ಮಡಿಕೇರಿ ಡಿ.5 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.6 ಮತ್ತು 7 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ನಡೆಯಲಿದೆ. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ದಿನಗಳ ಕಾಲ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಡಿ.6 ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, ಕಳಸ ಪೂಜೆ, ಸಂಜೆ 6.30 ಗಂಟೆಗೆ ಮಹಾ ಸುದರ್ಶನ ಹೋಮ ನಡೆಯಲಿದೆ. ಡಿ.7 ರಂದು ಬೆಳಿಗ್ಗೆ 6.30 ಗಂಟೆಯಿಂದ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಕ್ಷೇತ್ರ ಪ್ರದಕ್ಷಿಣೆ, 12.30 ಗಂಟೆಗೆ…
ಲೇಖಕ: admin
ಮಡಿಕೇರಿ ಡಿ.5 NEWS DESK : ನೆರೆಯ ಬಾಂಗ್ಲಾ ದೇಶದಲ್ಲಿರುವ ಮತಾಂಧ ಸರ್ಕಾರ, ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಹಿಂದು ಹಿತರಕ್ಷಣಾ ಸಮಿತಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಸಿತು. ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಹಿಂದು ಕಾರ್ಯಕರ್ತರು ಬಾಂಗ್ಲಾದಲ್ಲಿನ ಹಿಂದು ಸಮುದಾಯದ ಮೇಲಿನ ದೌರ್ಜನ್ಯಗಳ ತಡೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ವಿಶ್ವ ಸಂಸ್ಥೆ ಸಮಸ್ಯೆಯನ್ನು ಬಗೆಹರಿಸಲು ಪ್ರಮುಖ ಪಾತ್ರ ವಹಿಸಬೇಕೆಂದು ಆಗ್ರಹಿಸಿದರು. ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದ ಬಜರಂಗದಳದ ದಕ್ಷಿಣ ಪ್ರಾಂತದ ಮಾಜಿ ಸಹ ಸಂಚಾಲಕ ಹಾಗೂ ಸಮಾಜ ಕಾರ್ಯಕರ್ತ ಮುರಳೀಕೃಷ್ಣ ಹಸಂತಡ್ಕ, ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಡೆಯಬೇಕು. ಸಮಾಜದ ಕಟ್ಟಕಡೆಯ ಹಿಂದುವಿಗೆ ಅನ್ಯಾಯವಾದರು ಇಡೀ ಹಿಂದು ಸಮಾಜ ದಿಟ್ಟ…
ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಿ ಬ್ಲಾಕ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಪೊಲೀಸ್ ಉಪ ಅಧೀಕ್ಷಕರಾದ ರವಿ, ಜಿಲ್ಲಾ ಮಕ್ಕಳ…
ಮಡಿಕೇರಿ ಡಿ.5 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಸರ್ವತೋಮುಖ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಗೊಲ್ಲ, ಜೋಗಿ ಹಾಗೂ ಹಾವಾಡಿಗರ ಜಾತಿಗಳು ಪ್ರಮುಖವಾಗಿದ್ದು, ಈ ಸಮಾಜಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡುವುದು. ಕಳೆದ ವರ್ಷ 30 ವಿದ್ಯಾರ್ಥಿಗಳಿಗೆ 2.13 ಲಕ್ಷ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಅರಿವು ಕಾರ್ಯಕ್ರಮದಡಿ 2021-22 ನೇ ಸಾಲಿನಲ್ಲಿ ಮಡಿಕೇರಿ ತಾಲ್ಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ.…
ADVT ::: ಆತ್ಮೀಯ ಗ್ರಾಹಕರೇ ::: ನಿಮ್ಮ ವಾಹನ ವಿಮೆಯನ್ನು ನವೀಕರಣಗೊಳಿಸಲು ನಾವು ನಿಮಗೆ ಸಹಾಯ ಮಾಡಲು ಬಯಸುತ್ತೇವೆ. ನಿಮ್ಮ ಎಲ್ಲಾ ವಾಹನಗಳ ನೋಂದಣಿ ಸಂಖ್ಯೆಗಳನ್ನು ನಮಗೆ ಈ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ. ನಾವು ಅವುಗಳ ರಿನೀವಲ್ ದಿನಾಂಕವನ್ನು ನಿಮಗೆ ಜ್ಞಾಪಿಸುತ್ತೇವೆ. ಎಲ್ಲಾ ಕಂಪೆನಿಗಳ ವಾಹನ ವಿಮೆಯನ್ನು ಗರಿಷ್ಠ ರಿಯಾಯಿತಿಯೊಂದಿಗೆ ಮತ್ತು ಕ್ಯಾಶ್ ಬ್ಯಾಕ್ ಜೊತೆಗೆ ರಿನಿವಲ್ ಮಾಡಿಕೊಡಲಾಗುವುದು. (ಸಂಪರ್ಕಿಸಿ : ಶ್ರೀ ಸಾಯಿ ಇನ್ಶುರೆನ್ಸ್ ಪಾಯಿಂಟ್, ಕೊಡವ ಸಮಾಜ ಕಾಂಪ್ಲೆಕ್ಸ್, ಮುಖ್ಯ ರಸ್ತೆ, ಮಡಿಕೇರಿ. 97429 16784, 97429 16784, 90367 80367)
ಮಡಿಕೇರಿ ಜೂ.13 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆಯ ಅಧಿಕಾರಿ ಅವರು ಡಿ.11 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವು ಡಿ.6 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಡಿ.5 NEWS DESK : ಮಾಯಮುಡಿ ಗ್ರಾಮದ ನಿವಾಸಿ, ನಿವೃತ್ತ ಸೈನಿಕ ಆಪಟ್ಟೀರ ಬಿ.ಸುಬ್ಬಯ್ಯ (ಮಣಿ-86) ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮಾಯಮುಡಿ ಗ್ರಾ.ಪಂ ಅಧ್ಯಕ್ಷರಾದ ಎ.ಎಸ್.ಟಾಟು ಮೊಣ್ಣಪ್ಪ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು (05-12-2024) ಸಂಜೆ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಡಿಕೇರಿ ಡಿ.4 NEWS DESK : ಭಾರತ ದೇಶ ವಿಶ್ವ ಮಟ್ಟದಲ್ಲಿ ಶಕ್ತಿಯುತವಾಗಿ ವಿಶೇಷ ಸ್ಥಾನಮಾನದಲ್ಲಿ ಗುರುತಿಸಿಕೊಂಡಿರುವುದಕ್ಕ್ಕೆ ಸಂವಿಧಾನವೇ ಮುಖ್ಯ ಕಾರಣವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಜ್ಯಶಾಸ್ತ್ರ ವಿಭಾಗವು 75 ವರ್ಷವನ್ನು ಪೂರೈಸುತ್ತಿರುವ ಸವಿನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ರಾಜ್ಯಶಾಸ್ತ್ರ ಸಂಘ ಹಾಗೂ ಮಾನವ ಹಕ್ಕುಗಳ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆಧುನಿಕ ಸಮಾಜದಲ್ಲಿ ಸಾಂವಿಧಾನಿಕ ಮೌಲ್ಯಗಳ ಪ್ರಸ್ತುತತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಜರ್ ಪ್ರೊ.ಬಿ.ರಾಘವ ಅವರು, ಸಂವಿಧಾನ ಜಾರಿಯಾಗಿ 75 ವರ್ಷಗಳೇ ಕಳೆದರು, ಯಾವುದೇ ನ್ಯೂನತೆಗಳು ಬಾರದಂತೆ ಜನರ ಅಗತ್ಯತೆಗೆ ತಕ್ಕಂತೆ ತಿದ್ದುಪಡಿಗಳನ್ನು ಮಾಡಿ ದೇಶದ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ನೋಡಿಕೊಳ್ಳಲಾಗಿದೆ. ಸಂವಿಧಾನ ನಾಗರೀಕ ಸಮಾಜಕ್ಕೆ ಮೂಲಭೂತ ಹಕ್ಕುಗಳೊಂದಿಗೆ ರಕ್ಷಣೆಯನ್ನು ನೀಡುತ್ತಾ ಬಂದಿದೆ ಮತ್ತು ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡಿದೆ…
ಬೆಂಗಳೂರು ಡಿ.5 NEWS DESK : ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು, ಆಗ ನಮ್ಮ ಸರ್ಕಾರದ ಆಶಯ ಈಡೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೌರಿಂಗ್ ಆಸ್ಪತ್ರೆ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ 500 ಬೆಡ್‌ಗಳ ನೂತನ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೌರಿಂಗ್ ಆಸ್ಪತ್ರೆ ಸುದೀರ್ಘ ಇತಿಹಾಸವನ್ನು ಹೊಂದಿರುವ ಆಸ್ಪತ್ರೆ. ಸಾವಿರಾರು ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸಿದೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಮತ್ತೊಂದು ವೈದ್ಯಕೀಯ ಕಾಲೇಜಿನ ಅಗತ್ಯವನ್ನು ಮನಗಂಡು ಮತ್ತೊಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ಮತ್ತೊಂದು ವೈದ್ಯಕೀಯ ಕಾಲೇಜು ಆದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಆಗಿ, ಸಾಮಾನ್ಯ ಜನರಿಗೆ, ಬಡವರಿಗೆ, ದಲಿತರಿಗೆ ಬಹಳಷ್ಟು ಉಪಯೋಗವಾಗುತ್ತದೆ ಎಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದೆ. ಈಗ ಸುಸಜ್ಜಿತವಾದ…






