಟ್ರೋಫಿಗಾಗಿ ಸೆಣಸಾಟ ನಡೆಸಲಿವೆ. ತಂಡಗಳ ಹೆಸರನ್ನು ಜಿ.ಪಿ.ಎಲ್‍ನಲ್ಲಿ ಪಾಲ್ಗೊಳ್ಳುವ ತಂಡಗಳಿಗೂ ಇಡಲಾಗಿದೆ. ಪಂದ್ಯಾವಳಿಯಲ್ಲಿ ಪ್ರಥಮ ವಿಜೇತ ತಂಡಕ್ಕೆ ರೂ.1,1,111 ನಗದು, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. 50,555 ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ತೃತೀಯ…
ಮಡಿಕೇರಿ ಡಿ.5 NEWS DESK : ಕರಿಕೆ ಗ್ರಾಮದ ಎಳ್ಳುಕೊಚ್ಚಿ ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ತರಗತಿಯೊಂದರಲ್ಲಿ ನಾಗರಹಾವು ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಬೆಳಿಗ್ಗೆ ವಿದ್ಯಾರ್ಥಿಗಳು ತರಗತಿಗೆ ಆಗಮಿಸಿದಾಗ ಹಾವು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಕರೆ ತರುವ ಜೀಪು ಚಾಲಕ ಬಾಲಚಂದ್ರ ಪಾಪು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗಳು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟರು. ವರದಿ : ಶಿವಗಿರಿ ರಾಜೇಶ್, ಕರಿಕೆ






